NEWSಆರೋಗ್ಯದೇಶ-ವಿದೇಶ

ಜ.13ರೊಳಗೆ ಕೊರೊನಾಗೆ ಅಧಿಕೃತ ಲಸಿಕೆ: ರಾಜೇಶ್ ಭೂಷಣ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಕೋವಿಡ್‌ ಪಿಡುಗು ಇಡೀ ಜಗತ್ತನ್ನು ಕಾಡಲು ಆರಂಭಿಸಿದ ವರ್ಷದಲ್ಲೇ ಅದರ ವಿರುದ್ಧದ ಲಸಿಕೆ ಸಿದ್ಧವಾಗಿದೆ. ಎರಡು ಲಸಿಕೆಗಳನ್ನು ಹೊಂದಿರುವ ಭಾರತ, ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲು ಸಂಪೂರ್ಣವಾಗಿ ಸಜ್ಜಾಗಿದೆ.

ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಇದೇ ತಿಂಗಳ 13ರೊಳಗೆ ಕೋವಿಡ್‌ ಲಸಿಕೆಯ ತುರ್ತು ಬಳಕೆ ಆರಂಭಿಸಲು ಸಿದ್ಧ’ ಎಂದು ಹೇಳಿದ್ದಾರೆ.

ಆಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್‌ ಯುನಿವರ್ಸಿಟಿ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್‌ ಮತ್ತು ಭಾರತ್‌ ಬಯೊಟೆಕ್‌ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್‌ ಲಸಿಕೆಗಳ ತುರ್ತು ಬಳಕೆಗೆ ಭಾರತದ ಔಷಧ ಮಹಾನಿಯಂತ್ರಕರು ಭಾನುವಾರ ಅನುಮೋದನೆ ನೀಡಿದ್ದಾರೆ. ಹಾಗಾಗಿ, ಕೋವಿಡ್‌ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲು ಹಾದಿ ಸುಗಮವಾಗಿದೆ ಎಂದು ವಿವರಿಸಿದರು.

ಎರಡು ಲಸಿಕೆಗಳ ಬಳಕೆಗೆ ಜನವರಿ ಮೂರರಂದು ಅನುಮೋದನೆ ನೀಡಲಾಗಿದ್ದು, ತಾಲೀಮು ಹಂತದಲ್ಲಿನ ಪ್ರತಿಕ್ರಿಯೆ ಆಧಾರದ ಮೇಲೆ 10 ದಿನಗಳೊಳಗೆ ಕೋವಿಡ್-19 ಲಸಿಕೆ ಹೊರತರಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದರು.

ವಿಶ್ವದಲ್ಲಿಯೇ ಅಮೆರಿಕ ಹೊರತುಪಡಿಸಿ ಅತ್ಯಂತ ಹೆಚ್ಚಿನ ಕೊರೊನಾ ವೈರಸ್ ಪ್ರಕರಣಗಳನ್ನು ಹೊಂದಿರುವ ಭಾರತಕ್ಕೆ ತುಸು ನೆಮ್ಮದಿಯನ್ನುಂಟು ಮಾಡಿದೆ. ಮೊದಲ ಬಾರಿಗೆ 1 ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು, ಜೊತೆಗೆ ಎರಡು ಕೋಟಿ ಮುಂಚೂಣಿ ಕಾರ್ಯಕರ್ತರು, ಅವಶ್ಯಕ ಕಾರ್ಯಕರ್ತರು ಮತ್ತು 27 ಕೋಟಿ ವೃದ್ಧ , 50 ವರ್ಷಕ್ಕೂ ಮೇಲ್ಪಟ್ಟ ಹಿರಿಯ ವ್ಯಕ್ತಿಗಳಿಗೆ ನೀಡಲಾಗುತ್ತಿದೆ.

Leave a Reply

error: Content is protected !!
LATEST
BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ