NEWSನಮ್ಮರಾಜ್ಯರಾಜಕೀಯ

ರಾಜ್ಯದ ಆರ್ಥಿಕ ಸ್ಥಿತಿ ಚೇತರಿಕೆಯತ್ತ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಡಿಸೆಂಬರ್‌ನಲ್ಲಿ ಜಿಎಸ್‌ಟಿ (ಸರಕು ಮತ್ತು ಸೇವೆಗಳ ತೆರಿಗೆ) ಸಂಗ್ರಹ, ವಾಣಿಜ್ಯ, ಅಬಕಾರಿ, ಸಾರಿಗೆ, ನೋಂದಣಿ ಮತ್ತು ಮುದ್ರಾಂಕ ತೆರಿಗೆ ಸಂಗ್ರಹದಲ್ಲಿ ಹೆಚ್ಚಳವಾಗಿದೆ. ಈ ಮೂಲಕ ಕೊರೊನಾ ಸಂಕಷ್ಟದಿಂದ ಪಾತಾಳ ಮುಟ್ಟಿದ್ದ ರಾಜ್ಯದ ಆರ್ಥಿಕ ಸ್ಥಿತಿ ಚೇತರಿಸಿಕೊಂಡಿದೆ.

2020ರ ಇಡೀ ವರ್ಷದ ಹಿಂದಿನ ತಿಂಗಳುಗಳಿಗೆ ಹೋಲಿಸಿದರೆ ಡಿಸೆಂಬರ್‌ನಲ್ಲಿ ಅಧಿಕ ಪ್ರಮಾಣದಲ್ಲಿ ಆದಾಯ ಸಂಗ್ರಹವಾಗಿದೆ. ರಾಜ್ಯ ಸಹಜ ಸ್ಥಿತಿಯತ್ತ ಮರಳುತ್ತಿರುವುದಕ್ಕೆ ಇದು ಸೂಚನೆಯಾಗಿದೆ ಎಂದು ಹಣಕಾಸು ಇಲಾಖೆ ಮೂಲಗಳು ತಿಳಿಸಿವೆ.

ಲಾಕ್‌ಡೌನ್‌ ಅವಧಿಯಲ್ಲಿ ತೆರಿಗೆ ಸಂಗ್ರಹ ಶೂನ್ಯ ತಲುಪಿತ್ತು. ಆದರೆ, ಇಡೀ ವರ್ಷದಲ್ಲಿ ಡಿಸೆಂಬರ್‌ನಲ್ಲಿ ಅತಿ ಹೆಚ್ಚು ಸರಕು ಮತ್ತು ಸೇವೆಗಳ ತೆರಿಗೆ ಸಂಗ್ರಹವಾಗಿದೆ. 7,459.29 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಜೂನ್‌ನಲ್ಲಿ 7,452.39 ಕೋಟಿ ರೂ. ಸಂಗ್ರಹವಾಗಿತ್ತು. ಆ ಬಳಿಕ ಪುನಃ ತೆರಿಗೆ ಸಂಗ್ರಹ ಇಳಿಕೆಯಾಗಿತ್ತು. ಮಹಾರಾಷ್ಟ್ರ ಮತ್ತು ಗುಜರಾತ್‌ ನಂತರ ಸ್ಥಾನ ಕರ್ನಾಟಕದ್ದಾಗಿದೆ. ಶೇ 8 ರಷ್ಟು ಬೆಳವಣಿಗೆ ದರ ಇದೆ.

ಅಬಕಾರಿಯಲ್ಲೂ ಆದಾಯ ಇಡೀ ವರ್ಷಕ್ಕೆ ಹೋಲಿಸಿದರೆ ಉತ್ತಮ ಪ್ರಮಾಣದಲ್ಲಿದೆ. ಡಿಸೆಂಬರ್‌ನಲ್ಲಿ 2,436.34 ಕೋಟಿ ರೂ. ಬೊಕ್ಕಸಕ್ಕೆ ಬಂದಿದೆ. ವಾಣಿಜ್ಯ ಬಾಬ್ತಿನಿಂದ 7,459.29 ಕೋಟಿ ರೂ., ಮುದ್ರಾಂಕ ಮತ್ತು ನೋಂದಣಿಯಿಂದ 1,150 ಕೋಟಿ ರೂ. ಸಂಗ್ರಹವಾಗಿದೆ.

ಸಾರಿಗೆಯಿಂದ 553 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಅಚ್ಚರಿ ಎಂದರೆ, ಸಾರಿಗೆ ತೆರಿಗೆ ಸಂಗ್ರಹದಲ್ಲಿ 2019 ಡಿಸೆಂಬರ್‌ಗೆ ಹೋಲಿಸಿದರೆ, 2020 ರ ಡಿಸೆಂಬರ್‌ನಲ್ಲಿ ಅಧಿಕ ತೆರಿಗೆ ಸಂಗ್ರಹವಾಗಿದೆ. ವಾಹನ ನೋಂದಣಿ ಪ್ರಮಾಣವೂ ಗಣನೀಯವಾಗಿ ಏರಿಕೆ ಆಗಿರುವುದು ಮಾತ್ರವಲ್ಲದೆ, 6–7 ತಿಂಗಳಿಂದ ಸ್ಥಗಿತಗೊಂಡಿದ್ದ ಪರವಾನಗಿ ನೀಡಿಕೆಯೂ ಹೆಚ್ಚಳವಾಗಿರುವುದೂ ಪ್ರಮುಖ ಕಾರಣ ಎಂದು ಸಾರಿಗೆ ಇಲಾಖೆ ಮೂಲಗಳು ತಿಳಿಸಿವೆ.

Leave a Reply

error: Content is protected !!
LATEST
ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ