CrimeNEWSದೇಶ-ವಿದೇಶ

ತೀವ್ರಗೊಂಡ ಹಕ್ಕಿ ಜ್ವರ- ಕೇರಳದಲ್ಲಿ 50 ಸಾವಿರ ಪಕ್ಷಿಗಳ ಹತ್ಯೆಗೆ ನಿರ್ಧಾರ : ಕರ್ನಾಟಕದಲ್ಲೂ ಕಟ್ಟೆಚ್ಚರ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಹಕ್ಕಿ ಜ್ವರದಿಂದ ಕೇರಳದಲ್ಲಿ 50 ಸಾವಿರ ಪಕ್ಷಿಗಳ ಹತ್ಯೆಗೆ ನಿರ್ಧಾರ ಮಾಡಲಾಗಿದ್ದು, ಕರ್ನಾಟಕದ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಮೂಲಕ ಕೊರೊನಾ ರೂಪಾಂತರಿ ಇಡೀ ದೇಶವನ್ನೇ ಮತ್ತೊಮ್ಮೆ ಆತಂಕಕ್ಕೆ ಈಡುಮಾಡಿರುವ ಬೆನ್ನಲ್ಲೇ ಹಕ್ಕಿ ಜ್ವರ ಭೀತಿ ಎದುರಾಗಿದೆ.

ರಾಜಸ್ಥಾನ, ಮಧ್ಯಪ್ರದೇಶ, ಕೇರಳ, ಹಿಮಾಚಲಪ್ರದೇಶದಲ್ಲಿ ಎಚ್‌5ಎನ್‌1 ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ನೆರೆಯ ರಾಜ್ಯವಾದ ಕೇರಳದಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿರುವುದರಿಂದ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಕೂಡ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದ 2 ಜಿಲ್ಲೆಗಳಲ್ಲಿ ಹಕ್ಕಿ ಜ್ವರದ ಮುನ್ನೆಚ್ಚರಿಕಾ ಕ್ರಮವಾಗಿ 50 ಸಾವಿರ ಪಕ್ಷಿಗಳನ್ನು ಕೊಲ್ಲಲು ತೀರ್ಮಾನಿಸಲಾಗಿದೆ. ಹಾಗೇ, ಹಕ್ಕಿ ಜ್ವರವನ್ನು ಕೇರಳ ಸರ್ಕಾರ ರಾಜ್ಯ ವಿಪತ್ತು ಎಂದು ಘೋಷಿಸಿದೆ.

ಕೇರಳದಲ್ಲಿ ಸಾವಿರಾರು ಬಾತುಕೋಳಿಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಫಾರ್ಮ್​ಗಳಲ್ಲಿರುವ ಕೋಳಿಗಳನ್ನು ಸಾಯಿಸಲಾಗುತ್ತಿದೆ. ಕೇರಳದಲ್ಲಿ ಹಕ್ಕಿ ಜ್ವರ ಹೆಚ್ಚಾಗಿರುವುದರಿಂದ ಕರ್ನಾಟಕದ ಗಡಿ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಕರ್ನಾಟಕ ಸರ್ಕಾರ ಸೂಚಿಸಿದೆ.

ಈ ಜಿಲ್ಲೆಗಳ ಯಾವುದೇ ಭಾಗದಲ್ಲಿ ಹಕ್ಕಿಗಳು ಅಸಹಜವಾಗಿ ಸಾವನ್ನಪ್ಪಿದ್ದರೆ ಪಶು ವೈದ್ಯಾಧಿಕಾರಿಗಳು ತೆರಳಿ ತಪಾಸಣೆ ನಡೆಸಬೇಕು ಎಂದು ಆದೇಶಿಸಲಾಗಿದೆ. ಹಾಗೇ, ಈ ಕುರಿತು ಮಾಹಿತಿ ನೀಡುವಂತೆಯೂ ಸಾರ್ವಜನಿಕರಲ್ಲಿ ಕೋರಲಾಗಿದೆ.

ಕೇರಳದ ಅಲಪ್ಪುಳ, ಕೊಟ್ಟಾಯಂ ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ, ಜಿಲ್ಲಾಡಳಿತಗಳು ಕಂಟ್ರೋಲ್ ರೂಂಗಳನ್ನು ಆರಂಭಿಸಿವೆ. ಡಿಸೆಂಬರ್ ಕೊನೆಯ ವಾರದಲ್ಲಿ ಕೊಟ್ಟಾಯಂ ಮತ್ತು ಅಲಪ್ಪುಳ ಜಿಲ್ಲೆಗಳಲ್ಲಿ ಸಾಕಷ್ಟು ಬಾತುಕೋಳಿಗಳು ಸಾವನ್ನಪ್ಪಿದ್ದವು. ಅವುಗಳಲ್ಲಿ 8 ಬಾತುಕೋಳಿಗಳ ಸ್ಯಾಂಪಲ್ ಅನ್ನು ಭೂಪಾಲ್​ನ ಲ್ಯಾಬೋರೇಟರಿಗೆ ಕಳುಹಿಸಲಾಗಿತ್ತು. ಅವುಗಳಲ್ಲಿ 5 ಸ್ಯಾಂಪಲ್​ನಲ್ಲಿ ಹಕ್ಕಿ ಜ್ವರದ ವೈರಸ್ ಪತ್ತೆಯಾಗಿದೆ.

ಹೀಗಾಗಿ, ಕೊಟ್ಟನಾಡ್​ ಭಾಗದಲ್ಲಿ ನಿನ್ನೆ ಸಾವಿರಾರು ಪಕ್ಷಿಗಳನ್ನು ಸಾಯಿಸಲಾಗಿದೆ. ಅಲಪ್ಪುಳ ಜಿಲ್ಲೆಯ ನೆದುಮುಂಡಿ, ಥಕಳಿ, ಪಳಿಪ್ಪಾಡ್, ಕರುವಟ್ಟ ಭಾಗ ಹಾಗೂ ಕೊಟ್ಟಾಯಂ ಜಿಲ್ಲೆಯ ನೀಂದೂರ್​ ಭಾಗಗಳಲ್ಲಿ ಒಟ್ಟು 50 ಸಾವಿರಕ್ಕೂ ಹೆಚ್ಚು ಪಕ್ಷಿಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ.

ನೀಂದೂರ್​ನ ಬಾತುಕೋಳಿಯ ಫಾರ್ಮ್ ಒಂದರಲ್ಲೇ 1,500 ಬಾತುಕೋಳಿಗಳು ಸಾವನ್ನಪ್ಪಿವೆ. ಹಾಗೇ ಅಲಪ್ಪುಳ ಜಿಲ್ಲೆಯ ಕುಟ್ಟನಾಡ್ ಜಿಲ್ಲೆಯ ಕೆಲವು ಫಾರ್ಮ್​ಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಈಗಾಗಲೇ ಕೇರಳದ ಫಾರ್ಮ್​ಗಳಲ್ಲಿ 12,000 ಬಾತುಕೋಳಿಗಳು ಸಾವನ್ನಪ್ಪಿದ್ದು, ಹಕ್ಕಿಜ್ವರ ಹರಡಬಾರದೆಂಬ ಕಾರಣಕ್ಕೆ ಅವುಗಳ ಜೊತೆಗಿದ್ದ ಸುಮಾರು 36,000 ಬಾತುಕೋಳಿಗಳನ್ನು ಕೊಲ್ಲಲಾಗಿದೆ. ಬಾತುಕೋಳಿಗಳನ್ನು ಸಾಕಿದವರಿಗೆ ಸರ್ಕಾರ ಪರಿಹಾರ ನೀಡಲು ಮುಂದಾಗಿದೆ.

ಕೋಳಿ, ಟರ್ಕಿ, ಬಾತುಕೋಳಿ, ಕಾಗೆಗಳ ಮೂಲಕ ಹಕ್ಕಿ ಜ್ವರ ಹರಡುವ ಸಾಧ್ಯತೆ ಇದೆ. ಕೇರಳದಲ್ಲಿ ಈ ಮೊದಲು 2016ರಲ್ಲಿ ಭಾರೀ ಪ್ರಮಾಣದ ಹಕ್ಕಿ ಜ್ವರದ ಕೇಸುಗಳು ಪತ್ತೆಯಾಗಿದ್ದವು. ಇದೀಗ ಮತ್ತೆ ಹಕ್ಕಿಜ್ವರದ ಭೀತಿ ಶುರುವಾಗಿದೆ. ಹಿಮಾಚಲ ಪ್ರದೇಶದಲ್ಲಿ ಈಗಾಗಲೇ 2 ಸಾವಿರಕ್ಕೂ ಹೆಚ್ಚು ಹಕ್ಕಿಗಳು ಸಾವನ್ನಪ್ಪಿವೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೂಡ ಸಾವಿರಾರು ಕಾಗೆ, ಹಕ್ಕಿಗಳು ಸಾವನ್ನಪ್ಪಿವೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್