CRIMENEWS

ಬೆಂಗಳೂರು: ಕ್ಷಣಾರ್ಧದಲ್ಲಿ ಹೊತ್ತಿಉರಿದ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌: ಅದೃಷ್ಟವಶಾತ್‌ ಪ್ರಯಾಣಿಕರು ಪಾರು

ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದಂತಾಗಿದ್ದು, ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು, ಕಂಡಕ್ಟರ್‌ ಹಾಗೂ ಚಾಲಕರು ಸೇರಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನೊಂದವರಿಗೆ ಹೆಗಲು

ಬೆಂಗಳೂರು: ಚಲಿಸುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸೊಂದು ರಸ್ತೆ ಮಧ್ಯೆಯೇ ಹೊತ್ತಿ ಉರಿದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ಪ್ರಾಣಹಾನಿಯಾಗದೆ ದೊಡ್ಡ ಅನಾಹುತವೊಂದು ತಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ಜ್ಞಾನ ಭಾರತಿ ಮೆಟ್ರೋ ನಿಲ್ದಾಣ ಬಳಿ ನಡೆದಿದೆ.

ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ಮೈಸೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಈ KSRTC ಬಸ್, ಮೈಸೂರು ರಸ್ತೆಯ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಈ ವೇಳೆ ಬಸ್ ಇಂಜಿನ್ ಭಾಗದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ ತಕ್ಷಣ ಬಸ್ ನಿಲ್ಲಿಸಿ ಎಚ್ಚರಿಕೆಯ ಕ್ರಮ ಕೈಗೊಂಡಿದ್ದಾರೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದವರನ್ನು ಕೂಡಲೇ ಕೆಳಗಿಳಿಸಿದ್ದಾರೆ. ಬಸ್‌ ನೋಡನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಸಿಲುಕಿ ಸುಟ್ಟು ಭಸ್ಮವಾಗಿದೆ.

ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದಂತಾಗಿದ್ದು, ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು, ಕಂಡಕ್ಟರ್‌ ಹಾಗೂ ಚಾಲಕರು ಸೇರಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಇನ್ನು ಬೆಂಕಿಯಿಂದಾಗಿ ಬಸ್‌ನ ಮುಂಭಾಗ ಹಾಗೂ ಒಳ ಭಾಗ ಸುಟ್ಟು ಕರಕಲಾಗಿದೆ. ಅಗ್ನಿ ಅವಘಡದಿಂದ ದಟ್ಟ ಹೊಗೆ ಆವರಿಸಿದ್ದು, ಕೆಲ ಕಾಲ ಸುತ್ತಮುತ್ತಾ ಆತಂಕ ಸೃಷ್ಟಿಯಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
SIRಗೆ ತೆರಳುತ್ತಿದ್ದ VAO ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ: ಗ್ರಾಮಾಡಳಿತ ಲೆಕ್ಕಾಧಿಕಾರಿ ಸ್ಥಿತಿ ಗಂಭೀರ- ಆಸ್ಪತ್ರೆ ... KSRTC: ನಾಲ್ಕೂ ನಿಗಮಗಳ ಬಸ್‌ ಕಿಟಕಿಗಳಿಗೆ ರಾಡ್‌ ಅಳವಡಿಸಿ: ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಮೋಹನ್ ಕುಮಾರ್ ದಾನಪ... BMTC: ಕೆ.ಆರ್.ಸರ್ಕಲ್ ಬಳಿ ಹಿಂದಿನಿಂದ ವಜ್ರ ಬಸ್‌ಗೆ ಡಿಕ್ಕಿ ಹೊಡೆದ ಎಲೆಕ್ಟ್ರಿಕ್‌ ಬಸ್‌: 14ಕ್ಕೂ ಹೆಚ್ಚು ಮಂದಿಗೆ ಗ... ಬೆಂಗಳೂರು: ಕ್ಷಣಾರ್ಧದಲ್ಲಿ ಹೊತ್ತಿಉರಿದ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌: ಅದೃಷ್ಟವಶಾತ್‌ ಪ್ರಯಾಣಿಕರು ಪಾರು ಗೃಹ ಜ್ಯೋತಿಗೆ ಜಾತಿ ವಿವರ ನೀಡುವುದು ಕಡ್ಡಾಯವಲ್ಲ: ಸ್ಪಷ್ಟನೆ ನೀಡಿದ ಬೆಸ್ಕಾಂ 4ಸಾರಿಗೆ ನಿಗಮಗಳ ನೌಕರರಿಗೆ ಶೇ.12.5ರಷ್ಟು ಮೂಲ ವೇತನ ಹೆಚ್ಚಳ ಜುಲೈ ವೇತನದಲ್ಲಿ ಅನುಷ್ಠಾನ: KSRTC ಎಂಡಿ ಅಧಿಕೃತ ಆದೇಶ ಹೊಸ EPS ಪಿಂಚಣಿ ಯೋಜನೆ ಜಾರಿ: ಕನಿಷ್ಠ ಪಿಂಚಣಿ 7500ರೂ. ನಿರೀಕ್ಷೆಯಲ್ಲಿದ್ದ ನೌಕರರಿಗೆ ನಿರಾಸೆ- ಸಿಕ್ಕಿದ್ದು ಅದೇ ಒಂ... ಬಾಡಿಗೆದಾರರಿಗೆ ಗೃಹಜ್ಯೋತಿ' ತಂದ ಟೆನ್ಷನ್​: ಇನ್ನು ಮುಂದೆ ಸಿಗಲ್ವಾ ಫ್ರೀ ಕರೆಂಟ್‌? ಜುಲೈ: ಕರೆಂಟ್‌ ಮೀಟರ್ ರೀಡಿಂಗ್ ಇರಲ್ಲ -ಸರಾಸರಿ ಬಿಲ್‌ SMS ಮೂಲಕ ಬರುತ್ತದೆ! KSRTC: 'ಸಾರಿಗೆ ಮಿತ್ರ' ಆಪ್ ದುರುಪಯೋಗ- ಕರ್ತವ್ಯಕ್ಕೆ ಹಾಜರಾಗದೆ ಸಹೋದ್ಯೋಗಿಗೆ ಫೋನ್‌ ಕೊಟ್ಟು ಹಾಜರಿ ಪಡೆಯುತ್ತಿರುವ...