Breaking NewsNEWSನಮ್ಮರಾಜ್ಯ

ಬೆಂಗಳೂರಿನಲ್ಲಿ ಭಾರೀ, ರಾಜ್ಯದ ಹಲವೆಡೆ ತುಂತುರು ಮಳೆ: ಇನ್ನೂ ನಾಲ್ಕು ದಿನ ಮುಂದುವರಿವ ಸಾಧ್ಯತೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಸುರಿಯುತ್ತಿರುವ ಮಳೆ ಇನ್ನೂ ಕಡಿಮೆಯಾಗಿಲ್ಲ. ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ. ಜ. 8ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಕೂಡ ಇಂದು ಹಗುರ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ಅಲೆಗಳ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.

ಮುಂದಿನ ನಾಲ್ಕು‌ ದಿನಗಳ ಕಾಲ ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ‌ ಜನವರಿ 10ರವರೆಗೆ ಭಾರೀ ಮಳೆ ಮುಂದುವರಿಯಲಿದೆ ಎಂದುಎಂದು ಬೆಂಗಳೂರು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.

ಬೆಂಗಳೂರಿನ ಹನುಮಂತನಗರ, ಬಸವನಗುಡಿ, ಜಯನಗರ, ಕಾರ್ಪೋರೇಷನ್ ವೃತ್ತ, ಕೆ.ಆರ್. ಮಾರ್ಕೆಟ್, ಡಾಲರ್ಸ್ ಕಾಲೋನಿ, ಮಲ್ಲೇಶ್ವರಂ, ಬನಶಂಕರಿ, ಹೆಬ್ಬಾಳ, ಆರ್.ಟಿ. ನಗರ, ರೇಸ್ ಕೋರ್ಸ್ ರಸ್ತೆ ಸೇರಿ ಹಲವೆಡೆ ಮಳೆ ಸುರಿಯುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮೋಡ ಕವಿದ ವಾತಾವರಣ ಇತ್ತು. ಇಂದು ಮತ್ತೆ ಮಳೆ ಆರಂಭವಾಗಿದೆ.

ಇನ್ನು ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ಹಲವೆಡೆ 4 ದಿನ ಮಳೆ ಸುರಿಯುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. 3 ದಿನಗಳ ಹಿಂದೆ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರಿನಲ್ಲಿ ಮಳೆಯಾಗಿತ್ತು. ಮುಂದಿನ ಮೂರು ದಿನ ಮಳೆಯ ವಾತಾವರಣ ಮುಂದುವರೆಯಲಿದ್ದು, ಮಲೆನಾಡು, ಕೊಡಗು, ಹಾಸನದಲ್ಲಿ ಹಳದಿ ಅಲರ್ಟ್​ ಘೋಷಣೆ ಮಾಡಲಾಗಿದೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್