NEWSನಮ್ಮಜಿಲ್ಲೆರಾಜಕೀಯ

ಎಸ್‌ಐ ವರ್ಗಾವಣೆಗೆ 30 ಲಕ್ಷ ರೂ. ಬೇಡಿಕೆ ಇಟ್ಟ ಸಿಪಿವೈ: ಎಚ್‌ಡಿಕೆ ಆರೋಪ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ರಾಮನಗರ : ತಾಲೂಕಿನಲ್ಲಿ ಸಬ್​ ಇನ್ಸ್​ಪೆಕ್ಟರ್​ ವರ್ಗಾವಣೆಗೆ 30 ಲಕ್ಷ ಬೇಡಿಕೆಯನ್ನು ಇಲ್ಲಿನ ಬಿಜೆಪಿ ಶಾಸಕರು ಇಡುತ್ತಿದ್ದಾರೆ. ಇಂತಹ ಜೀವನ ಮಾಡುವ ಬದಲು ರಾಜಕೀಯ ಬಿಟ್ಟು ಮನೆಯಲ್ಲಿಯೇ ಇರಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿಕಾರಿದರು.

ನಗರದಲ್ಲಿ ಮಾತನಾಡಿದ ಅವರು, ತಾಲೂಕಿನ ಅಧಿಕಾರಿಗಳನ್ನು ವರ್ಗಾವಣೆ ಮಾಡಿಸುವುದಕ್ಕೆ ಲೆಟರ್ ಹೆಡ್‌ನ ಆ್ಯಕ್ಷನ್‌ಗೆ ಹಾಕಿಕೊಂಡು ಕೂತಿದ್ದಾರೆ. ಈ ರೀತಿ ಹಣ ಸಂಪಾದನೆ ಮಾಡಲು ಅವಶ್ಯಕತೆ ಇದ್ದೀಯಾ‌‌ ಎಂದು ಪ್ರಶ್ನೆ ಮಾಡಿದರು.

ಅಧಿಕಾರಿಗಳ ವರ್ಗಾವಣೆಗೆ ದುಡ್ಡು ಕೇಳಿದರೆ, ಕಡೆಗೆ ಅಧಿಕಾರಿಗಳು ಜನರಿಂದಲೇ ಸುಲಿಗೆ ಮಾಡಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ರೀತಿ ಹಗಲು ದರೋಡೆ ಮಾಡುವ ಅವಶ್ಯಕತೆ ಇದೆಯಾ. ಈ ರೀತಿ ಹಣ ಲೂಟಿ ಮಾಡುವ ಬದಲು ಮನೆಯಲ್ಲಿ ಇದ್ದು ಗೌರವಯುತ ಜೀವನ ನಡೆಸುವುದು ಒಳ್ಳೆಯದು ಎಂದು ಎಂಎಲ್​ಸಿ ಸಿಪಿ ಯೋಗೇಶ್ವರ್​ ಸಲಹೆ ನೀಡಿದರು.

ಪಂಚಾಯಿತಿ ಚುನಾವಣೆಯಲ್ಲಿ ಏನೋ ಮಾಡುತ್ತೇನೆ ಎಂದು ನನ್ನ ವಿರುದ್ಧ ಸವಾಲ್​ ಹಾಕಿದರು. ಆದರೆ, ಏನೂ ಮಾಡಲಿಕ್ಕೆ ಆಗಲಿಲ್ಲ. ನಾನು ಇಂದಲ್ಲ. ನಾಳೆ ಮುಂತ್ರಿಯಾಗುತ್ತೇನೆ ಎಂದು ಹೇಳುತ್ತಾನೆ ಇದ್ದಾರೆ. ಇದೇ ರೀತಿ ಎಷ್ಟು ದಿನ ಹೇಳಿ ಜನರನ್ನು ಸೆಳೆಯಲು ಸಾಧ್ಯ ಎಂದು ಪರೋಕ್ಷವಾಗಿ ಕುಟುಕಿದರು.

ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್​ ನಾಯಕರು ಕೂಡ ಉತ್ತಮ ಕೆಲಸ ಮಾಡಿದ್ದಾರೆ. ಆದರೆ, ಈ ಚುನಾವಣಾ ಫಲಿತಾಂಶಕ್ಕೂ, ವಿಧಾನಸಭಾ ಚುನಾವಣಾ ಫಲಿತಾಂಶಕ್ಕೂ ವ್ಯತ್ಯಾಸವಿದೆ. ಇದರಲ್ಲಿ ನಾವು ಗೆದ್ದೆವೂ ಎಂದು ಬೀಗಲು ಸಾಧ್ಯವಿಲ್ಲ. ಕೆಲವೆಡೆ ಕಾಂಗ್ರೆಸ್​ ಹಣಬಲದಿಂದ ಗೆದ್ದಿದೆ. ಆದರೆ, ಜಿಲ್ಲೆಯ ಜನ ಹಣ ಬಲಕ್ಕಿಂತ ವ್ಯಕ್ತಿಗೆ ಬೆಂಬಲ ನೀಡುವವರು. ಈ ಬಾರಿಯ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ 25 ಕ್ಕೂ ಹೆಚ್ಚು ಕಡೆಗಳಲ್ಲಿ ಅಧಿಕಾರ ಹಿಡಿಯುವ ಸಾಧ್ಯತೆ ಹೆಚ್ಚಾಗಿದೆ ಎಂದರು.

ಕಾಂಗ್ರೆಸ್-ಬಿಜೆಪಿಗಿಂತಲೂ ಜೆಡಿಎಸ್ ಶಕ್ತಿ ದೊಡ್ಡದು
ಜನವರಿ 15 ರ ಸಂಕ್ರಾಂತಿ ನಂತರ ಪಕ್ಷ ಸಂಘಟನೆ ಮಾಡುತ್ತೇವೆ. ಅಲ್ಲಿಂದಲೇ ನಮ್ಮ ಪಕ್ಷದ ಚಟುವಟಿಕೆಗಳು ರಾಜ್ಯಾದ್ಯಂತ ಪ್ರಾರಂಭವಾಗುತ್ತವೆ. ಜೊತೆಗೆ ಈ ಬಾರಿ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಪಂಚಾಯಿತಿ ಚುನಾವಣೆಯಲ್ಲಿ ಒಳ್ಳೆಯ ಸಾಧನೆ ಮಾಡಿದೆ. ಮುಂದೆ ಜೆಡಿಎಸ್ ಪಕ್ಷದ ಶಕ್ತಿ ಗೊತ್ತಾಗುತ್ತದೆ ಎಂದರು.

ಇನ್ನು ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ ಹೋಗುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರು ಹೋದರೂ ಜೆಡಿಎಸ್‌ಗೆ ತೊಂದರೆಯಿಲ್ಲ.ನಾವು ಯಾರ ಮನೆ ಬಾಗಿಲಿಗೂ ಹೋಗಿಲ್ಲ. ಆದರೆ ಕಾಂಗ್ರೆಸ್-ಬಿಜೆಪಿಯವರು ನಮ್ಮವರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಹಾಗಾಗಿ ಜೆಡಿಎಸ್ ಪಕ್ಷದ ಶಕ್ತಿ ಏನು ಎಂದು ಇದರಿಂದಲೇ ತಿಳಿಯಲಿದೆ. ಬಿಜೆಪಿ-ಕಾಂಗ್ರೆಸ್​ಗೆ ಶಕ್ತಿ ಇಲ್ಲದ ಕಾರಣ ನಮ್ಮ ಅಭ್ಯರ್ಥಿಗಳ ಸೆಳೆಯುವ ಯತ್ನ ನಡೆಸಿದ್ದಾರೆ ಎಂದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು