NEWSನಮ್ಮರಾಜ್ಯ

ವಿದ್ಯುತ್ ಕಂಪನಿಗಳ ಖಾಸಗೀಕರಣ ವಿಚಾರದಲ್ಲಿ ಕೊಟ್ಟ ಮಾತಿನಂತೆ ನಡೆದ ಸಿಎಂಗೆ KPTCL ನೌಕರರಿಂದ ಸನ್ಮಾನ

ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ಕೋರಿ ಟಾಟಾ ಪವರ್ ಕಂಪನಿಯು ಕೆಇಆರ್‌ಸಿ (KERC)ಗೆ ಸಲ್ಲಿಸಿದ್ದ ತನ್ನ ಅರ್ಜಿಯನ್ನು ಶುಕ್ರವಾರ ಹಿಂಪಡೆದುಕೊಂಡಿದೆ.

ನೊಂದವರಿಗೆ ಹೆಗಲು

ಬೆಂಗಳೂರು: ರಾಜ್ಯದ ಯಾವುದೇ ವಿದ್ಯುತ್ ಕಂಪನಿಗಳನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಲು ಈ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೃಢವಾಗಿ ಘೋಷಿಸಿ ಅದಕ್ಕೆ ಬದ್ಧವಾಗಿ ನಿಲುವು ತೆಗೆದುಕೊಂಡಿದ್ದಕ್ಕೆ  ಒಕ್ಕೂಟ ಹಾಗೂ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಸಿಎಂ ಅವರನ್ನು ಸನ್ಮಾನಿಸಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (KPTCL) ಎಲ್ಲ ನೌಕರರು ಮತ್ತು ಅಧಿಕಾರಿಗಳ ಒಕ್ಕೂಟದ ವತಿಯಿಂದ ಇತತ್ತೀಚೆಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಈ ಭರವಸೆ ನೀಡಿದ್ದರು.

ಅದರಂತೆ ಸರ್ಕಾರ ಈ ಕಟ್ಟುನಿಟ್ಟಿನ ನಿಲುವಿನ ಬೆನ್ನಲ್ಲೇ, ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ಕೋರಿ ಟಾಟಾ ಪವರ್ ಕಂಪನಿಯು ಕೆಇಆರ್‌ಸಿ (KERC)ಗೆ ಸಲ್ಲಿಸಿದ್ದ ತನ್ನ ಅರ್ಜಿಯನ್ನು ಶುಕ್ರವಾರ ಹಿಂಪಡೆದುಕೊಂಡಿದೆ.

ಹೀಗಾಗಿ ಸರ್ಕಾರದ ಈ ಐತಿಹಾಸಿಕ ನಿರ್ಧಾರ ಮತ್ತು ನೌಕರರ ಹಿತರಕ್ಷಣೆಯನ್ನು ಶ್ಲಾಘಿಸಿ, ಒಕ್ಕೂಟ ಹಾಗೂ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ವತಿಯಿಂದ ಮುಖ್ಯಮಂತ್ರಿ ಡಿಕೆಶಿ ಅವರನ್ನು ನಿನ್ನೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಬಸವಣ್ಣ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ದೇಸಾಯಿ, ಹಿರಿಯ ಉಪಾಧ್ಯಕ್ಷ ರಾಜೋಜಿ ರಾವ್ ಹಾಗೂ ಇತರೆ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

Deva
the authorDeva

Leave a Reply

error: Content is protected !!
Latest news
ಅಭ್ಯರ್ಥಿಗಳಿಗೆ ನಿರಾಳ: ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ಜು.8ರ ವರೆಗೆ ವಿಸ್ತರಣೆ! ಮಹಾರಾಷ್ಟ್ರದಲ್ಲಿ ವರುಣನ ಅಬ್ಬರಕ್ಕೆ 5ಮಂದಿ ಸಾವು, ನಲುಗಿದ ಜನತೆ, ಸಮುದ್ರದಂತೆ ಕಂಡುಬಂದ ರಸ್ತೆಗಳು BMTC: ಜುಲೈ 6ರಂದು ನೌಕರರ Pay fixation ಸಂಬಂಧ ಕೇಂದ್ರ ಕಚೇರಿಯಲ್ಲಿ ಸಭೆ ನಿಗದಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿಚಾರದಲ್ಲಿ ಕೊಟ್ಟ ಮಾತಿನಂತೆ ನಡೆದ ಸಿಎಂಗೆ KPTCL ನೌಕರರಿಂದ ಸನ್ಮಾನ SIRಗೆ ತೆರಳುತ್ತಿದ್ದ VAO ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ: ಗ್ರಾಮಾಡಳಿತ ಲೆಕ್ಕಾಧಿಕಾರಿ ಸ್ಥಿತಿ ಗಂಭೀರ- ಆಸ್ಪತ್ರೆ ... KSRTC: ನಾಲ್ಕೂ ನಿಗಮಗಳ ಬಸ್‌ ಕಿಟಕಿಗಳಿಗೆ ರಾಡ್‌ ಅಳವಡಿಸಿ: ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಮೋಹನ್ ಕುಮಾರ್ ದಾನಪ... BMTC: ಕೆ.ಆರ್.ಸರ್ಕಲ್ ಬಳಿ ಹಿಂದಿನಿಂದ ವಜ್ರ ಬಸ್‌ಗೆ ಡಿಕ್ಕಿ ಹೊಡೆದ ಎಲೆಕ್ಟ್ರಿಕ್‌ ಬಸ್‌: 14ಕ್ಕೂ ಹೆಚ್ಚು ಮಂದಿಗೆ ಗ... ಬೆಂಗಳೂರು: ಕ್ಷಣಾರ್ಧದಲ್ಲಿ ಹೊತ್ತಿಉರಿದ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌: ಅದೃಷ್ಟವಶಾತ್‌ ಪ್ರಯಾಣಿಕರು ಪಾರು ಗೃಹ ಜ್ಯೋತಿಗೆ ಜಾತಿ ವಿವರ ನೀಡುವುದು ಕಡ್ಡಾಯವಲ್ಲ: ಸ್ಪಷ್ಟನೆ ನೀಡಿದ ಬೆಸ್ಕಾಂ 4ಸಾರಿಗೆ ನಿಗಮಗಳ ನೌಕರರಿಗೆ ಶೇ.12.5ರಷ್ಟು ಮೂಲ ವೇತನ ಹೆಚ್ಚಳ ಜುಲೈ ವೇತನದಲ್ಲಿ ಅನುಷ್ಠಾನ: KSRTC ಎಂಡಿ ಅಧಿಕೃತ ಆದೇಶ