NEWSನಮ್ಮಜಿಲ್ಲೆರಾಜಕೀಯ

ಪಕ್ಷ ವಿರೋಧಿ ಚಟುವಟಿಕೆ ಮಾಡಿದರೆ ಪಕ್ಷದಿಂದ ಉಚ್ಛಾಟಿಸಲಿ: ಜಿಟಿಡಿ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಜೆಡಿಎಸ್‌ನಿಂದ ಉಚ್ಛಾಟನೆ ಮಾಡಲಿ ನಾನು ಅದನ್ನ ಸ್ವಾಗತ ಮಾಡುತ್ತೇನೆ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿದ್ದಾರೆ.

ಇಂದು ಬೆಂಗಳೂರಿನ ಜೆ.ಪಿ. ಭವನದಲ್ಲಿ ಜೆಡಿಎಸ್​ ಪಕ್ಷದ ಸಭೆ ಆಯೋಜಿಸಲಾಗಿತ್ತು. ಆದರೆ ಸಭೆಗೆ ಹೋಗದೆ ಮೈಸೂರಿನಲ್ಲೇ ಈ ಹೇಳಿಕೆ ನೀಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಇನ್ನು ಪಕ್ಷ ಉಚ್ಛಾಟನೆ ಮಾಡುವವರ ಪಟ್ಟಿಯಲ್ಲಿ ನಾನಿರುವುದಿಲ್ಲ. ಏಕೆಂದರೆ ನಾನು ಯಾವುದೇ ಪಕ್ಷ ವಿರೋಧಿ ಕೆಲಸ ಮಾಡಿಲ್ಲ. ಮತ್ತೆ ಜೆಡಿಎಸ್​ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸುವ ಸಲುವಾಗಿ ಶ್ರಮಿಸಿದ್ದೇವೆ. ಹೀಗಾಗಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ನಾನು ಜೆಡಿಎಸ್‌ನಲ್ಲಿ ಒಂದೆ ಒಂದು ಸಣ್ಣ ತಪ್ಪನ್ನು ಮಾಡಿಲ್ಲ. ಯಾರು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೋ ಅವರನ್ನು ಉಚ್ಛಾಟನೆ ಮಾಡಲಿ. ನಾನೇನು ದೇವೇಗೌಡರು, ಕುಮಾರಸ್ವಾಮಿ ಅಥವಾ ರೇವಣ್ಣ ವಿರುದ್ಧ ಮಾತನಾಡಿದ್ದೀನಾ? ಅದ್ಯಾವ ಪಕ್ಷ ವಿರೋಧಿ ಕೆಲಸ ಮಾಡಿದ್ದೀನಿ ತೋರಿಸಲಿ ಎಂದಿದ್ದಾರೆ.

ಕಳೆದ ಚುನಾವಣೆಯಲ್ಲಿ ನನ್ನ ಮಗನಿಗೆ ಹುಣಸೂರು ಟಿಕೆಟ್ ಕೊಡಲಿಲ್ಲ. ಆದರೂ, ನಾವು ಎಚ್.ವಿಶ್ವನಾಥ್ ಪರ ಪ್ರಚಾರ ಮಾಡಿ ಗೆಲ್ಲಿಸಿದ್ದೆವು. ಯಾರಿಗೋ ಅನುಕೂಲ‌ ಮಾಡಿಕೊಡಲು ಜೆಡಿಎಸ್‌ನಿಂದ ವೀಕ್ ಕ್ಯಾಂಡಿಡೆಟ್ ಹಾಕಿಸಿಲ್ಲ. ಪಾರ್ಟಿಯಲ್ಲೆ ಇದ್ದುಕೊಂಡು ಪಕ್ಷಕ್ಕೆ ದ್ರೋಹ ಮಾಡಿಲ್ಲ. ನಾನು ಮೌನವಾಗಿದ್ದೇನೆ. ಹಾಗಂತ ನನ್ನನ್ನು ಯಾಕೇ ಟಾರ್ಗೆಟ್ ಮಾಡ್ತೀರಾ?. ಕುಮಾರಸ್ವಾಮಿ ಸಿಎಂ ಆಗಬೇಕು ಅಂತ ಕೂಗು ಆರಂಭವಾಗಿದ್ದು ಮೈಸೂರಿನಿಂದಲೇ ಎಂದು ತಿಳಿಸಿದ್ದಾರೆ.

ಮೈಸೂರಿನಿಂದಲೇ ಪಕ್ಷ ಶುಭ ಶುದ್ಧಿ ಕೊಡುವ ಚಿಂತನೆ ಮಾಡಿರಬಹುದು. ಇಲ್ಲಿಂದ ಆರಂಭಿಸಿದ್ರೆ ಪಕ್ಷ ಸಂಘಟನೆ ಆಗುವ ಉದ್ದೇಶದಿಂದ ಮಾತನಾಡಿರಬಹುದು. 1994ರಲ್ಲಿ ದೇವೇಗೌಡರ ರಾಜಕೀಯ ಬದಲಾವಣೆ ಆಗಿದ್ದು, ಎರಡನೇ ಬಾರಿ ಕುಮಾರಸ್ವಾಮಿ ಸಿಎಂ ಆಗಬೇಕೆಂದು ಹೇಳಿದ್ದು ಸಹ ಮೈಸೂರಿನಿಂದಲೇ. ಹಾಗಾಗಿ ಅವರಿಗೆ ಎಲ್ಲ ಕೆಲಸ ಮೈಸೂರಿನಿಂದ ಆರಂಭವಾದ್ರೆ ಶುಭ ಅಂತ ಅನ್ನಿಸಿದೆ. ನಾಯಕರ ನಿರ್ಧಾರವನ್ನು ನಾನು ಸ್ವಾಗತ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ