CrimeNEWSಸಿನಿಪಥ

ಯುವರಾಜ್ ವಂಚನೆ ಪ್ರಕರಣ: ನಟಿ ರಾಧಿಕಾ ಸಿಸಿಬಿ ಕಚೇರಿಗೆ ಹಾಜರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಅಮೀಷವೊಡ್ಡಿ ಹಲವರಿಗೆ ಕೋಟಿ ಕೋಟಿ ರೂ. ವಂಚಿಸಿರುವ ಯುವರಾಜ್ ಅಲಿಯಾಸ್‌ ಸ್ವಾಮಿ ವಂಚನೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಶುಕ್ರವಾರ ಸಿಸಿಬಿ ಕಚೇರಿಗೆ ಹಾಜರಾಗಿದ್ದಾರೆ.

ಮನೆಯಿಂದ ಹೊರಡುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಟಿಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ತೆರಳುತ್ತಿದ್ದೇನೆ. ವಿಚಾರಣೆ ಪೂರ್ಣಗೊಂಡ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

ಆರ್‌ಎಸ್‌ಎಸ್ ಮುಖಂಡ ಎಂದು ಹೇಳಿಕೊಂಡು, ವಿವಿಧ ನಿಗಮಗಳ ಅಧ್ಯಕ್ಷ ಸ್ಥಾನ ಕೊಡಿಸುತ್ತೇನೆ, ರಾಜ್ಯದ ರಾಜ್ಯಪಾಲರನ್ನಾಗಿ ಮಾಡುತ್ತೇನೆ ಎಂದೆಲ್ಲಾ ಹೇಳಿ ಹಲವರಿಂದ ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪಿ ಯುವರಾಜ್ ನನ್ನು ಕೆಲ ದಿನಗಳ ಹಿಂದಷ್ಟೇ ಬಂಧಿಸಲಾಗಿದೆ.

ಆರೋಪಿ ಯುವರಾಜ್ ವಿಚಾರಣೆ ವೇಳೆ ತನ್ನ ಖಾತೆಯಿಂದ ರಾಧಿಕಾ ಕುಮಾರಸ್ವಾಮಿ ಖಾತೆಗೆ ಲಕ್ಷಾಂತರ ರೂ. ಸಂದಾಯವಾಗಿರುವುದು ತಿಳಿಸಿದ್ದ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್‌ ಅವರ ವಿಚಾರಣೆ ನಡೆಸಿರುವ ಸಿಸಿಬಿ. ರಾಧಿಕಾ ಕುಮಾರಸ್ವಾಮಿ ಅವರಿಗೂ ನಿನ್ನೆಯಷ್ಟೇ ಸಮನ್ಸ್ ನೀಡಿತ್ತು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ