NEWSನಮ್ಮಜಿಲ್ಲೆರಾಜಕೀಯ

ಮಂತ್ರಿಯಾಗುವ ತಿರುಕನ ಕನಸು ಕಾಣುತ್ತಿದ್ದಾರೆ ವಿಶ್ವನಾಥ್ : ಸಾರಾ ಮಹೇಶ್‌ ತಿರುಗೇಟು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಜೆಡಿಎಸ್‌ ಮತ್ತು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಅವರ ನಡುವಿನ ವಾಕ್ಸಮರ ಮತ್ತೆ ಮುಂದುವರಿದಿದೆ. ಕೆಲವು ದಿನದ ಹಿಂದೆ ಮೈಸೂರಿನಲ್ಲಿ ವಿಶ್ವನಾಥ್‌ ಜೆಡಿಎಸ್‌ ಟೀಕಿಸಿದ ಸುದ್ದಿ ಜೆಡಿಎಸ್‌ ನಾಯಕರನ್ನು ಕೆರಳಿಸಿದೆ. ವಿಶ್ವನಾಥ್‌ ಅವರ ಹೇಳಿಕೆಗೆ ಜೆಡಿಎಸ್‌ ಶಾಸಕ ಸಾರಾ ಮಹೇಶ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೊಂಬಾಯಿ ಮಿಠಾಯಿ ವಿಶ್ವನಾಥ್ ಅವರ ನಾಲಿಗೆಗೆ ಇನ್ನೊಬ್ಬರನ್ನು ವ್ಯಕ್ತಿಗತವಾಗಿ ಜರಿಯುವ ಹಕ್ಕಾದರೂ ಇದೆಯಾ? ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ ಎಂದು ವಿಶ್ವನಾಥ್ ಅವರಿಗೆ ಸಾರಾ ಮಹೇಶ್‌ ತಿರುಗೇಟು ನೀಡಿದ್ದಾರೆ.

ಬೌದ್ಧಿಕ ದಿವಾಳಿತನಕ್ಕೆ ತುತ್ತಾದವರು ಮಾತ್ರ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ವ್ಯಕ್ತಿಗತ ಲೇವಡಿಗಿಳಿಯುತ್ತಾರೆ. ಅವರು ಎಂದೋ ಬಫೂನ್‌ ಆಗಿರುವುದನ್ನು ಮರೆತಿರುತ್ತಾರೆ.
ಬೊಂಬಾಯಿ ಮಿಠಾಯಿ ರುಚಿ ಸವೆದಿದ್ದು ಮಂತ್ರಿಯಾಗುವ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಕಿಡಿಕಾರಿದರು.

ತಾನು ಘನವಾಗದೆ ಘನವೇನು ಬಂತು. ಹರುಕುಬಾಯಿ, ಕೊಳೆತ ಮೆದುಳು ಮಂತ್ರಿಗಿರಿಯ ಘನತೆಗೆ ಊಳಿಡುತಿದೆ. ಎಂದೋ ಭಿಕ್ಷುಕನಾಗಿರುವ ವಿಶ್ವನಾಥ್ ಎರಡು ಬಾರಿ ಮುಖ್ಯಮಂತ್ರಿಯಾದವರ ಬಗ್ಗೆ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತ ಇಟ್ಟುಕೊಳ್ಳದಿದ್ದರೆ ತಕ್ಕಶಾಸ್ತಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇತ್ತೀಚೆಗೆ ಮಾಧ್ಯಮದ ಮುಂದೆ ಬಹಿರಂಗ ಹೇಳಿಕೆ ನೀಡಿದ್ದ ವಿಶ್ವನಾಥ್‌, ಜೆಡಿಎಸ್‌ ಪಕ್ಷ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವಿನ ಮಗುವಿದ್ದಂತೆ. ಯಾರು ವಿಠಾಯಿ ತೋರಿಸುತ್ತಾರೋ ಅವರ ಕಡೆಗೆ ಹೋಗುತ್ತದೆ ಎಂದು ಹೇಳಿದ್ದರು. ಅದಕ್ಕೆ ಪ್ರತಿಯಾಗಿ ಜೆಡಿಎಸ್‌ ನಾಯಕ ಸಾರಾ ಮಹೇಶ್‌ ಟ್ವಿಟರ್‌ ಮೂಲಕ ತಿರುಗೇಟು ಕೊಟ್ಟಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ