NEWSನಮ್ಮರಾಜ್ಯರಾಜಕೀಯ

ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣಕ್ಕೂ ಕತ್ತರಿ ಹಾಕಿದ ಸರ್ಕಾರ: ವಿಧಾನಸೌಧ ಬಂದ್‌ ಚಿಂತನೆಯಲ್ಲಿ ನೌಕರರು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಸೋಂಕಿನ ನೆಪದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿದೆ ಎಂಬ ಕಾರಣ ನೀಡಿ ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿರುವುದಕ್ಕೆ ನೌಕರರರು ತೀವ್ರವಾಗಿ ಕಿಡಿಕಾಡಿದ್ದಾರೆ.

ಕಲೆ ಹಾಗೂ ಸಾಹಿತ್ಯ, ನಟನೆ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದಂತೆ ಹಲವಾರು ನಿಯಮಗಳನ್ನು ಹೇರಿರುವ ಸರ್ಕಾರದ ನೂತನ ನಿಯಮದ ವಿರುದ್ಧ ವಿಧಾನಸೌಧದ ಸರ್ಕಾರಿ ನೌಕರರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಸರ್ಕಾರದ ವಿರುದ್ಧ ಇನ್ನು ಕೆಲವೇ ದಿನಗಳಲ್ಲಿ ವಿಧಾನಸೌಧ ಬಂದ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇದರ ಆರಂಭದಂತೆ ಜನವರಿ 12 ರಂದು ಎಲ್ಲಾ ಸರ್ಕಾರಿ ನೌಕರರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸುವುದಾಗಿಯೂ ತಿಳಿಸಿದ್ದಾರೆ.

ಸರ್ಕಾರದ ಹೊಸ ನಿಯಮಗಳು ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಂಡಂತಾಗಿದೆ. ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ವೇತನ ಕಡಿತ ಮಾಡಿದ್ದನ್ನು ಒಪ್ಪಿಕೊಂಡಿದ್ದೆವು. 2020ರಲ್ಲಿ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸಿತ್ತು. ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸುಮ್ಮನಿದ್ದೆವು. ಆದರೀಗ ಸರ್ಕಾರ ಶೇ.65-70ರಷ್ಟು ಆದಾಯವನ್ನು ಗಳಿಸುತ್ತಿದೆ. ಈಗಲೂ ಗಳಿಕೆ ರಜೆ ನಗದೀಕರಣವನ್ನೇಕೆ ರದ್ದು ಮಾಡಬೇಕು ಎಂದು ಕಿಡಿಕಾರಿದ್ದಾರೆ.

ಈ ಸಂಬಂಧ ಜನವರಿ 12 ರಂದು ಕಪ್ಪುಪಟ್ಟಿ ಧರಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದೇವೆ. ಈ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರಿಗೆ ಆದೇಶ ಹಿಂಪಡೆಯುವಂತೆ ಮನವಿ ಮಾಡಲಾಗುತ್ತದೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ ತಿಳಿಸಿದ್ದಾರೆ.

ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಲ್ಲಿ 3000ಕ್ಕೂ ಹೆಚ್ಚು ನೌಕರರು ಕೆಲಸ ಕಾರ್ಯನಿರ್ವಹಿಸುತ್ತಿದ್ದಾರೆ. ಕಡತಗಳ ಕಾರ್ಯಗಳನ್ನು ಸ್ಥಗಿತಗೊಳಿಸಿದ್ದೇ ಆದರೆ, ಅದು ಎಲ್ಲಾ ಇಲಾಖೆ ಹಾಗೂ ಇಡೀ ರಾಜ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಳ್ಳಲಿದ್ದೇವೆ. ನೌಕರರ ಸಲಹೆ ಹಾಗೂ ನಿಯಮಗಳನ್ನು ಸರಿಪಡಿಸುವ ಕುರಿತು ಪ್ರತಿಕ್ರಿಯೆಗಳನ್ನು ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.

ಇನ್ನು ನಮ್ಮ ಆಗ್ರಹಗಳಿಗೆ ಸರ್ಕಾರ ಕಿವಿ ಕೊಡದೇ ಹೋದಲ್ಲಿ, ಮುಂಬರುವ ದಿನಗಳಲ್ಲಿ ವಿಧಾನಸೌಧ ಬಂದ್ ಮಾಡಲಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ