NEWSದೇಶ-ವಿದೇಶವಿಜ್ಞಾನಸಿನಿಪಥ

ಉದ್ಯಮಿ ಅಂಬಾನಿ 5ಜಿ ನೆಟ್‌ವರ್ಕ್‌ ಹಿಂದೆ ದೊಡ್ಡ ಸ್ಕ್ಯಾಂ ಇರಬಹುದು: ನಟ ದರ್ಶನ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಚಿತ್ರಮಂದಿರಗಳನ್ನು ಪೂರ್ಣವಾಗಿ ತೆರೆಯದೇ ಇರುವ ಹಿಂದೆ ಅಥವಾ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನಿರಾಕರಿಸುತ್ತಿರುವ ಹಿಂದೆ ಮುಖೇಶ್ ಅಂಬಾನಿಯ ಕೈವಾಡ ಇರಬಹುದು ಎಂದು ದರ್ಶನ್ ಅನುಮಾನ ವ್ಯಕ್ತಪಡಿಸಿದ್ದಾರೆ.

ಕಳೆದ ನಾಲ್ಕು ದಿನಗಳ ಹಿಂದೆಯೇ ಜ.10ರಂದು ಬೆಳಗ್ಗೆ 11 ಗಂಟೆಗೆ ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡುವುದಾಗಿ ತಿಳಿಸಿದ್ದ ನಟ ದರ್ಶನ್, ಅದರಂತೆ ಇಂದು ಲೈವ್‌ನಲ್ಲಿ ಮಾತನಾಡಿ, ಮಾರ್ಕೆಟ್‌ನಲ್ಲಿ, ಮದುವೆಗಳಲ್ಲಿ ಜನರು ಸೇರುತ್ತಿದ್ದಾರೆ. ಇನ್ನು ಶಾಲೆ, ಕಾಲೇಜುಗಳು ಸಹ ತೆರೆದಿವೆ. ಎಲ್ಲೆಡೆ ಜನರು ಗುಂಪು ಸೇರುತ್ತಿದ್ದಾರೆ. ಆದರೆ ಚಿತ್ರಮಂದಿರಗಳಲ್ಲಿ ಶೇ.100 ಪ್ರೇಕ್ಷಕರಿಗೆ ಅವಕಾಶ ನಿರಾಕರಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಶಾಲಾ-ಕಾಲೇಜುಗಳು ತೆರೆದಿವೆ. ಮದುವೆ ಮಂಟಪದಲ್ಲಿ ಸಾವಿರಾರು ಮಂದಿ ಸೇರುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಜನ ಓಡಾಡಿಕೊಂಡು ಇದ್ದಾರೆ. ಎಲ್ಲ ಕಡೆ ಜನರಿದ್ದಾರೆ. ಆದರೆ, ಚಿತ್ರಮಂದಿಗಳನ್ನು ಮಾತ್ರ ತೆರೆಯುತ್ತಿಲ್ಲ. ಏಕೆಂದರೆ, ಇದರ ಹಿಂದೆ 5ಜಿ ಉದ್ದೇಶವಿದೆ ಎಂದು ಹೇಳಿದರು.

ಇದೇ ವೇಳೆ ಮುಖೇಶ್ ಅಂಬಾನಿ ವಿರುದ್ಧ ಗಂಭೀರ ಆರೋಪ ಮಾಡಿದ ದರ್ಶನ್ ಅವರು, ಅಂಬಾನಿ ಅವರು 5ಜಿ ಆರಂಭಿಸಿದ್ದಾರೆ. ಇದೊಂದು ದೊಡ್ಡ ಹಗರಣವೆಂದು ನನಗನಿಸುತ್ತಿದೆ ಎಂದು ತಿಳಿಸಿದ್ದಾರೆ.

ಚಿತ್ರಮಂದಿರಗಳಲ್ಲಿ ಸಿನಿಮಾ ನೋಡಿದರೆ 5ಜಿ ಉಪಯೋಗಕ್ಕೆ ಬರುವುದಿಲ್ಲ. ಹೀಗಾಗಿ ಮೊಬೈಲ್​ಗಳಲ್ಲಿ 5ಜಿ ರನ್​ ಆಗಲು ಈ ರೀತಿ ಮಾಡುತ್ತಿರಬಹುದು. ಇದು ನನ್ನ ಅನಿಸಿಕೆಯಾಗಿದೆ. ಆದರೆ, ಯಾವುದೇ ಕಾರಣಕ್ಕೂ ನಾವು ಓಟಿಟಿಗೆ ಸಿನಿಮಾಗಳನ್ನು ಕೊಡುವುದಿಲ್ಲ. ಏನೇ ಆದರೂ ನಮ್ಮ ಸಿನಿಮಾ ಮಾತ್ರ ಚಿತ್ರಮಂದಿರದಲ್ಲೇ ಬರುತ್ತದೆ. ಚಿತ್ರವನ್ನು  ಚಿತ್ರಮಂದಿರದಲ್ಲಿ ಶೇ.50 ಅಲ್ಲ ಶೇ.25ರಷ್ಟು ಜನರು ಬಂದರೂ ಜನರು ಚಿತ್ರಮಂದಿರಲ್ಲಿ ಸಿನಿಮಾ ನೋಡಲಿ ಎಂದು ಸ್ಪಷ್ಟಪಡಿಸಿದ್ದಾರೆ.

https://www.facebook.com/NimmaPreethiyaDasaDarshan/videos/472197813768115/

ಕೆಲವು ದಿನಗಳ ಹಿಂದಷ್ಟೆ ತಮಿಳುನಾಡು ಸರ್ಕಾರ ಚಿತ್ರಮಂದಿರಗಳಲ್ಲಿ ಶೇ.100 ಪ್ರೇಕ್ಷಕರು ಕುಳಿತು ಸಿನಿಮಾ ವೀಕ್ಷಣೆ ಮಾಡಬಹುದು ಎಂದು ಆದೇಶ ಹೊರಡಿಸಿತು. ಆದರೆ ಇದಕ್ಕೆ ಕೇಂದ್ರ ಸರ್ಕಾರ ತಕರಾರು ತೆಗೆದು, ಕೇಂದ್ರ ಸರ್ಕಾರ ನೀಡಿರುವ ಆದೇಶಗಳನ್ನೇ ರಾಜ್ಯ ಸರ್ಕಾರ ಪಾಲಿಸಬೇಕು, ತಮಿಳುನಾಡು ಸರ್ಕಾರ ನೀಡಿರುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಸೂಚಿಸಿತು. ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದರು.

ಇನ್ನು ತಮಿಳುನಾಡು ಸರ್ಕಾರದ ನಂತರ ಇದೀಗ ಪಶ್ಚಿಮ ಬಂಗಾಳ ಸರ್ಕಾರವೂ ಸಹ ರಾಜ್ಯದಲ್ಲಿನ ಚಿತ್ರಮಂದಿರಗಳು ಶೇ.100 ಪ್ರೇಕ್ಷಕರಿಗೆ ಅವಕಾಶ ನೀಡಬಹುದು ಎಂಬ ಆದೇಶ ನೀಡಿದೆ. ಪಶ್ಚಿಮ ಬಂಗಾಳದ ಮೇಲೂ ಕೇಂದ್ರ ಕೆಂಗಣ್ಣು ಬೀರುವ ಸಾಧ್ಯತೆ ಇದೆ ಎಂದು ಹೇಳಿದರು.

ಕೇರಳ ರಾಜ್ಯದಲ್ಲಿ ಇನ್ನೂ ಚಿತ್ರಮಂದಿರಗಳು ತೆರೆದಿಲ್ಲ. ಆದರೆ, ಹಲವು ರಾಜ್ಯಗಳಲ್ಲಿ ಚಿತ್ರಮಂದಿರಗಳು ತೆರೆದಿವೆಯಾದರೂ ಬಹುತೇಕ ಎಲ್ಲ ಕಡೆ ಶೇ.50 ಪ್ರೇಕ್ಷಕರಿಗೆ ಮಾತ್ರವೇ ಸಿನಿಮಾ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಸಿನಿಮಾಗೆ ಕೋಟಿ ಕೋಟಿ ಬಂಡವಾಳ ಹೂಡಿರುವವ ಸ್ಥಿತಿ ಏನಾಗುವುದು ಎಂಬ ಬಗ್ಗೆಯೂ ಕೇಂದ್ರ ಸರ್ಕಾರ ಯೋಚಿಸಬೇಕಿದೆ ಎಂದು ಅಭಿಪ್ರಾಯ ಹಂಚಿಕೊಂಡರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...