CrimeNEWSನಮ್ಮರಾಜ್ಯ

ಕಾರು ಅಪಘಾತದಲ್ಲಿ ಕೇಂದ್ರ ಸಚಿವ ಶ್ರೀಪಾದ ನಾಯ್ಕ್ ಪತ್ನಿ ಸೇರಿ ಇಬ್ಬರು ಮೃತ

ವಿಜಯಪಥ ಸಮಗ್ರ ಸುದ್ದಿ

ಅಂಕೋಲಾ: ಕೇಂದ್ರ ಸಚಿವ ಶ್ರೀಪಾದ ನಾಯ್ಕ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಶ್ರೀಪಾದ ನಾಯ್ಕ್ ಅವರ ಪತ್ನಿ ವಿಜಯಾ ಮತ್ತು ಆರ್.ಎಸ್.ಎಸ್ ಪ್ರಚಾರಕ ದೀಪಕ್ ದುಬೆ ದಾರುಣವಾಗಿ ಮೃತಪಟ್ಟಿದ್ದಾರೆ.

ಸೋಮವಾರ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಚಂದಗುಳಿ ಘಂಟೆ ಗಣಪತಿ ದೇವಾಲಯದಲ್ಲಿ ಪತ್ನಿ ಸಮೇತ ಪೂಜೆ ಸಲ್ಲಿಸಿದ್ದ ಸಚಿವರು, ತಮ್ಮ ಇನೋವಾ ಕಾರಿನಲ್ಲಿ ಗೋಕರ್ಣದಲ್ಲಿ ತಂಗಲೆಂದು ಯಲ್ಲಾಪುರ- ಹೊಸಕಂಬಿ- ಮಾದನಗೇರಿ ಒಳರಸ್ತೆಯಲ್ಲಿ ಹೊರಟಿದ್ದರು. ಈ ವೇಳೆ ಕಾರಿನಲ್ಲಿ ಪತ್ನಿ ವಿಜಯಾ ನಾಯಕ, ಆಪ್ತ ಕಾರ್ಯದರ್ಶಿ ದೀಪಕ್ ದುಬೆ, ಆಪ್ತ ಸಾಯಿಕಿರಣ್ ಶೆಟಿಯಾ, ಗನ್ ಮ್ಯಾನ್ ತುಕಾರಾಮ್ ಪಾಟೀಲ್ ಇದ್ದರು. ಕಾರನ್ನು ಚಂದನ್ ಓಡಿಸುತ್ತಿದ್ದರು.

ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯ್ಕ್ ಅವರ ಕಾರು ಹೆದ್ದಾರಿ ಬದಲು ಕಡಿಮೆ ದೂರ ಇರುವ ಕಾರಣ ಒಳ ರಸ್ತೆಯಲ್ಲಿ ಸಂಚರಿಸಿದ್ದು ಹಾಗೂ ಅರ್ಧಂಬರ್ಧ ರಸ್ತೆ ಕಾಮಗಾರಿಯಿಂದಾಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ನಡೆದ ಈ ಅಪಘಾತದಲ್ಲಿ ಸಚಿವರ ಪತ್ನಿ ವಿಜಯಾ ಮಾರ್ಗಮಧ್ಯೆ ಹಾಗೂ ಆರ್.ಎಸ್.ಎಸ್ ಪ್ರಚಾರಕ ದೀಪಕ್ ದುಬೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಯಲ್ಲಾಪುರ-ಅಂಕೋಲಾ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಆಗಮಿಸಬೇಕಾಗಿದ್ದವರು, ಕಡಿಮೆ ದೂರದ ಹಿನ್ನೆಲೆಯಲ್ಲಿ ಯಲ್ಲಾಪುರ ಹೊಸಕಂಬಿ ಗೋಕರ್ಣದ ಕಿರಿದಾದ ರಸ್ತೆಯಲ್ಲಿ ಆಗಮಿಸಿದ್ದರು. ಆ ವೇಳೆ ಬೆಂಗಾವಲು ವಾಹನ ಹಿಂದೆಯೇ ಇತ್ತು ಎನ್ನಲಾಗಿದೆ. ಆದರೆ ಮಾರ್ಗಮಧ್ಯೆ ಹೊಸಕಂಬಿ ಬಳಿ ರಸ್ತೆ ಕಾಮಗಾರಿ ಅರೆಬರೆಯಾಗಿತ್ತು. ವೇಗವಾಗಿ ಬಂದ ಕಾರಿನ ಗಾಲಿಗಳು ರಸ್ತೆ ಒಂದು ಬದಿ ಹೊಂಡಕ್ಕೆ ಬಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ ಬಿದ್ದು ಮರಕ್ಕೆ ಬಡಿದಿದೆ.

ಕೂಡಲೇ ಸಚಿವರನ್ನು ಹಾಗೂ ಅವರ ಪತ್ನಿಯನ್ನು ಬೆಂಗಾವಲು ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಚಿವ ಶ್ರೀಪಾದ್ ಎಡಗೈಗೆ ಪೆಟ್ಟಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಗೋವಾದ ಬಾಂಬೋಲಿಗೆ ಸಾಗಿಸಲಾಗಿದೆ.

ಗಂಭೀರ ಗಾಯಗೊಂಡಿದ್ದ ಗನ್‌ಮ್ಯಾನ್ ತುಕಾರಾಮ ಪಾಟೀಲ್, ಚಾಲಕ ಚಂದನ್ ಹಾಗೂ ಸಾಯಿಕಿರಣ ಶೆಟಿಯಾ ಎಂಬುವವರಿಗೆ ಅಂಕೋಲಾ ಖಾಸಗಿ ಆಸ್ಪತ್ರೆಯಿಂದ ಕಾರವಾರ ಜಿಲ್ಲಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಸ್ತೆ ಅರ್ಧಂಬರ್ಧ ಕಾಮಗಾರಿಯಲ್ಲಿದ್ದರೂ ಅಲ್ಲಿ ಯಾವುದೇ ರೀತಿಯ ಬ್ಯಾರಿಕೇಡ್ ಆಗಲೀ ಸೂಚನೆಗಳನ್ನು ಹಾಕಲಾಗಿರಲಿಲ್ಲ. ಘಟನೆ ಬಳಿಕ ಕೆಲ ಸ್ಥಳೀಯರು ಹಾಗೂ ಸಂಘಟನೆಗಳು ಅವೈಜ್ಞಾನಿಕ ರಸ್ತೆ ನಿರ್ಮಾಣವೆಂದು ಪ್ರತಿಭಟನೆ ನಡೆಸುತ್ತಿದ್ದಾರೆ.

ದುರ್ಘಟನೆ ಸಂಭವಿಸುವ ದಿನ ಶ್ರೀಪಾದ್ ನಾಯ್ಕ್ ಅವರು, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗಂಟೆ ಗಣಪತಿ‌ ದೇವಾಲಯಕ್ಕೆ ತೆರಳಿ‌ ವಿಶೇಷ ಪೂಜೆ ಸಲ್ಲಿಸಿದ್ರು. ಅಲ್ಲಿಯೆ ಕೆಲಹೊತ್ತು ತಂಗಿ ಧಾರ್ಮಿಕ ಕಾರ್ಯ ನೆರವೇರಿಸಿದರು, ಬಳಿಕ ಇನ್ನೊಂದು ಖಾಸಗಿ ಕಾರ್ಯಕ್ರಮದಲ್ಲಿ‌ ಭಾಗಿಯಾಗಿ‌ ಹೋಮ‌-ಹವನ, ಈಶ್ವರ‌ ದೇವಾಲಯಕ್ಕೆ ತೆರಳಿ ಪೂಜೆ ನೆರವೇರಿಸಿದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ