NEWSನಮ್ಮರಾಜ್ಯರಾಜಕೀಯ

ಇನ್ನೂ ಅಂತಿಮವಾಗಿಲ್ಲ ಸಚಿವ ಸಂಪುಟ ಸೇರುವ 7ಶಾಸಕರ ಹೆಸರು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದ ಬಹುನಿರೀಕ್ಷಿತ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ ಮಧ್ಯಾಹ್ನ 3.50ರ ಶುಭ ಮುಹೂರ್ತದಲ್ಲಿ 5+2 ಸೂತ್ರದಡಿ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ.

ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಒಟ್ಟಾರೆ 7 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆಗಳಿದ್ದು, ಅಂತಿಮವಾಗಿ ಯಾರು ಸಂಪುಟ ಸೇರ್ಪಡೆಯಾಗಲಿದ್ದಾರೆಂಬುದರ ಸ್ಪಷ್ಟ ಮಾಹಿತಿ ಇನ್ನೂ ಹೊರಬಿದ್ದಿಲ್ಲ.

ಇನ್ನು ಅಬಕಾರಿ ಸಚಿವ ಎಚ್.ನಾಗೇಶ್, ಶಶಿಕಲ ಜೊಲ್ಲೆ ಮೂವರು ಸಚಿವರನ್ನು ಸಂಪುಟದಿಂದ ಕೈಬಿಡುವ ಪ್ರಯತ್ನಗಳು ನಡೆದಿದೆ ಎನ್ನಲಾಗಿದೆ.

ಒಬ್ಬರನ್ನು ಕೈಬಿಡಬೇಕಾಗಿ ಬರಬಹುದು ಎಂಬ ಮಾತನ್ನು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಬಹಿರಂಗವಾಗಿ ಹೇಳಿದ್ದಾರೆ. ಆದರೆ, ಇದಕ್ಕೆ ನಾಗೇಶ್ ಅವರ ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸ್ವತಃ ನಾಗೇಶ್ ಅವರೂ ಕೂಡ ತಮ್ಮನ್ನು ಸಂಪುಟದಿಂದ ಕೈಬಿಡದಂತೆ ಮುಖ್ಯಮಂತ್ರಿಗಳ ಬಳಿ ಪರಿ ಪರಿಯಾಗಿ ಮನವಿ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ.

ಈ ನಡುವೆ ಇಂದು ಬೆಳಗ್ಗೆ 11.30ಕ್ಕೆ ಯಡಿಯೂರಪ್ಪ ಅವರು ಸಚಿವ ಸಂಪುಟ ಸಭೆ ಕರೆದಿದ್ದು, ಬಳಿಕ ನಾಗೇಶ್ ಅಥವಾ ಬೇರೆ ಯಾವುದಾದರೂ ಸಚಿವರ ರಾಜೀನಾಮೆ ಪಡೆಯುವ ನಿರ್ಧಾರ ಹೊರ ಬೀಳಲಿದೆ ಎಂದು ಮೂಲಗಳು ತಿಳಿಸಿವೆ.

ಇನ್ನು ಅನ್ಯ ಪಕ್ಷಗಳಿಂದ ವಲಸೆ ಬಂದು ಸರ್ಕಾರ ರಚಿಸಲು ನೆರವಾಗಿರುವ ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರ್ ಅವರಿಗೆ ಸಚಿವ ಸ್ಥಾನ ನಿಶ್ಚಿತವೆಂದೇ ಹೇಳಲಾಗುತ್ತಿದೆ.

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಮಾತನಾಡಿ, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಸಿಪಿ ಯೋಗೇಶ್ವರ್, ಆರ್.ಶಂಕರ್, ಎನ್.ಮುನಿರತ್ನ ಹಾಗೂ ಎಂಟಿಬಿ ನಾಗರಾಜ್ ಅವರಿಗೆ ಸಂಪುಟದಲ್ಲಿ ಸ್ಥಾನ ದೊರೆಯಲಿದೆ ಎಂದು ಹೇಳಿದ್ದಾರೆ.

ಈ ನಡುವೆ ಶಾಸಕ. ಎಸ್.ಅಂಗಾರ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ಹಾಗೂ ಹಾಲಪ್ಪ ಆಚಾರ್ ಅವರ ಹೆಸರುಗಳೂ ಕೂಡ ಕೇಳಿ ಬರುತ್ತಿದೆ.

ಮೂಲಗಳ ಪ್ರಕಾರ ಮುನಿರತ್ನ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ಕುರಿತು ಇನ್ನೂ ಸ್ಪಷ್ಟ ಮಾಹಿತಿಗಳು ಲಭ್ಯವಾಗಿಲ್ಲ. ಆದರೆ, ನಿನ್ನೆ ಮಧ್ಯಾಹ್ನದಿಂದ ರಾತ್ರಿಯವರೆಗೂ ಮುಖ್ಯಮಂತ್ರಿಗಳ ಕಚೇರಿ ಬಳಿ ಮುನಿರತ್ನ ಅವರು ಇರುವುದು ಕಂಡು ಬಂದಿದೆ.

ಉಮೇಶ್ ಕತ್ತಿ ಹಾಗೂ ನಿರಾಣಿಯವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ಕುರಿತು ಪಕ್ಷದ ಸಹಮತವಿಲ್ಲದೇ ಇದ್ದರೂ ಯಡಿಯೂರಪ್ಪ ಅವರು ಹೈಕಮಾಂಡ್ ಜೊತೆಗೆ ಈ ಬಗ್ಗೆ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ