CrimeNEWSನಮ್ಮಜಿಲ್ಲೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ವೀಕ್ಷಕ ಮೃತ: ಹಲವು ಅನುಮಾನ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕರ್ತವ್ಯ ನಿರತ ಅರಣ್ಯ ವೀಕ್ಷಕರೊಬ್ಬರು ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ. ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಸರಗೂರು ತಾಲೂಕಿನ ನೆಟ್ಕಾಲ್‌ಹುಂಡಿ ಗ್ರಾಮದ ರವಿ (27) ಮೃತರು. ಇವರಿಗೆ ಪತ್ನಿ, ಮೂವರು ಮಕ್ಕಳಿದ್ದಾರೆ. ಅರಣ್ಯದೊಳಗೆ ಸೋಮವಾರ ರಾತ್ರಿ ಸೇವೆ ಸಲ್ಲಿಸುತ್ತಿದ್ದ ತನ್ನ ಪತಿ ಕಾಡಾನೆ ತುಳಿತಕ್ಕೆ ಬಲಿಯಾಗಿದ್ದಾರೆಂದು ರವಿ ಪತ್ನಿ ಅಂಬಿಕಾ ಸರಗೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆದರೆ, ಅರಣ್ಯ ಇಲಾಖೆ ಅಧಿಕಾರಿಗಳು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂದು ಹೇಳುತ್ತಿದ್ದಾರೆ.

ಇದರಿಂದ ಸಾವಿನ ಬಗ್ಗೆ ಅನುಮಾನಗಳು ಇದ್ದು, ಸರಗೂರು ಠಾಣೆ ಪೋಲೀಸರು ತನಿಖೆ ನಡೆಸುತಿದ್ದಾರೆ.

ಕಳೆದ 8 ವರ್ಷಗಳಿಂದ ಅರಣ್ಯ ವೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ರವಿ ಪ್ರಸ್ತುತ ಮೊಳೆಯೂರು ವಲಯ ಅರಣ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಪಾಳಿಯ ಕೆಲಸವಿದ್ದ ಕಾರಣ ಸೋಮವಾರ ಸಂಜೆ 5 ಗಂಟೆಗೆ ನೆಟ್ಕಾಲ್‌ಹುಂಡಿ ಗ್ರಾಮದ ಮನೆಯಿಂದ ಹೊರಟಿದ್ದರು.

ರಾತ್ರಿ 8.30ರ ವೇಳೆ ಪತ್ನಿಗೆ ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ. ಅಲ್ಲದೆ ಮಧ್ಯರಾತ್ರಿ 12ರ ವೇಳೆಗೆ ರವಿ ತನ್ನ ಭಾವನಿಗೂ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಆದರೆ, ಅರಣ್ಯಾಧಿಕಾರಿಗಳ ಪ್ರಕಾರ ರವಿಯ ಮೇಲೆ ಕಾಡಾನೆ ದಾಳಿ ನಡೆಸಿರುವ ಯಾವುದೇ ಕುರುಹು ಇಲ್ಲ.

ಅರಣ್ಯಾಧಿಕಾರಿಗಳು ಪತಿಯ ಸಾವನ್ನು ಹೃದಯಾಘಾತವೆಂದು ಸುಳ್ಳು ಹೇಳುತ್ತಿದ್ದಾರೆ. ರವಿ ಆರೋಗ್ಯವಾಗಿದ್ದರು. ಮಂಗಳವಾರ ಮುಂಜಾನೆ ಕಾಡಾನೆ ದಾಳಿ ನಡೆಸಿ ತನ್ನ ಪತಿಯನ್ನು ಕೊಂದಿದೆ ಎಂದು ಪತ್ನಿ ಅಂಬಿಕಾ ಹೇಳುತ್ತಿದ್ದಾರೆ.

ಎಚ್.ಡಿ.ಕೋಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಲಾಗಿದೆ. ಈ ಕುರಿತು ಸರಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತಿದ್ದಾರೆ.

Leave a Reply

error: Content is protected !!
LATEST
ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ