NEWSನಮ್ಮರಾಜ್ಯರಾಜಕೀಯ

ಸಚಿವ ಸ್ಥಾನ ವಂಚಿತರ ಆಕ್ರೋಶ- ವಚನ ಭ್ರಷ್ಟ ಯಡಿಯೂರಪ್ಪ: ಎಚ್‌.ವಿಶ್ವನಾಥ್‌ ಸೇರಿ ಹಲವರು ಕಿಡಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಚನಭ್ರಷ್ಟರಾಗಿದ್ದಾರೆ ಎಂದು ಎಂಎಲ್‌ಸಿ ವಿಶ್ವನಾಥ್‌ ಸೇರಿ ಮೂಲ ಬಿಜೆಪಿ ಶಾಸಕರು ಕಿಡಿಕಾರಿದ್ದಾರೆ.

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಇರೊದು 17 ಜನ ವಲಸಿಗರಿಂದ ಎಂಬುದನ್ನು ಈಗ ಸಿಎಂ ಮರೆತಿದ್ದಾರೆ. ಅವರು ನಾವು 17 ಜನ ಪಕ್ಷ ಬಿಟ್ಟು ಬಂದಾಗ ನೀಡಿದ ಭರವಸೆಯನ್ನು ಮರೆತು ಬಿಟ್ಟಿದ್ದಾರೆ ಎಂದು ಆಕ್ರೋಶದಿಂದಲೇ ಸುದ್ದಿಗಾರರ ಮುಂದೆ ಪ್ರತಿಕ್ರಿಯೆ ನೀಡಿದರು.

ಇನ್ನುಆರ್‌ಆರ್‌ ನಗರ ಶಾಸಕ ಮುನಿರತ್ನ ಅವರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳದ ಸಿಎಂ ಮಾತು ತಪ್ಪಿ ವಚನ ಭ್ರಷ್ಟರಾಗಿದ್ದಾರೆ ಎಂದು ಆರ್‌ಆರ್‌ ನಗರ ಮತದಾರರು ಅದರಲ್ಲೂ ಶಾಸಕ ಮುನಿರತ್ನ ಅಭಿಮಾನಿಗಳು ಮತ್ತು ಬೆಂಬಲಿಗರು ಸಿಟ್ಟುಗೊಂಡಿದ್ದಾರೆ.

ಉಪಚುನಾವಣೆ ವೇಳೆ ನಡೆಸಿದ ಮತ ಪ್ರಚಾರದಲ್ಲಿ ಮುನಿರತ್ನ ಅವರನ್ನು ನೀವು ಒಬ್ಬ ಶಾಸಕನಾಗಿ ಆಯ್ಕೆ ಮಾಡುತ್ತಿಲ್ಲ ಬದಲಿಗೆ ಒಬ್ಬ ಸಚಿವನನ್ನು ಆಯ್ಕೆ ಮಾಡುತ್ತಿದ್ದೀರಿ ಎಂದು ಬಹಿರಂಗವಾಗಿಯೇ ಸಚಿವ ಸ್ಥಾನ ನೀಡುವ ಭರವಸೆ ನೀಡಿದ ಬಿಎಸ್‌ವೈ ಇಂದು ಆ ಮಾತನ್ನು ಉಳಿಸಿಕೊಂಡಿಲ್ಲ ಎಂಬ ಅಸಮಾಧಾನವನ್ನು ಹೊರಹಾಕಿದ್ದಾರೆ.

ಇನ್ನು ಬಿಜೆಪಿಯ ವಲಸಿಗ ಮತ್ತು ಮೂಲ ಶಾಸಕರು ಸಚಿವ ಸ್ಥಾನ ತಪ್ಪಿರುವುದಕ್ಕೆ ಬಿಎಸ್‌ವೈ ಮತ್ತು ಪಕ್ಷದ ರಾಷ್ಟ್ರ ನಾಯಕರ ವಿರುದ್ಧ ತಮ್ಮ ಸಿಟ್ಟನ್ನು ಹೊರಹಾಕುತ್ತಿದ್ದು, ಯಾವ ಮಾನದಂಡದಲ್ಲಿ ನೀವು ಸಚಿವರನ್ನು ಆಯ್ಕೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸುತ್ತಿದ್ದಾರೆ.

ಚುನಾವಣೆಯಲ್ಲಿ ಸೋತ ಸಿ.ಪಿ. ಯೋಗೇಶ್ವರ್‌ಗೆ ನೀವು ಸಚಿವ ಸ್ಥಾನ ನೀಡುತ್ತಿದ್ದೀರಿ ಎಂದರೆ ಯಾವ ಮಾನದಂಡವನ್ನು ಅನುಸರಿಸಿದ್ದೀರಿ. ರಾಜ್ಯದಲ್ಲಿ ಬ್ಲ್ಯಾಕ್‌ಮೇಲ್‌ ರಾಜಕಾರಣ ನಡೆಯುತ್ತಿದ್ದೀಯ ಎಂದು ಕಿಡಿಕಾರುತ್ತಿದ್ದಾರೆ.

ಇನ್ನು ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧಿ, ಹಿಂದುತ್ವ ನನ್ನ ಅಜೆಂಡಾ. ನನಗೆ ಅನ್ಯ ಮಾರ್ಗ ತಿಳಿದಿಲ್ಲ ಎಂದು ಕಾರ್ಕಾಳ ಶಾಸಕ ಸುನೀಲ್‌ ಕುಮಾರ್‌ ಸಚಿವ ಸ್ಥಾನ ತಪ್ಪಿದ್ದಕ್ಕೆ ಆಕ್ರೋಶಗೊಂಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ನಾನು ಜಾತಿ ರಾಜಕೀಯದ ವೈಭವೀಕರಣ ಅರಿತಿಲ್ಲ. ಸ್ಥಾನಮಾನಕ್ಕೆ ಬ್ಲ್ಯಾಕ್‌ಮೇಲ್‌ ಮಾಡಿದವನಲ್ಲ. ಮುಂದೆಯು ಈ ಮಾರ್ಗ ಹಿಡಿಯುವುದಿಲ್ಲ ಎಂದು ಖಾರವಾಗಿಯೇ ಹೇಳಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್