NEWSನಮ್ಮರಾಜ್ಯರಾಜಕೀಯ

ರಾಜಹುಲಿ ಸಚಿವ ಸಂಪುಟ ಸೇರಿದ ಸಪ್ತ ಸಚಿವರು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಏಳು ಮಂದಿ ಶಾಸಕರು ಬಿ.ಎಸ್. . ಯಡಿಯೂರಪ್ಪ ಅವರ ಸಚಿವ ಸಂಪುಟ ಸೇರ್ಪಡೆಯಾಗಿದ್ದಾರೆ. 3.50ಕ್ಕೆ ರಾಜಭವನದ ಗಾಜಿನ ಅರಮನೆಯಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ವಿ.ಆರ್.ವಾಲಾ ಪ್ರಮಾಣ ವಚನ ಬೋಧಿಸಿದರು. ಒಟ್ಟು 24 ನಿಮಿಷಗಳ ಕಾಲ ನಡೆದ ಸಮಾರಂಭದಲ್ಲಿ ಇಬ್ಬರು ದೇವರು ಮತ್ತು ರೈತರ ಹೆಸರಿನಲ್ಲಿ ಉಳಿದ ಐವರು ಸಚಿವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಇವರಲ್ಲಿ ನಾಲ್ಕು ಮಂದಿ ವಿಧಾನಸಭಾ ಸದಸ್ಯರಾಗಿದ್ದರೆ ಉಳಿದ ಮೂರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದವರು.

ಈ ವೇಳೆ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಸಚಿವ ಸಂಪುಟ ಸಹೋದ್ಯೋಗಿಗಳು  ಉಪಸ್ಥಿತರಿದ್ದರು.

ಉಮೇಶ್ ಕತ್ತಿ
ಹುಕ್ಕೇರಿ ಕ್ಷೇತ್ರದ ಶಾಸಕರಾಗಿರುವ ಉಮೇಶ್‌ ಕತ್ತಿ ಬಿಜೆಪಿಯ ಹಿರಿಯ ಶಾಸಕರೂ ಹೌದು. ಲಿಂಗಾಯತ ಸಮುದಾಯದವರಾದ ಕತ್ತಿ. ಈವರೆಗೆ 9 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದು, 8 ಬಾರಿ ಗೆಲುವು ಸಾಧಿಸಿದ್ದಾರೆ. ಈ ಹಿಂದೆ 3 ಬಾರಿ ಸಚಿವ ಸ್ಥಾನ ನಿಭಾಯಿಸಿದ್ದ ಕತ್ತಿ, ಇದೀಗ ನಾಲ್ಕನೇ ಬಾರಿಗೆ ದೇವರು ಮತ್ತು ರೈತರ ಹೆಸರಿನಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಮುರುಗೇಶ್ ನಿರಾಣಿ
ಬೀಳಗಿ ಕ್ಷೇತ್ರದ ಶಾಸಕರಾಗಿರುವ ಮುರುಗೇಶ್ ನಿರಾಣಿ ಈವರೆಗೆ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ವೀರಶೈವ ಲಿಂಗಾಯತ ಸಮುದಾಯದ ನಿರಾಣಿ ಈ ಹಿಂದೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಎರಡನೇ ಬಾರಿಗೆ ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ.

ಅರವಿಂದ ಲಿಂಬಾವಳಿ
ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ್‌ ಲಿಂಬಾವಳಿ ಭೋವಿ ಸಮುದಾಯದವರು. ಈ ಹಿಂದೆ 2 ಬಾರಿ ಸಚಿವ ಸ್ಥಾನ ನಿಭಾಯಿಸಿದ ಅನುಭವ ಇವರಿಗಿದೆ. 35 ವರ್ಷಗಳಿಂದ ಆರ್​ಎಸ್​ಎಸ್ ನಿಕಟ ಸಂಪರ್ಕ ಹೊಂದಿದ್ದಾರೆ.​ ಅವರು ದೇವರ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದರು.

ಎಸ್. ಅಂಗಾರ
ದಕ್ಷಿಣಕ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದ ಶಾಸಕರಾದ ಎಸ್​. ಅಂಗಾರ ಪರಿಶಿಷ್ಟ ಜಾತಿಯವರು, ಈವರೆಗೆ 6 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅಂಗಾರ. ಇದೇ ಮೊದಲ ಬಾರಿಗೆ ಸಚಿವರಾಗಿ ಅಧಿಕಾರ ಹಿಡಿಯುತ್ತಿದ್ದಾರೆ. ಅವರು ದೇವರ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದರು.

ಎಂಟಿಬಿ ನಾಗರಾಜ್
ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿರುವ ಎಂಟಿಬಿ ನಾಗರಾಜ್ ಕುರುಬ ಸಮುದಾಯದವರು. ಈವರೆಗೆ 3 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ನಾಗರಾಜ್‌ ಕಳೆದ ಹೊಸಕೋಟೆ ಉಪಚುನಾವಣೆಯಲ್ಲಿ ಸೋಲನುಭವಿಸಿದ್ದರು. ಬಳಿಕ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಸಮ್ಮಿಶ್ರ ಸರ್ಕಾರದಲ್ಲಿ ವಸತಿ ಸಚಿವರಾಗಿ ಕಾರ್ಯ ನಿರ್ವಹಿಸಿದ ಅನುಭವ ಇವರಿಗಿದೆ. ಎರಡಬೇ ಬಾರಿಗೆ ಸಚಿವ ಸ್ಥಾನ ಪಡೆದಿರುವ ಎಂಟಿಬಿ ಇಂದು ದೇವರ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದರು.

ಆರ್. ಶಂಕರ್
ವಿಧಾನ ಪರಿಷತ್‌ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿರುವ ಆರ್. ಶಂಕರ್‌, 2018ರಲ್ಲಿ ಮೊದಲ ಬಾರಿಗೆ ಪಕ್ಷೇತರರಾಗಿ ವಿಧಾನಸಭೆ ಆಯ್ಕೆಯಾಗಿದ್ದರು. ಬಳಿಕ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದ ಶಂಕರ್‌ಗೆ ಇದೀಗ ಸಚಿವ ಸ್ಥಾನ ಒಲಿದು ಬಂದಿದೆ. ಅವರು ದೇವರ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದರು.

ಸಿ.ಪಿ.ಯೋಗೇಶ್ವರ್
ಈ ಹಿಂದೆ 4 ಬಾರಿ ಶಾಸಕರಾಗಿ ಸೇವೆ ಸಲ್ಲಿಸಿರುವ ಯೋಗೇಶ್ವರ್‌, ಒಂದು ಬಾರಿ ಅರಣ್ಯ ಖಾತೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಸದ್ಯ ವಿಧಾನ ಪರಿಷತ್‌ ಸದಸ್ಯರಾಗಿರುವ ಯೋಗೇಶ್ವರ್‌ ಒಕ್ಕಲಿಗ ಸಮುದಾಯಕ್ಕೆ ಸೇರಿದವರು. ಇಂದು ಎರಡನೇ ಬಾರಿಗೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ
ಇನ್ನು ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸಹ ಭುಗಿಲೆದ್ದಿದೆ. ಈಗಾಗಲೇ ಹಲವು ಶಾಸಕರು ತಮಗೆ ಸಚಿವ ಸ್ಥಾನ ನೀಡಲಿಲ್ಲ ಎಂದು ಬಿಎಸ್​ವೈ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇನ್ನುಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಮುನಿರತ್ನ ಅವರಿಗೂ ಈ ಬಾರಿ ಅವಕಾಶ ನೀಡಲಾಗಿಲ್ಲ.

ಎಚ್​. ನಾಗೇಶ್​ ಕೋಲಾರ ಭಾಗದ ಪ್ರಮುಖ ದಲಿತ ನಾಯಕ. ಅಲ್ಲದೆ, ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರದ ವಿರುದ್ಧ ರಾಜೀನಾಮೆ ನೀಡಿ ಬಿಜೆಪಿಗೆ ಮೊದಲು ಸೇರ್ಪಡೆಯಾಗಿದ್ದೇ ಎಚ್​. ನಾಗೇಶ್​. ನಾಗೇಶ್​ ರಾಜೀನಾಮೆ ನೀಡಿದ ನಂತರವೇ ಎಲ್ಲಾ ಶಾಸಕರೂ ರಾಜೀನಾಮೆ ನೀಡಿ ಬಿಜೆಪಿ ಸರ್ಕಾರ ಬಹುಮತದೊಂದಿಗೆ ಅಧಿಕಾರಕ್ಕೆ ಏರಿತ್ತು. ಹೀಗಾಗಿ ಮುಂದಿನ ಮೂರೂವರೆ ವರ್ಷಕ್ಕೂ ಅವರನ್ನು ಸಚಿವರನ್ನಾಗಿ ಮುಂದುವರಸುವ ಮಾತು ನೀಡಲಾಗಿತ್ತು. ಆದರೆ, ಇದೀಗ ಅವರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸ್ವತಃ ಸಿಎಂ ಯಡಿಯೂರಪ್ಪ ಅವರೇ ಹೇಳಿ ಪಡೆದಿರುವುದು ಸಮುದಾಯದವರ ಆಕ್ರೋಶಕ್ಕೆ ಕಾರಣವಾಗಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ