NEWSಆರೋಗ್ಯದೇಶ-ವಿದೇಶ

ಜ.31ಕ್ಕೆ ಪೋಲಿಯೋ ಲಸಿಕೆ ಅಭಿಯಾನ ಮುಂದೂಡಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ರಾಷ್ಟ್ರೀಯ ಪಲ್ಸ್‌ ಪೋಲಿಯೋ ಲಸಿಕೆ ಅಭಿಯಾನವನ್ನು ಜನವರಿ 31ಕ್ಕೆ ಮುಂದೂಡಲಾಗಿದೆ.

ಜ. 17ರಂದು ದೇಶಾದ್ಯಂತ ಪೋಲಿಯೋ ಲಸಿಕೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಜನವರಿ 16ರಂದು ‘ಕೋವಿಡ್‌-19’ ವಿರುದ್ಧದ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ಜನವರಿ 31 ಕ್ಕೆ ಮುಂದೂಡಲಾಗಿದೆ.

ಅಭಿಯಾನ ಮುಂದೂಡುವ ಸಂಬಂಧ ರಾಷ್ಟ್ರಪತಿ ಕಚೇರಿಯ ಉನ್ನತ ಅಧಿಕಾರಿಗಳು ಮತ್ತು ಗಣ್ಯರೊಂದಿಗೆ ಸಮಾಲೋಚಿಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಜ.31ರಂದು ಬೆಳಗ್ಗೆ 11.45ಕ್ಕೆ ರಾಷ್ಟ್ರಪತಿ ದೆಹಲಿಯ ರಾಜಭವನದಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ‘ರಾಷ್ಟ್ರೀಯ ರೋಗನಿರೋಧಕ ದಿನ‘ಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್