NEWSಆರೋಗ್ಯನಮ್ಮರಾಜ್ಯ

ಜ.16ರಂದು ಕೋವಿಡ್ ಮೊದಲ ಸುತ್ತಿನ ಲಸಿಕೆಗೆ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಹಾವೇರಿ: ಜಿಲ್ಲೆಯ ಕೋವಿಡ್ ವಾರಿಯರ್ಸ್‌ಗಳಿಗೆ ಜನವರಿ 16 ರಿಂದ ಮೊದಲ ಸುತ್ತಿನ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮ ಆರಂಭವಾಗಲಿದೆ. ಲೋಪವಾಗದಂತೆ ಮಾರ್ಗಸೂಚಿ ಅನ್ವಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸಭೆಯಲ್ಲಿ ಮಾತನಾಡಿ, ಬೆಳಗಾವಿಯ ಪ್ರಾದೇಶಿಕ ಲಸಿಕಾ ಕೇಂದ್ರದಿಂದ ರಸ್ತೆ ಮೂಲಕ ವಿಶೇಷ ಸುರಕ್ಷಿತ ವಾಹನದಲ್ಲಿ ಬುಧವಾರ ರಾತ್ರಿ ಹಾವೇರಿಗೆ ಆಗವಿಸಿದ ಲಸಿಕಾ ಪೆಟ್ಟಿಗೆಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿರುವ ಜಿಲ್ಲಾ ಲಸಿಕಾ ಉಗ್ರಾಣದಲ್ಲಿ ಸಂಗ್ರಹಿಸಿ ಇಡಲಾಗಿದೆ ಎಂದು ತಿಳಿಸಿದರು.

ಮೊದಲ ಹಂತದಲ್ಲಿ ನಾಲ್ಕು ಸಾವಿರ ಲಸಿಕೆ ಜಿಲ್ಲೆಗೆ ಬಂದಿದೆ. ಮೊದಲ ಸುತ್ತಿನ ಲಸಿಕಾಕರಣದಲ್ಲಿ ಈಗಾಗಲೇ ನೋಂದಾಯಿತರಾಗಿರುವ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಆರೋಗ್ಯ ಕಾರ್ಯರು, ಅಂಗನವಾಡಿ ಕಾರ್ಯಕರ್ತರು ಸೇರಿ ಸುಮಾರು 8691 ಜನರಿಗೆ ಲಸಿಕೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಲಸಿಕೆ ಕೇಂದ್ರಗಳಲ್ಲಿ ಅಗತ್ಯ ಕೊಠಡಿ, ಸಿಬ್ಬಂದಿ, ತುರ್ತು ನಿಗಾ ಘಟಕ ಸೇರಿದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಹಾಗೂ ಮೊದಲ ಹಂತದಲ್ಲಿ ಡಿ ಗ್ರೂಪ್ ಸಿಬ್ಬಂದಿಗೆ ನೀಡಬೇಕು. ಆರು ಅಡಿ ಅಂತರ ಕಾಯ್ದುಕೊಳ್ಳಬೇಕು. ವ್ಯಾಕ್ಸಿನ್ ಪಡೆಯಲು ಐಡಿ ಕಾರ್ಡ್ ಕಡ್ಡಾಯವಾಗಿದೆ. ವ್ಯಾಕ್ಸಿನ್ ನೀಡಿಕೆ ನಂತರ 30 ನಿಮಿಷ್ ನಿಗಾ ಘಟಕದಲ್ಲಿ ಇರಿಸಬೇಕು. ಅಧಿಕಾರಿಗಳು ಸೇರಿ ಅಗತ್ಯ ಸಿಬ್ಬಂದಿ ಹಾಗೂ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಬೇಕು. ವಿದ್ಯುತ್ ವ್ಯತ್ಯವಾಗದಂತೆ ಕ್ರಮವಹಿಸಬೇಕು ಹಾಗೂ ಲಸಿಕೆ ನೀಡಿಕೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ ರೋಷನ್ ಮಾತನಾಡಿ, ಲಸಿಕಾ ಕೇಂದ್ರಗಳಲ್ಲಿ ಇಂಟರ್‌ನೆಟ್ ಸ್ಥಗಿತಗೊಳ್ಳದಂತೆ ನಿಗಾವಹಿಸಬೇಕು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಪೊಲೀಸ್ ಬಂದೋಬಸ್ತ್ ವ್ಯವಸ್ಥೆ, ಕೋವಿಡ್ ಲಸಿಕೆಗೆ ಉಪಯೋಗಿಸಿದ ತ್ಯಾಜ್ಯವನ್ನು ಸರಿಯಾಗಿ ಶೇಖರಿಸಿ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು ಎಂದು ಸೂಚನೆ ನೀಡಿದರು.

ಆರ್.ಸಿ.ಎಚ್. ಅಧಿಕಾರಿ ಡಾ.ಜಯಾನಂದ ಮಾತನಾಡಿ, 46 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ಬ್ಯಾಡಗಿ ತಾಲೂಕಿನ ಬ್ಯಾಡಗಿ, ಕಾಗಿನೆಲೆ, ಕದರಮಂಡಲಗಿ, ಶಂಕ್ರಿಕೊಪ್ಪ ಹಾಗೂ ಚಿಕ್ಕಬ್ಬಾರ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಹಾನಗಲ್ ತಾಲೂಕಿನ ಹಾನಗಲ್, ಅಕ್ಕಿಆಲೂರು ಹಾಗೂ ಕುಸನೂರ ಆರೋಗ್ಯ ಕೇಂದ್ರಗಳಲ್ಲಿ ಜನವರಿ 16 ರಿಂದ 18ರವರೆಗೆ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಹಾವೇರಿ ತಾಲೂಕಿನ ಹಾವೇರಿ, ಗುತ್ತಲ, ಅಗಡಿ, ದೇವಗಿರಿ, ಕರ್ಜಗಿ, ದೇವಿಹೊಸೂರು, ಹಾವನೂರು, ಕಾಟೇನಹಳ್ಳಿ, ಕುರುಬಗೊಂಡ, ಹಂದಿಗನೂರು, ಹೊಸರಿತ್ತಿ, ನೆಗಳೂರು ಹಾಗೂ ಕಬ್ಬೂರ ಆರೋಗ್ಯ ಕೇಂದ್ರಗಳಲ್ಲಿ ಜನವರಿ 16, ಜ.18, ಜ.19 ಹಾಗೂ 20ರವರೆಗೆ ನಡೆಯಲಿದೆ.

ಹಿರೇಕೆರೂರು ತಾಲೂಕಿನ ಹಿರೇಕೆರೂರು, ರಟ್ಟಿಹಳ್ಳಿ, ಮಾಸೂರು, ಕೋಡ, ಹೊಂಬರಡಿ, ಚಿಕ್ಕೇರೂರು, ತಡಕನಹಳ್ಳಿ ಹಾಗೂ ಕುಡಪಲಿ ಆರೋಗ್ಯ ಕೇಂದ್ರಗಳಲ್ಲಿ ಜನವರಿ 16 ರಿಂದ 18ರವರೆಗೆ ಹಾಗೂ ರಾಣೇಬೆನ್ನೂರು ತಾಲೂಕಿನ ರಾಣೇಬೆನ್ನೂರು, ಮೆಡ್ಲೇರಿ, ಹಲಗೇರಿ, ಸುಣಕಲ್ಲಬಿದರಿ, ಹೊನ್ನತ್ತಿ, ಮಾಕನೂರು ಆರೋಗ್ಯ ಕೇಂದ್ರಗಳಲ್ಲಿ ಜನವರಿ 18, ಜ.20 ಹಾಗೂ ಜ22 ರಂದು ನಡೆಯಲಿದೆ.

ಸವಣೂರ ತಾಲೂಕಿನ ಸವಣೂರು ಸಾರ್ವಜನಿಕ ಆಸ್ಪತ್ರೆ ಹಾಗೂ ಉಪ ಆರೋಗ್ಯ ಕೇಂದ್ರ ಮತ್ತು ಹತ್ತಿಮತ್ತೂರು ಕೇಂದ್ರದಲ್ಲಿ ಜನವರಿ 16 ರಿಂದ 18ರವರೆಗೆ, ನಡೆಯಲಿದೆ.

ಶಿಗ್ಗಾಂವ ತಾಲೂಕಿನ ಶಿಗ್ಗಾಂವ, ಬಂಕಾಪುರ, ತಡಸ, ದುಂಡಶಿ, ಅತ್ತಿಗೇರಿ ಆರೋಗ್ಯ ಕೇಂದ್ರಗಳಲ್ಲಿ ಜನವರಿ 16 ರಿಂದ 18ರವರೆಗೆ ಲಸಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಮನಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಿ.ಆರ್. ಹಾವನೂರ, ತಹಶೀಲ್ದಾರ ಶಂಕರ , ತಾಲೂಕಾ ಆರೋಗ್ಯಾಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ