NEWSನಮ್ಮಜಿಲ್ಲೆಸಂಸ್ಕೃತಿ

ಬೀಡನಹಳ್ಳಿಯಲ್ಲಿ ಸಂಕ್ರಾಂತಿ ಸಂಭ್ರಮ: ರಾಸುಗಳ ಕಿಚ್ಚು ಹಾಯಿಸಿದ ಗ್ರಾಮಸ್ಥರು

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಮೈಸೂರು ಜಿಲ್ಲೆಯಾದ್ಯಂತ ಜನರು ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಹೋಬಳಿ ಸಮೀಪವಿರುವ ಬೀಡನಹಳ್ಳಿ ಗ್ರಾಮದಲ್ಲೂ ಪ್ರತಿವರ್ಷದಂತೆ ಈ ವರ್ಷವೂ ರಾಸುಗಳ ಕಿಚ್ಚು ಹಾಯಿಸಲಾಯಿತು. ಗ್ರಾಮದ ಹೊರ ಭಾಗದಲ್ಲಿರುವ ಶ್ರೀ ಶನೇಶ್ವರ ದೇಗುಲದ ಬಳಿ ಕಿಚ್ಚು ಹಾಯಿಸುವ ಮೂಲಕ ಊರಿನ ಹೃದಯ ಭಾಗದಲ್ಲಿರುವ ಶ್ರೀ ನಂದಿ ಬಸವೇಶ್ವರ ದೇಗುಲದ ವರೆಗೂ ಯುವ ಸಮೂಹ ಅಲಂಕರಿಸಿಕೊಂಡು ಕರೆತಂದಿದ್ದ ಎತ್ತುಗಳು, ಹಸುಗಳು, ಕುರಿಗಳು ಸೇರಿ ಎಲ್ಲಾ ರಾಸುಗಳನ್ನು ಮೆರವಣಿಗೆ ಮಾಡಲಾಯಿತು.

ಗ್ರಾಮದಲ್ಲಿ ಹಿಂದಿನಿಂದ ನಡೆದುಕೊಂಡು ಬಂದಿರುವಂತೆ ಮೊದಲು ನಂದಿ ಬಸವೇಶ್ವರ ಸ್ವಾಮಿಯ ಬಸವನನ್ನು ಮೊದಲು ಕಿಚ್ಚುಹಾಯಿಸಲಾಯಿತು. ನಂತರ ಗ್ರಾಮಸ್ಥರು ಕರೆತಂದಿದ್ದ ಎಲ್ಲಾ ರಾಸುಗಳನ್ನು ಕಿಚ್ಚು ಹಾಯಿಸಲಾಯಿತು.

ಇನ್ನು ಹೋಬಳಿಯ ಅತ್ತಹಳ್ಳಿ, ಚಾಮನಹಳ್ಳಿ, ಬಸವನಹಳ್ಳಿ, ಹನುಮನಾಳು, ಮಾದಿಗಹಳ್ಳಿ, ಮಾಕನಹಳ್ಳಿ ಸೇರಿದಂತೆ ಎಲ್ಲಾ ಗ್ರಾಮಹಳಲ್ಲೂ ರಾಸುಗಳ ಕಿಚ್ಚು ಹಾಯಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಇನ್ನು ನಗರ ಪ್ರದೇಶಗಳ ಜೊತೆಗೆ ಹಳ್ಳಿಗಳಲ್ಲಿಯೂ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಗುರುವಾರ ಮುಂಜಾನೆಯೂ ಹಬ್ಬದ ಖರೀದಿ ಮುಂದುವರಿದಿತ್ತು. ಜನರು ಕಬ್ಬು, ಎಳ್ಳು–ಬೆಲ್ಲ, ಅವರೆ–ಗೆಣಸು ಮೊದಲಾದ ಸಾಮಗ್ರಿಗಳನ್ನು ಕೊಂಡು ತಂದರು.

ಮನೆಯಲ್ಲಿನ ಹೆಣ್ಣುಮಕ್ಕಳು ಹೊಸ ಬಟ್ಟೆ ತೊಟ್ಟು, ಅಕ್ಕಪಕ್ಕದ ಮನೆಮಂದಿಗೆಲ್ಲ ಎಳ್ಳು–ಬೆಲ್ಲ ಹಂಚುತ್ತ ಶುಭಾಶಯ ಕೋರಿದರು. ದೇವಾಲಯಗಳಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಬೆಳಗ್ಗೆಯಿಂದಲೇ ದೇಗುಲಗಳಲ್ಲಿ ಜನರ ಸಾಲು ನೆರೆದಿತ್ತು.

ಹಳ್ಳಿಗಳಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿತ್ತು. ಬೆಳೆದ ಪದಾರ್ಥಗಳನ್ನು ರಾಶಿ ಹಾಕಿ ರಾಶಿ ಪೂಜೆ ನಡೆಸಲಾಯಿತು. ರಾಸುಗಳ ಮೈ ತೊಳೆದು, ವಿವಿಧ ಸಾಮಗ್ರಿಗಳಿಂದ ಅಲಂಕರಿಸಿ, ಸಂಜೆ ಕಿಚ್ಚು ಹಾಯಿಸಲಾಯಿತು. ಊರಿನ ರಸ್ತೆಗಳಲ್ಲಿ ಕಿಚ್ಚು ಹಾಯಿಸುವ ದೃಶ್ಯ ಸಾಮಾನ್ಯವಾಗಿತ್ತು.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ