NEWSನಮ್ಮಜಿಲ್ಲೆರಾಜಕೀಯ

ಸಿಡಿ ಬಗ್ಗೆ ಅಂತೆಕಂತೆಗಳು ಬಿಟ್ಟು ಬಹಿರಂಗಪಡಿಸಿ: ಸಚಿವ ಎಂಟಿಬಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಚಿತ್ರದುರ್ಗ: ಅಂತೆ ಕಂತೆಗಳನ್ನೇ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಅದು ಬಿಟ್ಟು ಶಾಸಕರ ಬಳಿ ಯಾವ ಸಿಡಿ ಇದೆಯೋ ಗೊತ್ತಿಲ್ಲ ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ಶುಕ್ರವಾರ ಚಿತ್ರದುರ್ಗದಲ್ಲಿ ಮಾತನಾಡಿದ ಸಚಿವರು, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿದೆ. ಆದರೆ, ಸಚಿವ ಸಂಪುಟ ವಿಸ್ತರಣೆ ವೇಳೆ ಅವಕಾಶ ಸಿಗದ ಶಾಸಕರು ಈ ರೀತಿ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಅದರಲ್ಲಿ ಯಾವುದೇ ಹುರುಳಿಲ್ಲ ಎಂದರು.

ಕೆಲವರು ಸಿಡಿ ತೋರಿಸಿ ಯಡಿಯೂರಪ್ಪ ಹೆದರಿಸಿ ಸಚಿವರಾಗಿದ್ದಾರೆ. ಇನ್ನು ಕೆಲವರು ಅಪಾರ ಪ್ರಮಾಣದ ಹಣ ನೀಡಿ ಸಚಿವರಾಗಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

ಸಿಡಿ ಇದೇ ಎಂದು ಬಿಜೆಪಿ ನಾಯಕರೋ ಅಥವಾ ಬೇರೆ ಪಕ್ಷದ ನಾಯಕರು ಹೇಳುತ್ತಾರೋ ಗೊತ್ತಿಲ್ಲ. ಸಿಡಿ ಇದ್ದರೆ ಬಿಡುಗಡೆ ಮಾಡಲಿ, ಸಿಡಿ ಹೆಸರು ಹೇಳಿಕೊಂಡು ರಾಜಕೀಯ ಮಾಡಿ ಪ್ರಯೋಜನವಿಲ್ಲ ಎಂದು ಸಲಹೆ ನೀಡಿದರು.

ಸಿಡಿ ಹೆಸರು ಹೇಳಿಕೊಂಡು ಮಂತ್ರಿಯಾದವರು, ಸಿಡಿ ಇಟ್ಕೊಂಡು ಹೆದರಿಕೆ ಬೆದರಿಕೆ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿಯಿಲ್ಲ. ಇನ್ನು ಸಚಿವ ಯೋಗೇಶ್ವರ ನನ್ನ ಬಳಿ ಆಸ್ತಿ ಅಡವಿಟ್ಟು ಸಾಲ ಪಡೆದುಕೊಂಡಿಲ್ಲ. ಮನೆನೂ ಅಡವಿಟ್ಟಿಲ್ಲ, ಮಠನೂ ಅಡವಿಟ್ಟಿಲ್ಲ. ಜಾರಕಿಹೂಳಿ ಯಾವ ಕಾರಣಕ್ಕೆ ಹೀಗೆ ಹೇಳುತ್ತೀರಿ? ಎಂದು ಕೇಳಿದ್ದೇನೆ ಎಂದು ಎಂಟಿಬಿ ಸ್ಪಷ್ಟಪಡಿಸಿದರು.

ಖಾತೆ ಹಂಚಿಕೆ ಮೂರು ದಿನಗಳಲ್ಲಿ ಪೂರ್ಣಗೊಳ್ಳಿದೆ. ಯಾವ ಖಾತೆ ಕೊಟ್ಟರು ನಾನು ನಿಭಾಯಿಸುವೆ. ಯಾರಿಗೆ ಯಾವ ಖಾತೆ ನೀಡುತ್ತಾರೋ ಗೊತ್ತಿಲ್ಲ. 17 ಶಾಸಕರು ಒಟ್ಟಾಗಿದ್ದೇವೆ. ಮುಂದಿನ ದಿನಗಳಲ್ಲಿ ಮುನಿರತ್ನ, ವಿಶ್ವನಾಥ್‌ ಸೇರಿ ಉಳಿದವರಿಗೂ ಸಚಿವ ಸ್ಥಾನ ಕೊಡುತ್ತಾರೆ ಎಂದು ಹೇಳಿದರು.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ