NEWSದೇಶ-ವಿದೇಶ

ಕೊರೊನಾ ವಿರುದ್ಧ ಲಸಿಕೆ ಸಂಕ್ರಮಣ ಆರಂಭ: ಪ್ರಧಾನಿ ಮೋದಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಭಾರತದಲ್ಲಿ ಇನ್ನು ಮುಂದೆ ಕೊರೊನಾ ಲಸಿಕೆ ಸಂಕ್ರಮಣ ನಡೆಯಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಇಂದು ಬೆಳಗ್ಗೆ ಕೊರೊನಾ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎರಡು ಲಸಿಕೆಗಳ ಮೇಲೆ ನಿರಂತರವಾಗಿ ಪ್ರಯೋಗ ನಡೆಸಲಾಗಿತ್ತು. ಅದರ ಫಲವಾಗಿ ಇಂದು ಕೊರೊನಾ ಸೋಂಕು ನಿಯಂತ್ರಣಕ್ಕೆ ತಕ್ಕ ಲಸಿಕೆ ದೊರಕಿದೆ ಎಂದರು.

ಇನ್ನು ಕೊರೊನಾ ವಿರುದ್ಧ ನಮ್ಮ ಹೋರಾಟ ನಿರಂತವಾಗಿರಲಿದೆ. ಜತೆಗ ನಮ್ಮ ಲಸಿಕೆ ಸುರಕ್ಷಿತವಾಗಿದ್ದು, ಯಾವುದೇ ಸೈಟ್‌ ಎಫೆಕ್ಟ್‌ ಇರುವುದಿಲ್ಲ. ಆರೋಗ್ಯದ ಮೇಲೆ ಇತರ ಪರಿಣಾಮ ಬೀರುವುದಿಲ್ಲ. ಇದು ಕೊರೊನಾ ವೈರಸ್‌ ಮಟ್ಟಹಾಕುವ ಲಸಿಕೆಯಾಗಿದೆ ಎಂದು ವಿವರಿಸಿದರು.

ಇಂದು ನಾವು ಪ್ರಾಯೋಗಿಕವಾಗಿ ಚಾಲನೆ ನೀಡುವ ಲಸಿಕೆಗಳು ದೇಶಿಯವಾಗಿ ಸಿದ್ದಗೊಂಡಿದ್ದು, ನಮ್ಮ ವಿಜ್ಞಾನಿಗಳ ನಿರಂತರ ಸಂಶೋಧನೆಯಿಂದ ಇದು ಸಾಧ್ಯವಾಗಿದೆ ಎಂದು ಸಂತಸದಿಂದ ತಿಳಿಸಿದರು.

ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರ ಮೋದಿ ಭಾಷಣವೇಳೆ ಭಾವುಕರಾದರು. ಕೊರೊನಾ ವಾರಿಯರ್ಸ್‌ ಗದ್ಗದಿತರಾದರು. ವಾರಿಯರ್ಸ್‌ಗಳ ಅವಿರತ ಶ್ರಮದಿಂದಾಗಿಯೂ ಇಂದು ನಮ್ಮ ದೇಶದಲ್ಲಿ ಕೊರೊನಾ ಸೋಂಕನ್ನು ನಿಯಂತ್ರಣದಲ್ಲಿ ಇಡಲು ಸಾಧ್ಯವಾಯಿತು ಎಂದು ಹೇಳಿದರು.

ಇನ್ನು ಕೊರೊನಾ ಸೋಂಕಿಗೆ ಔಷಧ ಸಿಕ್ಕಿದೆ. ಆದರೂ ನೀವು ಸುರಕ್ಷತೆ ದೃಷ್ಟಿಯಿಂದ ಮಾಸ್ಕ್‌ ಮತ್ತು ಸ್ಯಾನಿಟೈಸರ್‌ ಹಾಕುವುದನ್ನು ಮರೆಯಬೇಡಿ ಎಂದು ದೇಶವಾಸಿಗಳಿಗೆ ಸಲಹೆ ನೀಡಿದರು.

1 Comment

  • ಇದೆಲ್ಲಾ ಆಯ್ತು ಮುಂದೆ ಸಾಯೋ ಜನಗಳು ಸಾಯ್ತಾ ಇದ್ದಾರೆ ನಮಗೇನ್ ಅಂದಂಗಾಯ್ತು

Leave a Reply

error: Content is protected !!
LATEST
ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!!