NEWSನಮ್ಮರಾಜ್ಯರಾಜಕೀಯ

ಅಮಿತ್ ಷಾ ನೆಚ್ಚಿಸಲು ಕರ್ನಾಟಕದಲ್ಲೇ ಕನ್ನಡ ಮಾಯ: ರಾರಾಜಿಸಿದ ಹಿಂದಿ, ಆಂಗ್ಲ ಭಾಷೆ – ಎಚ್‌ಡಿಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಶಿವಮೊಗ್ಗದ ಭದ್ರಾವತಿಯಲ್ಲಿ ಶನಿವಾರ ಆರ್‌ಎಎಫ್‌ ಘಟಕಕ್ಕೆ ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಅಡಿಗಲ್ಲು ಫಲಕ ಅನಾವರಣಗೊಳಿಸಿದ್ದಾರೆ. ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ ಎಂದು ಮಾಜು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು,ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ ಎಂದು ಸರಣಿ ಟ್ವೀಟ್‌ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಷಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಆರ್‌ಎಎಫ್‌ ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ. ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ ಎಂದು ನಾಡಿನ ಆಡಳಿತದ ಚುಕ್ಕಾಣಿ ಹಿಡಿದವರ ವಿರುದ್ಧವು ಹರಿಹಾಯ್ದಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...