NEWSದೇಶ-ವಿದೇಶರಾಜಕೀಯ

ಏರುತ್ತಲೇ ಇದೆ ಪೆಟ್ರೋಲ್, ಡೀಸೆಲ್ ಬೆಲೆ: ಇಂದಿನ ದರ ಎಷ್ಟು?

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಆದರೆ ಇತ್ತೀಚೆಗೆ ಇಳಿತಕ್ಕಿಂತ ಏರಿಕೆಯೇ ಹೆಚ್ಚಾಗುತ್ತಿದ್ದು, ಗ್ರಾಹಕರ ಜೇಬಿಗೆ ಕತ್ತರಿಯನ್ನು ನಿರಂತರವಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಾಕುತ್ತಲೆ ಇವೆ.

ಇನ್ನು ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ದರವೆಷ್ಟು ಎಂಬುರ ಬಗ್ಗೆ ವಿವರವನ್ನು ನೋಡುವುದಾದರೆ, ಮುಂಬೈ, ಜೈಪುರದಲ್ಲಿ ಪೆಟ್ರೋಲ್ ದರ 1 ಲೀಟರ್​ಗೆ 91 ರೂ. ದಾಟಿದೆ. ಹಾಗೆಯೇ ಚೆನ್ನೈ, ಪಾಟ್ನಾ, ಭುವನೇಶ್ವರದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 87 ರೂ. ಆಸುಪಾಸಿನಲ್ಲಿದೆ. ಬೆಂಗಳೂರಿನಲ್ಲಿ 88.02 ರೂ ಹೈದರಾಬಾದ್​ನಲ್ಲಿ 88.63 ರೂ. ಇದೆ. ಬಹುತೇಕ ಎಲ್ಲ ನಗರಗಳಲ್ಲೂ ನಿನ್ನೆಗಿಂತ ಇಂದು ಪೆಟ್ರೋಲ್ ಬೆಲೆ 25 ಪೈಸೆಗೂ ಹೆಚ್ಚಾಗಿದೆ.

ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 85.20 ರೂ. ಇದೆ. ಮುಂಬೈನಲ್ಲಿ 91,80 ರೂ, ಜೈಪುರದಲ್ಲಿ 92.69 ರೂ, ಬೆಂಗಳೂರಿನಲ್ಲಿ 88.02 ರೂ ಹೈದರಾಬಾದ್​ನಲ್ಲಿ 88.63 ರೂ, ತಿರುವನಂತಪುರದಲ್ಲಿ 87.37 ರೂ, ಚೆನ್ನೈನಲ್ಲಿ 87.85 ರೂ, ಕೊಲ್ಕತ್ತಾದಲ್ಲಿ 86.63 ರೂ. ಇದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯ ಸಂಗತಿ.

ಆದರೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಏರಿಕೆ ಆಗದಿದ್ದರೂ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಹೆಚ್ಚಳವಾಗುತ್ತಿದೆ. ನಿನ್ನೆಗಿಂತ ಇಂದು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಕೊಂಚ ಏರಿಕೆ ಕಂಡುಬಂದಿದೆ.

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಿಂದಾಗಿ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಇದೇ ರೀತಿ ಇಂಧನದ ಬೆಲೆ ಏರಿಕೆ ಮುಂದುವರಿದರೆ 1 ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸೆಂಚುರಿ ಬಾರಿಸುವ ದಿನವೂ ದೂರವೇನಿಲ್ಲ!

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಆಗುತ್ತಿದ್ದರೂ, ಕೊರೊನಾ ಕಾರಣಗಳಿಂದ ಜನಸಾಮಾನ್ಯರು ಕಷ್ಟದಲ್ಲಿದ್ದರೂ, ಸಾರ್ವಜನಿಕರು ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಲೆಕ್ಕಿಸದ ಸರ್ಕಾರಿ ಒಡೆತನದ ತೈಲ ಕಂಪನಿಗಳು ಸತತವಾಗಿ ಬೆಲೆ ಏರಿಕೆಯಲ್ಲಿ ನಿರತವಾಗಿವೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು