NEWSನಮ್ಮಜಿಲ್ಲೆರಾಜಕೀಯ

ಜಿಟಿಡಿಗೆ ಕೇವಲ ವಿಸಿಟಿಂಗ್ ಕಾರ್ಡಿಗಾಗಿ ಅವಕಾಶ ಕೊಡಲಾ: ಎಚ್‌ಡಿಕೆ ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ರಾಮನಗರ: ಮಾಜಿ ಸಚಿವ ಜಿ.ಟಿ. ದೇವೇಗೌಡರಿಗೆ ಪಕ್ಷ ಸಂಘಟನೆ ಬಗ್ಗೆ ಆಸಕ್ತಿ ಇಲ್ಲ. ಕೇವಲ ವಿಸಿಟಿಂಗ್ ಕಾರ್ಡಿಗಾಗಿ ನಾನು ಅವಕಾಶ ಕೊಡಲಾ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಜೆಡಿಎಸ್‌ ಕೋರ್ ಕಮಿಟಿಯಲ್ಲಿ ಜಿ.ಟಿ. ದೇವೇಗೌಡ ಅವರ ಹೆಸರು ಕೈಬಿಟ್ಟಿರುವ ಕುರಿತು ಚನ್ನಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ನನ್ನ ಕ್ಷೇತ್ರ ಮುಖ್ಯ. ಪಕ್ಷ ಸಂಘಟನೆಗೆ ಸಮಯ ಕೊಡಲು ಆಗದು ಎಂದು ಅವರೇ ಹೇಳಿದ್ದಾರೆ. ಈಗ ಅವರಿಗೆ ಕ್ಷೇತ್ರದ ಬಗ್ಗೆ ಗಮನ ಬಂದಿದೆ. ಮುಂದಿನ ಚುನಾವಣೆ ಹೊತ್ತಿಗೆ ಯಾರ್ಯಾರು ಎಲ್ಲೆಲ್ಲಿ ಇರುತ್ತಾರೋ ಗೊತ್ತಿಲ್ಲ. ಅವರು ಮಾಧ್ಯಮಗಳ ಮೂಲಕ ನನಗೆ ಸಂದೇಶ ಕೊಡುವುದು ಬೇಡ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅವರಿಗೆ ಸಮಸ್ಯೆ ಆಗಿದ್ದರೆ ಜೆ.ಪಿ. ಭವನಕ್ಕೆ ಬಂದು ಎಚ್‌.ಡಿ. ದೇವೇಗೌಡರ ಜತೆ ಚರ್ಚಿಸಲಿ ಅದನ್ನು ಬಿಟ್ಟು ಇಲ್ಲಸಲ್ಲದ ಹೇಳಿಕೆ ನೀಡುವುದು ಬೇಡ ಎಂದು ಸಲಹೆ ನೀಡಿದರು.

ಸಿಪಿವೈಗೆ ಟಾಂಗ್‌: ಈಗ ಮಂತ್ರಿಯಾದರು ಇನ್ನೂ ಪೊಗರ್‌ದಸ್ತಾಗಿ ಕೆಲಸ ಮಾಡಲು ಅನುಕೂಲ ಆಯಿತು ಎಂದು ಈ ಹಿಂದೆ ಲೆಟರ್‌ಹೆಡ್ ದುರ್ಬಳಕೆ ವಿಚಾರವಾಗಿ ಸಚಿವ ಸಿ.ಪಿ. ಯೋಗೇಶ್ವರ್‌ಗೆ ಟಾಂಗ್‌ ನೀಡಿದ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಮಂತ್ರಿಗೆ ಏನು ಕೊಂಬು ಇರುತ್ತ? ನಾನು ಬಹಳಷ್ಟು ಮಂತ್ರಿಗಳನ್ನು ನೋಡಿದ್ದೇನೆ. ಚನ್ನಪಟ್ಟಣದಲ್ಲಿ ನನ್ನನ್ನು ಯಾರೂ ಏನು ಮಾಡಲು ಸಾಧ್ಯ ಇಲ್ಲ. ಈಗಲಾದರೂ ಅವರು ಜನರ ಪರವಾಗಿ ಕೆಲಸ ಮಾಡಲಿ ಎಂದ ಅವರು ಮೊದಲು ಅವರ ಎಲ್ಲ ಚಟುವಟಿಕೆ ತಾಲೂಕು ಮಟ್ಟದಲ್ಲಿ ನಡೆಯುತಿತ್ತು. ಈಗ ಹಣ ಮಾಡಲು ರಾಜ್ಯ ಮಟ್ಟದಲ್ಲಿ ಅವಕಾಶ ಕೊಟ್ಟಿದ್ದಾರೆ ಎಂದರು.
ನೀಡಿದರು.

ಕುಮಾರಸ್ವಾಮಿ ನನ್ನ ಸ್ನೇಹಿತರು ಎಂಬ ಯೋಗೇಶ್ವರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಎಚ್‌ಡಿಕೆ ಯೋಗೇಶ್ವರ್‌ ಸಹ ವೈಯಕ್ತಿಕವಾಗಿ ನನ್ನ ಸ್ನೇಹಿತರು. ಯಡಿಯೂರಪ್ಪ ಸಹ ನನ್ನ ಸ್ನೇಹಿತರೇ. ಆದರೆ ಕಾರ್ಯಕರ್ತರ ಕುತ್ತಿಗೆ ಕೊಯ್ದು ಸ್ನೇಹ ಉಳಿಸಿಕೊಳ್ಳಲು ಆಗದು ಎಂದು ಕುಮಾರಸ್ವಾಮಿ ಮಾರ್ಮಿಕವಾಗಿ ಉತ್ತರಿಸಿದರು.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ