NEWSನಮ್ಮರಾಜ್ಯರಾಜಕೀಯ

ಸಚಿವ ಸಂಪುಟ ವಿಸ್ತರಣೆಯಾಗಿ ವಾರ ಕಳೆದರೂ ತಣಿಯದ ಸ್ಥಾನ ವಂಚಿತರ ಆಕ್ರೋಶ

32 ಸಚಿವರನ್ನೂ ಕೈಬಿಟ್ಟು, ಹೊಸದಾಗಿ ಸಂಪುಟ ರಚಿಸಬೇಕು-ಶಿವನಗೌಡ ನಾಯಕ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಅಸಮಾಧಾನ ಮತ್ತೊಮ್ಮೆ ಭುಗಿಲೇಳುವ ಎಲ್ಲಾ ಲಕ್ಷಣಗಳು ಗೋಚರಿಸಿವೆ. ಗೃಹ ಸಚಿವ ಅಮಿತ್‌ ಷಾ ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಖಡಕ್‌ ಸೂಚನೆ ಕೊಟ್ಟು ಹೋಗಿದ್ದರೂ ಅತೃಪ್ತರ ಸಿಟ್ಟು ಇನ್ನೂ ತಣಿದಿಲ್ಲ.

ಈಗಿರುವ ಎಲ್ಲ 32 ಸಚಿವರನ್ನೂ ಕೈಬಿಟ್ಟು, ಹೊಸದಾಗಿ ಸಂಪುಟ ರಚಿಸಬೇಕು. ಕೈಬಿಟ್ಟವರಿಗೆ ಪಕ್ಷದ ಸಂಘಟನೆ ಹೊಣೆ ಮತ್ತು ಹಿರಿತನ ಆಧರಿಸಿ ಹೊಸಬರಿಗೆ ಅವಕಾಶ ನೀಡಬೇಕು ಎಂದು ದೇವದುರ್ಗ ಶಾಸಕ ಶಿವನಗೌಡ ನಾಯಕ್ ಒತ್ತಾಯಿಸಿದ್ದಾರೆ.

ಬ್ಲ್ಯಾಕ್‌ ಮೇಲರ್‌ಗಳಿಗೆ ಸಚಿವ ಸ್ಥಾನ ನೀಡಲಾಗಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆ ರೀತಿ ಯಾವುದೂ ಆಗಿಲ್ಲ. ಸಚಿವಾಕಾಂಕ್ಷಿಗಳು ಪರಸ್ಪರ ದೂರವಾಣಿ ಸಂಪರ್ಕದಲ್ಲಿದ್ದಾರೆ. ಅಸಮಾಧಾನ ಇರುವುದು ಸಹಜ ಎಂದರು.

ಇನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಗೆ ದೂರು ನೀಡಿದ್ದರೆ, ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಅವರು ಬೆಂಗಳೂರಿನಲ್ಲಿ ಅಳಲು ತೋಡಿಕೊಂಡಿದ್ದಾರೆ.

ದೆಹಲಿಯಲ್ಲಿ ಪ್ರಲ್ಹಾದ ಜೋಶಿ ಭೇಟಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ರೇಣುಕಾಚಾರ್ಯ, ಸಚಿವ ಸಂಪುಟ ವಿಸ್ತರಣೆ ಮತ್ತು ಆ ಬಳಿಕ ನಡೆದ ರಾಜಕೀಯ ಬೆಳವಣಿಗಳ ಬಗ್ಗೆ ಮಾತನಾಡಿದ್ದೇನೆ. ಸೋತವರನ್ನು ಮಂತ್ರಿ ಮಾಡಿದ್ದು ಸರಿಯಲ್ಲ. ನನಗಿಂತಲೂ ಹಿರಿಯರಾದ ಹಲವು ಶಾಸಕರು ಇದ್ದಾರೆ. ಅವರನ್ನು ಮಂತ್ರಿ ಮಾಡಬಹುದಿತ್ತು ಎಂದು ಹೇಳಿದ್ದೇನೆ ಎಂದು ತಿಳಿಸಿದರು.

ಈ ನಡುವೆ ಯೋಗೇಶ್ವರ್ ಅವರನ್ನು ಮಂತ್ರಿ ಮಾಡಿದ್ದು ಸರಿಯಲ್ಲ ಎಂಬುದನ್ನು ಮುಖ್ಯಮಂತ್ರಿ ಮತ್ತು ವರಿಷ್ಠರಿಗೆ ಹೇಳಿದ್ದೆವು. ಯೋಗೇಶ್ವರ್‌ ಅವರಿಂದಲೇ ಬಿಜೆಪಿ ಸರ್ಕಾರ ಬಂದಿತು ಎಂಬುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ರೇಣುಕಾಚಾರ್ಯ ಹೇಳಿದರು.

ಇನ್ನು ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಶಾಸಕರಾದ ಅರವಿಂದ ಬೆಲ್ಲದ ಮತ್ತು ಬಿ.ಸಿ.ನಾಗೇಶ್‌ (ತಿಪಟೂರು) ಜತೆ ಮಾತುಕತೆ ನಡೆಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಅವರನ್ನು ಸಮಾಧಾನಪಡಿಸಿದ್ದಾರೆ. ಅತೃಪ್ತ ಶಾಸಕರು ಬುಧವಾರ ಸಭೆ ಸೇರಲಿದ್ದಾರೆ ಎಂಬ ಮಾಹಿತಿ ಸಿಕ್ಕಿದ ಬೆನ್ನಲ್ಲೇ ಯಡಿಯೂರಪ್ಪ ಬಸವರಾಜ ಬೊಮ್ಮಾಯಿ ಮೂಲಕ ಶಾಸಕರನ್ನು ಸಂಪರ್ಕಿಸಿ ಸಮಾಧಾನಗೊಳಿಸುವ ಪ್ರಯತ್ನ ನಡೆಸಿದರು.

ರಾಜ್ಯದಲ್ಲಿ ಮೂರು ಬಾರಿ ಬಿಜೆಪಿ ಸರ್ಕಾರ ಬಂದಿದೆ. ಆದರೆ, ಪ್ರತಿ ಬಾರಿ ಕೆಲವರೇ ಮತ್ತೆ ಮತ್ತೆ ಸಚಿವರಾಗುತ್ತಿದ್ದಾರೆ. ಖಾತೆ ನಿಭಾಯಿಸುವ ಶಕ್ತಿ ಇರುವ ಇತರರಿಗೆ ಅವಕಾಶ ಕೊಡುತ್ತಿಲ್ಲ ಎಂದು ತಿಪ್ಪಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.

ಖಾತೆ ಹಂಚಿಕೆ ಗುರುವಾರ
ನೂತನ ಸಚಿವರ ಖಾತೆ ಹಂಚಿಕೆ ಪಟ್ಟಿಯನ್ನು ಗುರುವಾರ ಪ್ರಕಟಿಸಲಾಗುವುದು. ಇಂದು (ಬುಧವಾರ) ಈ ಸಂಬಂಧ ಹಿರಿಯ ಸಚಿವರ ಜತೆಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಉಡುಪಿಯಿಂದ ತಡವಾಗಿ ಬಂದ ಕಾರಣ ಮತ್ತು ಪೂರ್ವ ನಿರ್ಧಾರಿತ ಸಭೆಗಳಲ್ಲಿ ಹಾಜರಾಗಬೇಕಾಗಿದ್ದರಿಂದ ಸಚಿವರ ಜತೆ ಮಂಗಳವಾರ ನಡೆಯಬೇಕಿದ್ದ ಸಭೆಯನ್ನು ರದ್ದುಪಡಿಸಲಾಯಿತು. ಗುರುವಾರ ಸಚಿವ ಸಂಪುಟ ಸಭೆ ಇರುವುದರಿಂದ ಅದಕ್ಕೆ ಮೊದಲೇ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ