NEWSಕೃಷಿನಮ್ಮರಾಜ್ಯ

ರೈತರ ಬಗ್ಗೆ ಕೀಳು ಮಟ್ಟದ ಹೇಳಿಕೆ: ಕೃಷಿ ಸಚಿವರ ರಾಜೀನಾಮೆಗೆ ಜೆಡಿಎಸ್‌ ನಾಯಕರ ಪಟ್ಟು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರೈತನ ಸಂಕಷ್ಟದ ಪರಿಸ್ಥಿತಿಯನ್ನು ಗೇಲಿ ಮಾಡುವ ಬಿ.ಸಿ. ಪಾಟೀಲ್‌ ವರ್ತನೆಯೇ ದುರ್ಬಲ ಮನಸ್ಸಿನ ಪ್ರತೀಕ. ಅವರ ವರ್ತನೆ ಅಕ್ಷಮ್ಯ ಹೀಗಾಗಿ ಈ ಕೂಡಲೇ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಬಿ.ಸಿ. ಪಾಟೀಲ್ ಅವರಿಂದ ರಾಜೀನಾಮೆ ಪಡೆದು ಸಂಪುಟದಿಂದ ಹೊರಹಾಕಬೇಕು ಎಂದು ಜೆಡಿಎಸ್​ ಶಾಸಕರು ಮಾಜಿ ಸಚಿವರಾದ ಸಿ.ಎಸ್​. ಪುಟ್ಟರಾಜು ಹಾಗೂ ಸಾರಾ ಮಹೇಶ್​ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಸಚಿವ ಬಿ.ಸಿ. ಪಾಟೀಲ್ ವಿರುದ್ಧ ಕಿಡಿಕಾರಿರುವ ಸಾರಾ ಮಹೇಶ್​, ಕೃಷಿ ಇಲಾಖೆಯಲ್ಲಿ ವರ್ಗಾವಣೆ ಹೆಸರಿನಲ್ಲಿ ಸಚಿವರು, ಅಧಿಕಾರಿಗಳಿಂದ ಭ್ರಷ್ಟಾಚಾರ ನಡೆಯುತ್ತಿದೆ. ಈ ಬಗ್ಗೆ ಇಲಾಖೆ ಸಿಬ್ಬಂದಿಯೇ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದಾರೆ. ಸಮಸ್ಯೆ ಸರಿಪಡಿಸದಿದ್ದರೆ ಸಾಮೂಹಿಕವಾಗಿ ದಯಾಮರಣಕ್ಕೆ ಅರ್ಜಿ ಸಲ್ಲಿಸುವುದಾಗಿ ಎಚ್ಚರಿಸಿದ್ದಾರೆ.

ಈ ಭ್ರಷ್ಟಾಚಾರ ಆರೋಪ ಬಂದಿದ್ದು ಹೇಗೆ…? ಇದು ಎಂಥ ದೌರ್ಬಲ್ಯ…? ಆತ್ಮಹತ್ಯೆ ಮಾಡಿಕೊಳ್ಳುವ ರೈತರು ದುರ್ಬಲ ಮನಸ್ಸಿನವರು ಎನ್ನುವ ಪಾಟೀಲರು ತಮ್ಮ ಹಣದ ದೌರ್ಬಲ್ಯದ ಬಗ್ಗೆ ಏಕೆ ಮಾತಾಡುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.

ರೈತನ ಸಂಕಷ್ಟದ ಪರಿಸ್ಥಿತಿಯನ್ನು ಗೇಲಿ ಮಾಡುವ ಪಾಟೀಲ್‌ ವರ್ತನೆಯೇ ದುರ್ಬಲ ಮನಸ್ಸಿನ ಪ್ರತೀಕ. ಅವರ ವರ್ತನೆ ಅಕ್ಷಮ್ಯ. ಕೈಲಾದರೆ ರೈತರಿಗೆ ಒಳ್ಳೆದು ಮಾಡಿ, ಆದರೆ ಹೀಗೆಲ್ಲ ಮಾತನಾಡಬೇಡಿ. ಅಲ್ಲದೆ, ಕೃಷಿ ಇಲಾಖೆಯ ಸಿಬ್ಬಂದಿಯೇ ಮಾಡಿರುವ ಲಂಚದ ಆರೋಪದ ಕುರಿತು ಸ್ಪಷ್ಟನೆ ನೀಡಿ ಮೊದಲು ರೈತರ ಬಳಿ ಕ್ಷಮೆ ಕೇಳಿ ಎಂದು ಕಿಡಿಕಾರಿದ್ದಾರೆ.

ಮತ್ತೊಂದೆಡೆ ಸಚಿವರ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಮಾಜಿ ಸಚಿವ ಸಿ.ಎಸ್​. ಪುಟ್ಟರಾಜು, ಸಮಸ್ಯೆಗಳಿಗೆ ಸಿಕ್ಕು ಮಾನಸಿಕವಾಗಿ ಕುಗ್ಗಿಹೋದ ರೈತನೇ ಆತ್ಮಹತ್ಯೆ ಮಾಡಿಕೊಳ್ಳುವುದು. ರೈತನ ಈ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿದು, ಸಂಕಷ್ಟಗಳಿಂದ ಪಾರು ಮಾಡಬೇಕಾದ್ದು ಜನಪ್ರತಿನಿಧಿಗಳು ಎನಿಸಿಕೊಂಡ, ಅದರಲ್ಲೂ ಕೃಷಿ ಇಲಾಖೆ ನೇತೃತ್ವ ವಹಿಸಿಕೊಂಡವರ ಹೊಣೆ. ಅದು ಬಿಟ್ಟು ಜೀವ ತೊರೆದ ರೈತನನ್ನು ಸಾವಿನ ನಂತರವೂ ಗೇಲಿ ಮಾಡುವುದು ವಿಕೃತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಸಿದ ರೈತನಿಗೆ ಶಕ್ತಿ ತುಂಬುವುದು ಬಿಟ್ಟು ಅವನನ್ನು ‘ಮಾನಸಿಕ ದುರ್ಬಲ’ ಎಂದು ಅಣಕಿಸುವುದು ಕೂಡ ದುರ್ಬಲ ಮನಸ್ಸುಗಳ ವರ್ತನೆಯೇ. ಬಿ.ಸಿ. ಪಾಟೀಲರು ತಮಗೆ ಸಿಕ್ಕ ಅವಕಾಶವನ್ನು ಬಳಸಿಕೊಂಡು ಕೃಷಿ ರಂಗದ ಅಭಿವೃದ್ಧಿಯತ್ತ ಗಮನಹರಿಸಬೇಕೇ ಹೊರತು, ಸುಪ್ತವಾಗಿರುವ ತಮ್ಮ ಮಾನಸಿಕ ದೌರ್ಬಲ್ಯವನ್ನು ಇನ್ನೊಬ್ಬರ ಮೇಲೆ ಹೊರಿಸುತ್ತಾ ಹೋಗಬಾರದು ಎಂದು ಹೇಳಿದ್ದಾರೆ.

ಪಾಟೀಲ್‌ ಈ ಹಿಂದೆಯೂ ರೈತರ ಬಗ್ಗೆ ಇದೇ ರೀತಿಯ ಕ್ಷುಲ್ಲಕ ಹೇಳಿಕೆಗಳನ್ನು ನೀಡಿದ್ದರು. ಈಗಲೂ ಹಾಗೇ ಮಾತಾಡಿದ್ದಾರೆ. ರೈತರ ಕುರಿತು ಲಘುವಾಗಿ ಮಾತಾಡುವ, ಅವರ ಕಷ್ಟಗಳನ್ನು ಗೇಲಿ ಮಾಡಿರುವ ಇವರು ಕೂಡಲೇ ರೈತನ ಕ್ಷಮೆ ಕೇಳಬೇಕು. ಇನ್ನು ಮುಂದೆ ತಮ್ಮ ವರ್ತನೆಗೆ ಕಡಿವಾಣ ಹಾಕಿಕೊಳ್ಳಬೇಕು ಎಂದು ತಾಕೀತು ಮಾಡಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ