Vijayapatha – ವಿಜಯಪಥ
Saturday, November 2, 2024
CrimeNEWSದೇಶ-ವಿದೇಶನಮ್ಮಜಿಲ್ಲೆ

ಕಲ್ಲುಗಣಿಪ್ರದೇಶದಲ್ಲಿ ಜಿಲೆಟಿನ್ ಸ್ಫೋಟ : ಭೂ ಮಾಲೀಕ ಸೇರಿ ಮೂವರ ಬಂಧನ

ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿ ಟ್ವೀಟ್‌ ಮಾಡಿದ ಪ್ರಧಾನಿ ನರೇಂದ್ರ ಮೋದಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಶಿವಮೊಗ್ಗ : ಹುಣಸೋಡು ಗಡಿ ಪ್ರದೇಶದಲ್ಲಿ ಜಿಲೆಟಿನ್ ಸ್ಫೋಟ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನು ಮಾಲೀಕ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸ್ಫೋಟ ಸಂಭವಿಸಿದ ಕಲ್ಲು ಗಣಿಗಾರಿಕೆ ಜಮೀನು ಮಾಲೀಕ ಅವಿನಾಶ್ ಕುಲಕರ್ಣಿ, ಗುತ್ತಿಗೆದಾರ ಸುಧಾಕರ್ ಹಾಗೂ ಅಕ್ರಮ ಕಲ್ಲು ಗಣಿಗಾರಿಕೆ, ಅಕ್ರಮ ಜಿಲೆಟಿನ್ ಪೂರೈಕೆ ಮಾಡುತ್ತಿದ್ದ ಜೆಡಿಎಸ್ ಮುಖಂಡ ನರಸಿಂಹ ಎಂಬುವರನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಿನ್ನೆ ರಾತ್ರಿ 10.25 ರ ಸುಮಾರಿಗೆ ಹುಣಸೋಡ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಜಿಲೆಟಿನ್ ತುಂಬಿದ್ದ ಲಾರಿ ಸ್ಫೋಟಗೊಂಡ ಪರಿಣಾಮ 15 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸ್ಪೋಟದ ರಭಸಕ್ಕೆ ಶವಗಳು ಛಿದ್ರ ಛಿದ್ರವಾಗಿವೆ. ಕಾರ್ಮಿಕರು ಬಿಹಾರದ ಮೂಲದವರು ಎನ್ನಲಾಗುತ್ತಿದೆ. ಸುತ್ತಮುತ್ತ 500 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಲವು ಮರಗಳು, ಲೈಟ್‌ ಕಂಬಗಳು ಬಿದ್ದಿವೆ. ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ಕಡಿತಗೊಂಡಿದ್ದು, ಕತ್ತಲು ಆವರಿಸಿದೆ.

ಈ ಮಧ್ಯೆ, ಘಟನೆಗೆ ಅಕ್ರಮ ಕ್ವಾರಿಗಳೆ ಕಾರಣ. ‌ಈ ಭಾಗದಲ್ಲಿ ಸುಮಾರು 50 ಕ್ಕೂ ಹೆಚ್ಚು ಕ್ವಾರಿಗಳಿದ್ದು ಅಕ್ರಮಗಳು ಎಗ್ಗಿಲ್ಲದೆ ನಡೆಯುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮಾಹಿತಿ ಕೊಟ್ಟರೂ ಯಾವ ಇಲಾಖೆಯ ಅಧಿಕಾರಿಗಳೂ ಕ್ರಮ ಕೈಗೊಂಡಿಲ್ಲ.‌ ಸ್ಥಳಿಯರನ್ನು ಕೂಡ ಕ್ವಾರಿ ಹತ್ತಿರಕ್ಕೂ ಬಿಡದಂತೆ ಅಕ್ರಮ ಎಸಗುತ್ತಿದ್ದರು. ಈಗಲಾದರೂ ಕ್ವಾರಿಗಳ ಸ್ಥಳಾಂತರ ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕೆಲ ವರದಿಗಳ ಪ್ರಕಾರ ಭೂಕಂಪವಾಗಿ ಅದರಿಂದ ಜಿಲಾಟಿನ್ ಕಡ್ಡಿಗಳು ಘರ್ಷಣೆಗೊಂಡು ಸ್ಫೋಟವಾಗಿರಬಹುದು ಎಂಬ ಶಂಕೆ ಇದೆ. ಆದರೆ, ಭೂಕಂಪನ ಮಾಪಕ ಕೇಂದ್ರದಲ್ಲಿ ಭೂಕಂಪನ ದಾಖಲಾಗಿಲ್ಲ. ಹೀಗಾಗಿ, ಡೈನಮೈಟ್ ಸ್ಫೋಟಕ್ಕೆ ಕಾರಣ ಏನೆಂಬುದು ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಈ ಘಟನೆಗೆ ಸಂತಾಪ ಸೂಚಿಸಿದ್ದಾರೆ. ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಹಾರೈಸಿ ಅವರು ಟ್ವೀಟ್ ಮಾಡಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ