Vijayapatha – ವಿಜಯಪಥ
Saturday, November 2, 2024
NEWSದೇಶ-ವಿದೇಶನಮ್ಮರಾಜ್ಯ

ಸಾರ್ವಕಾಲಿಕ ಗರಿಷ್ಠ ದಾಖಲೆ ಬರೆದ ಪೆಟ್ರೋಲ್, ಡೀಸೆಲ್‌ ಬೆಲೆ : 100 ರೂ. ದಾಟುವ ಮುನ್ಸೂಚನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಇಂದು ಪ್ರತಿ ಲೀಟರ್‌ಗೆ 85.45 ರೂ. ತಲುಪಿದೆ. ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ಸುಮಾರು 25 ಪೈಸೆ ಹೆಚ್ಚಿಸಿವೆ. ಈ ಮೂಲಕ ಇದು ಸಾರ್ವಕಾಲಿಕ ಗರಿಷ್ಠ ಮಟ್ಟದ ಪೆಟ್ರೋಲ್ ಬೆಲೆ ಏರಿಕೆ ಎನ್ನಲಾಗುತ್ತಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಅದರಂತೆ ಮುಂಬೈಯಲ್ಲಿ ಪ್ರತಿ ಲೀಟರ್‌ಗೆ ದಾಖಲೆಯ ಗರಿಷ್ಠ 92.04 ರೂ. ತಲುಪಿದೆ. ಮತ್ತೊಂದೆಡೆ, ಡೀಸೆಲ್​ ಬೆಲೆಯೂ 25 ಪೈಸೆ ಏರಿಕೆ ಮಾಡಲಾಗಿದ್ದು, ಪ್ರತಿ ಲೀಟರ್‌ಗೆ 75.63 ರೂ.ಗೆ ಮಾರಾಟ ಮಾಡಲಾಗುತ್ತಿದೆ.

ಈ ತಿಂಗಳ ಜನವರಿ 18 ರಂದು ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 25 ಪೈಸೆ ಹೆಚ್ಚಿಸಿದ ನಂತರ ಇಂಧನ ಬೆಲೆಗಳು ಜನವರಿ 18 ರ ಬೆಳಗ್ಗೆ ದಾಖಲೆಯ ಗರಿಷ್ಠ 84.95 ರೂ. ತಲುಪಿತ್ತು.

ಮುಂಬೈಯಲ್ಲಿ ಪ್ರತಿ ಲೀಟರ್‌ಗೆ ಪೆಟ್ರೋಲ್ ಬೆಲೆ 91.56 ರೂ. ತಲುಪಿತ್ತು. ತೈಲ ಕಂಪೆನಿಗಳು ಇದೀಗ ಮತ್ತೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್​ ಬೆಲೆಯನ್ನು ಏರಿಕೆ ಮಾಡಿವೆ. ತೈಲ ಕಂಪನಿಗಳು ಕಳೆದ 20 ದಿನಗಳಿಂದ ಮಧ್ಯಮಧ್ಯೆಯೇ ತೈಲ ಬೆಲೆ ಏರಿಸುತ್ತಿವೆ.

ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ದೈನಂದಿನ ಬೆಲೆ ಪರಿಷ್ಕರಣೆ ಪುನರಾರಂಭದ ಪರಿಣಾಮವಾಗಿಯೇ ತೈಲ ಬೆಲೆ ಏರಿಕೆಯಾಗುತ್ತಿದೆ ಎನ್ನಲಾಗುತ್ತಿದೆ.

2020ರ ಮಧ್ಯದಲ್ಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 80 ರೂ. ದಾಟುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿತ್ತು. ಆದರೆ, ಇದೀಗ ತೈಲ ಕಂಪನಿಗಳು ಮತ್ತೆ ಮತ್ತೆ ಪ್ರತಿದಿನ ಬೆಲೆ ಪರಿಷ್ಕರಣೆ ಮಾಡುತ್ತಿರುವ ಪರಿಣಾಮ ದೆಹಲಿ ಮತ್ತು ಮುಂಬೈನಲ್ಲಿ ಶೀಘ್ರದಲ್ಲೆ ಪೆಟ್ರೋಲ್-ಡೀಸೆಲ್ ಬೆಲೆ 100 ರೂ. ದಾಟಲಿದೆ ಎನ್ನಲಾಗುತ್ತಿದೆ.

ದೇಶಾದ್ಯಂತ ದರಗಳನ್ನು ಹೆಚ್ಚಿಸಲಾಗಿದೆ ಆದರೆ ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್‌ನ ಪ್ರಮಾಣವನ್ನು ಅವಲಂಬಿಸಿ ಅಂತಿಮ ಚಿಲ್ಲರೆ ಮಾರಾಟದ ಬೆಲೆ ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ