ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬಳಿಕ ಖಾತೆ ಹಂಚಿಕೆ ವೇಳೆ ಭುಗಿಲೆದ್ದಿದ್ದ ಅಸಮಾಧಾನ ಶಮನಗೊಳಿಸುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಚಿವರ ಖಾತೆ ಹಂಚಿಕೆಯಲ್ಲಿ ಸಣ್ಣ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಸರ್ಕಾರದ ನೂತನ ಆದೇಶದಂತೆ ಸಚಿವರಾದ ಕೆ.ಸಿ. ನಾರಾಯಣ ಗೌಡ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯನ್ನು ನೀಡಲಾಗಿದೆ.
ಸಚಿವ ಅರವಿಂದ ಲಿಂಬಾವಳಿ ಅವರಿಗೆ ಅರಣ್ಯ ಇಲಾಖೆಯ ಜತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಆರ್. ಶಂಕರ್ ಅವರಿಗೆ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಜವಾಬ್ದಾರಿ ನೀಡಲಾಗಿದೆ.
ಇನ್ನು ಸಚಿವರಾದ ಗೋಪಾಲಯ್ಯ ಅವರಿಗೆ ಅಬಕಾರಿ ಖಾತೆಯನ್ನು, ಎಂಟಿಬಿ ನಾಗರಾಜ್ ಅವರಿಗೆ ಪೌರಾಳಿಡತ ಮತ್ತು ಸಕ್ಕರೆ ಖಾತೆ ಜವಾಬ್ದಾರಿ ನೀಡಲಾಗಿದೆ.
ಅಂತೆಯೇ ಜೆ.ಸಿ. ಮಾಧುಸ್ವಾಮಿ ಅವರಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಜತೆ ಹಜ್ ಮತ್ತು ವಕ್ಫ್ ಇಲಾಖೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.