NEWSಕೃಷಿನಮ್ಮಜಿಲ್ಲೆನಮ್ಮರಾಜ್ಯ

ಎತ್ತಿನ ಹೊಳೆ ಯೋಜನೆ 2ನೇ ಹಂತದ 33 ಕಿ.ಮೀ ಕಾಮಗಾರಿ ಶೀಘ್ರ ಪೂರ್ಣ: ರಮೇಶ್ ಜಾರಕಿಹೊಳಿ.

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಹಾಸನ: ಎತ್ತಿನಹೊಳೆ ಯೋಜನೆಯ ಹಂತ 1 ಮತ್ತು 2 ಕಾಮಗಾರಿಗಳು 33 ಕಿ.ಮೀ.ವರೆಗಿನ ಗುರುತ್ವಾ ಕಾಲುವೆ ಕಾಮಗಾರಿಗಳನ್ನು ಇದೇ ಮೇ ತಿಂಗಳೊಳಗೆ ಪೂರ್ಣಗೊಳಿಸಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ರಮೆಶ್ ಜಾರಕಿಹೊಳಿ ತಿಳಿಸಿದ್ದಾರೆ.

ಜಿಲ್ಲೆಯ ಬೇಲೂರು ತಾಲೂಕಿನ ಬೆಟ್ಟದ ಆಲೂರು ಗ್ರಾಮದ ಬಳಿ ಎತ್ತಿನಹೊಳೆ ಯೋಜನಾ ಕಾಮಗಾರಿಯನ್ನು ಪರಿವೀಕ್ಷಿಸಿದ ಸಚಿವರು, ಸುದ್ದಿಗಾರರೊಂದಿಗೆ ಮಾತನಾಡಿ ಮುಂದಿನ ಮಳೆಗಾಲದಲ್ಲಿ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಜಲಾಶಯಕ್ಕೆ ವೇದಾವತಿ ಕಣಿವೆ ಮೂಲಕ ತಾತ್ಕಾಲಿಕವಾಗಿ ನೀರು ಹರಿಸಲಾಗುತ್ತದೆ ಎಂದು ತಿಳಿಸಿದರು.

ಪ್ರಾಯೋಗಿಕ ನೀರನ್ನು ವೇದಾವತಿ ಕಣಿವೆಯ ಮೂಲಕ ಹರಿಸಲು ಯೋಜನೆಯನ್ನು ರೂಪಿಸಲಾಗಿದೆ. ತುಮಕೂರಿನ ಭೈರಗೊಂಡ್ಲು ಜಲಾಶಯದ ಕಾಮಗಾರಿ ನಡೆಯದೇ ಇರುವುದರಿಂದ ಪ್ರಾಯೋಗಿಕವಾಗಿ ಈ ರೀತಿ ನೀರನ್ನು ಹರಿಸಿ, ಪರೀಕ್ಷೆ ನಡೆಸಲಾಗುತ್ತದೆ ಎಂದರು.

ಎತ್ತಿನಹೊಳೆ ಯೋಜನೆಗಾಗಿ ಜಮೀನು ಕಳೆದುಕೊಳ್ಳುವ ರೈತರಿಗೆ ಹೊಸ ಭೂಸ್ವಾಧೀನ ಕಾಯ್ದೆ 2013 ರ ಪ್ರಕಾರ ಪ್ರಕ್ರಿಯೆಯನ್ನು ಕೈಗೊಂಡಿದ್ದು ರೈತರಿಗೆ ಹಣವನ್ನು ಪಾವತಿಸಲು ಕ್ರಮ ವಹಿಸಲಾಗುವುದು ಹಾಗೂ ಹಂತ ಹಂತವಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಕಾಮಗಾರಿಗಳನ್ನು ನಿರ್ವಹಿಸಲಾಗುತ್ತದೆ. ಯೋಜನೆಗೆ ಆರಂಭಿಕ ಮೊತ್ತ 12,912.36 ಕೋಟಿ ರೂ. ನಿಗದಿಗೊಳಿಸಿದ್ದು, ಎರಡೂ ಹಂತಗಳಲ್ಲಿ ಈವರೆಗೆ ಒಟ್ಟು 7013.3 ಕೋಟಿ ರೂ. ವೆಚ್ಚವಾಗಿದೆ ಎಂದು ಹೇಳಿದರು.

ಹಾಗೂ ಯಾವುದೇ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಆದಷ್ಟು ಶೀಘ್ರವಾಗಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಸಣ್ಣ ನೀರಾವರಿ ಸಚಿವ ಸಿ.ಪಿ. ಯೋಗೇಶ್ವರ್, ಶಾಸಕರಾದ ಕೆ.ಎಂ. ಶಿವಲಿಂಗೆಗೌಡ, ಕೆ.ಎಸ್.ಲಿಂಗೇಶ್ ಹಾಗೂ ಎತ್ತಿನ ಹೊಳೆ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಲಕ್ಷಣರಾವ್, ಮುಖ್ಯ ಇಂಜಿನಿಯರ್ ಮಾಧವ, ಸೂಪರಿಂಟೆಂಡೆಂಟ್‌ ಇಂಜಿನಿಯರ್ ಶಿವಾರಂ, ಕಾರ್ಯನಿರ್ವಾಹಕ ಇಂಜಿನಿಯರ್ ಶರ್ಮಾ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಮೇಶ್.ಕೆ.ಆರ್. ಇದ್ದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ