NEWSನಮ್ಮರಾಜ್ಯರಾಜಕೀಯ

ಬಿಜೆಪಿಯ ವಲಸೆ ಸಚಿವರು ಆರು ತಿಂಗಳಲ್ಲಿ ಮಂತ್ರಿ ಸ್ಥಾನ ಕಳೆದುಕೊಳ್ಳುವರು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಭವಿಷ್ಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಸರ್ಕಾರವನ್ನು ಬೀಳಿಸಿ, ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿ, ಬಳಿಕ ಬಿಜೆಪಿ ಸೇರಿ ಮತ್ತೆ ಶಾಸಕರಾಗಿ ಸಚಿವ ಸ್ಥಾನವನ್ನು ಪಡೆದುಕೊಂಡಿರುವ ಬಿಜೆಪಿಯ ವಲಸೆ ಸಚಿವರು ಆರು ತಿಂಗಳಲ್ಲಿ ಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಎಸ್‌.ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವ ಗೋಪಾಲಯ್ಯ, ಬಿ.ಸಿ. ಪಾಟೀಲ್‌, ನಾರಾಯಣಗೌಡ, ಆರ್‌. ಶಂಕರ್‌, ಸುಧಾಕರ್‌ ಇನ್ನು ಆರು ತಿಂಗಳಲ್ಲಿ ತಮ್ಮ ಮಂತ್ರಿ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ಈ ಬಗ್ಗೆ ಅಧಿಕೃತ ಮಾಹಿತಿ ಇದೆ ಎಂದು ಹೇಳಿದರು. ಆದರೆ ಅದಕ್ಕೆ ಕಾರಣ ಏನು ಎಂದು ಮಾತ್ರ ತಿಳಿಸಿಲ್ಲ.

ಕೆಆರ್‌ಎಸ್‌ಗೂ ಕಾದಿದೆ ಗಂಡಾಂತರ
ಶಿವಮೊಗ್ಗ ಸ್ಫೋಟ ವಿಚಾರವಾಗಿ ಮಾತನಾಡಿದ ಅವರು ಇದೇ ರೀತಿಯ ಸ್ಫೋಟ ಕೆ.ಆರ್‌.ಎಸ್‌ ಡ್ಯಾಂ ಬಳಿಯೂ ನಡೆಯಲಿದೆ. ಕೃಷ್ಣರಾಜ ಸಾಗರ ಅಣೆಕಟ್ಟೆ ಬಳಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. 20 ಕಿಲೋ‌ ಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಲ್ಲಿಸಿ, ಇಲ್ಲವಾದರೆ ಕೆಆರ್‌ಎಸ್‌ಗೆ ಅಪಾಯವಿದೆ ಎಂದು ಎಚ್ಚರಿಸಿದರು.

ಇನ್ನು ಅಕ್ರಮವಾಗಿ ನಡೆಯುವ ಗಣಿಗಾರಿಕೆ ಸಕ್ರಮ ಮಾಡಿಕೊಳ್ಳಿ ಎಂದು ಸಿಎಂ ಯಡಿಯೂರಪ್ಪ ನೀಡಿರುವ ಹೇಳಿಕೆ ನಾನ್‌ಸೆನ್ಸ್ ನಿಂದ ಕೂಡಿದೆ. ಇದು ನಿಜಕ್ಕೂ ನಾಚಿಕೆಗೇಡಿನ ವಿಷಯ. ಇದು ಮನೆಗಳ ಅಕ್ರಮ ಸಕ್ರಮ ಯೋಜನೆಯಲ್ಲ ಎಂದು ಟೀಕಿಸಿದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ