Vijayapatha – ವಿಜಯಪಥ
Friday, November 1, 2024
NEWSಆರೋಗ್ಯನಮ್ಮರಾಜ್ಯರಾಜಕೀಯ

ನಾನು ಸಿಎಂ ಕೇಜ್ರಿವಾಲ್ ಅವರ ದೊಡ್ಡ ಅಭಿಮಾನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ನಾನು ಆರೋಗ್ಯ ಸಚಿವನಾಗಿದ್ದಾಗ ದೆಹಲಿಗೆ ಭೇಟಿಕೊಟ್ಟು ಅಲ್ಲಿನ ಮೊಹಲ್ಲಾ ಕ್ಲಿನಿಕ್‌‌, ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಆಶ್ಚರ್ಯಗೊಂಡೆ, ಅರವಿಂದ್ ಕೇಜ್ರಿವಾಲ್ ಅವರ ಕ್ರಾಂತಿಕಾರಕ ಬದಲಾವಣೆಗಳನ್ನು ನೋಡಿ ಅವರ ದೊಡ್ಡ ಅಭಿಮಾನಿಯಾದೆ ಎಂದು ಶಾಸಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಶಾಂತಿನಗರದ ಬಸಪ್ಪ ರಸ್ತೆಯಲ್ಲಿರುವ ಆಮ್ ಆದ್ಮಿ ಕ್ಲಿನಿಕ್‌ ಕಾರ್ಯವೈಖರಿ ವೀಕ್ಷಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ಜನತೆ ಒಂದೇ ಒಂದು ಬಾರೀ ಅವಕಾಶ ಕೊಟ್ಟರು. ಈ ಅವಕಾಶವನ್ನು ಅವರು ಜನಪರ ಸೇವೆ ಮಾಡುವುದಕ್ಕೆ ಬಳಸಿಕೊಂಡರು. ಕೇಜ್ರಿವಾಲ್ ಅವರು ಬದಲಾವಣೆ ತಂದಿರುವ ಆರೋಗ್ಯ, ಶಿಕ್ಷಣ, ಉಚಿತ ನೀರು, ವಿದ್ಯುತ್, ಅಗತ್ಯ ಮೂಲ ಸೌಕರ್ಯಗಳು ಎಲ್ಲಾ ರಾಜ್ಯಗಳಿಗೂ ವಿಸ್ತಾರವಾಗಬೇಕು ಎಂದರು.

ಆಮ್ ಆದ್ಮಿ ಪಕ್ಷ ಸೇರುತ್ತೀರ ಎನ್ನುವ ಪತ್ರಕರ್ತರ ಪ್ರಶ್ನೆಗೆ ” ನಾನೂ ಒಬ್ಬ ಆಮ್ ಆದ್ಮಿ ಅಂದರೆ ಜನ ಸಾಮಾನ್ಯ ಜನಸಾಮಾನ್ಯರಿಗೆ ಯಾರು ಒಳ್ಳೆಯದನ್ನು ಮಾಡುತ್ತಾರೋ ಅವರ ಜೊತೆ ನಾನು ಸದಾ ಇರುತ್ತೇನೆ, ಎಂದು ಮಾರ್ಮಿಕವಾಗಿ ಉತ್ತರಿಸಿದರು.

ಬೆಂಗಳೂರಿನ ಶಾಂತಿನಗರದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸೇರಿ ಪ್ರಾರಂಭಿಸಿರುವ ಈ ದೆಹಲಿ ಮಾದರಿಯ ಮೊಹಲ್ಲಾ ಕ್ಲಿನಿಕ್ ಯಾವುದೇ ರೀತಿಯ ಅಂತಸ್ತು, ಆದಾಯ, ಜಾತಿ ಕೇಳದೆ ಎಲ್ಲರಿಗೂ ಈ ಸೌಲಭ್ಯ ವಿಸ್ತರಿಸಿರುವುದು ನನಗೆ ಮೆಚ್ಚುಗೆಯಾದ ಅಂಶಗಳಲ್ಲಿ ಒಂದು ಎಂದು ಹೇಳಿದರು.

ಕೊರೊನಾ ಸಂಕಷ್ಟದ ನಂತರ ಸಣ್ಣ ಪುಟ್ಟ ಕಾಯಿಲೆಗಳಿಗೂ ಮಾತ್ರೆ ತೆಗೆದುಕೊಳ್ಳಲು ಜನಸಾಮಾನ್ಯ ಕಷ್ಟಪಡುತ್ತಿದ್ದಾನೆ. ಆಮ್ ಆದ್ಮಿ ಕ್ಲಿನಿಕ್‌ ಒಳಗೆ ಬಂದರೆ ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳೇ ಇದ್ದಾರೆ, ಇವರೆಲ್ಲ ಮನೆಗೆಲಸಕ್ಕೆ ಹೋಗುವಂತಹ ಹೆಣ್ಣುಮಕ್ಕಳು ಇಂತಹ ಕಟ್ಟ ಕಡೆಯ ಜನರ ಸೇವೆಗೆ ನಿಂತಿರುವ ಆಮ್ ಆದ್ಮಿಗಳಿಗೆ ವಂದನೆಗಳು ಎಂದರು.

ಆನಂತರ ಆಮ್ ಆದ್ಮಿ ಕ್ಲಿನಿಕ್‌ಗೆ ಬಂದಂತಹ ರೋಗಿಗಳ ಕುಶಲೋಪರಿ ವಿಚಾರಿಸಿದರು. ಈ ವೇಳೆ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, ರಾಜ್ಯ ಕಾರ್ಯದರ್ಶಿ ಸಂಚಿತ್ ಸಹಾನಿ, ಹಿರಿಯ ಮುಖಂಡರಾದ ಗೋಪಾಲ್ ರೆಡ್ಡಿ, ಹರಿಹರನ್, ರೇಣುಕಾ ವಿಶ್ವನಾಥನ್, ಜಂಟಿ ಕಾರ್ಯದರ್ಶಿ ದರ್ಶನ್, ಮುಖ್ಯ ವಕ್ತಾರ ಶರತ್ ಖಾದ್ರಿ ಇದ್ದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ