ವಿಜಯಪಥ ಸಮಗ್ರ ಸುದ್ದಿ
ಕೊಪ್ಪಳ: ದೆಹಲಿಯ ಕೆಂಪು ಕೋಟೆಗೆ ನುಗ್ಗಿ ದಾಂಧಲೆ ನಡೆಸಿದವರು ಭಯೋತ್ಪಾಕರು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
72 ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿ, ರೈತರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು ಇತಿಹಾಸದಲ್ಲೇ ಇಲ್ಲ ಎಂದ ಅವರು, ಕಾಂಗ್ರೆಸ್ ಸಹಾಯದಿಂದ, ರೈತರ ವೇಷದಲ್ಲಿರುವ ಭಯೋತ್ಪಾದಕರು ಮುಂದಿನ ದಿನಗಳಲ್ಲಿ ರಾಷ್ಟ್ರದ ಗಡಿಯಲ್ಲೂ ಸೈನಿಕರ ಮೇಲೆ ದಾಳಿ ಮಾಡಬಹುದು ಎಂದು ಆತಂಕ ವ್ಯಕ್ತಪಡಿಸಿದರು.
ಇನ್ನು ರೈತರು ಕೆಂಪು ಕೋಟೆಗೆ ಮುತ್ತಿಗೆ ಹಾಕಿದ ಘಟನೆಯ ಹಿಂದೆ ರೈತರ ವೇಷದಲ್ಲಿ ಕಾಂಗ್ರೆಸ್ ಮತ್ತು ಪಾಕ್ ಬೆಂಬಲಿತ ಭಯೋತ್ಪಾದಕರು ಇದ್ದಾರೆ ಎಂದು ಆರೋಪಿಸಿದರು.
ಅಮಾಯಕ ರೈತರ ಸೋಗಿನಲ್ಲಿ ಇಂಥ ಕೃತ್ಯ ಎಸಗಿ ದೇಶದ ಘನತೆಗೆ ಚ್ಯುತಿ ತಂದಿದ್ದಾರೆ ಇವರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಹೇಳಿದರು.