ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಉಗ್ರರಿಗೆ ಹೋಲಿಕೆ ಮಾಡಿದ ರಾಜ್ಯದ ಕೃಷಿ ಸಚಿವ ಬಿ.ಸಿ. ಪಾಟೀಲ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ದೂರು ದಾಖಲಿಸಿದ್ದಾರೆ.
72 ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕೊಪ್ಪಳದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಸಚಿವರು, ರೈತರು ಕೆಂಪು ಕೋಟೆಗೆ ಮುತ್ತಿಗೆ ಹಾಕಿದ ಘಟನೆಯ ಹಿಂದೆ ರೈತರ ವೇಷದಲ್ಲಿ ಕಾಂಗ್ರೆಸ್ ಮತ್ತು ಪಾಕ್ ಬೆಂಬಲಿತ ಭಯೋತ್ಪಾದಕರು ಇದ್ದಾರೆ ಎಂದು ಹೇಳಿದ್ದರು.
ಹೀಗಾಗಿ ದೆಹಲಿ ಕೆಂಪುಕೋಟೆಗೆ ನುಗ್ಗಿದ್ದ ಪ್ರತಿಭಟನಾಕಾರರ ಕುರಿತು ಮಾತನಾಡಿದ್ದ ಸಚಿವ ಪಾಟೀಲ್ ದೆಹಲಿಯ ಕೆಂಪು ಕೋಟೆಗೆ ನುಗ್ಗಿದವರು ರೈತರಲ್ಲ. ಭಯೋತ್ಪಾಕರು ಎಂದು ಹೇಳಿದ್ದಾರೆ. ಇದು ಸಮಾಜದ ಶಾಮತಿ ಕದಡುವ ಯತ್ನ ಎಂದು ಆರೋಪಿಸಿದರುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ತೆರೆಳಿ ಕೃಷಿ ಸಚಿವರ ವಿರುದ್ಧ ದೂರು ದಾಖಲಿಸಿದ್ದಾರೆ.
ಭಾರತೀಯ ಧ್ವಜ ಮತ್ತು ಕೆಂಪು ಕೋಟೆಗೆ ವಿಶೇಷ ಸ್ಥಾನಮಾನ ಇದ್ದು, ಸಾಂವಿಧಾನಿಕ ಪಾವಿತ್ರ್ಯವನ್ನು ಹೊಂದಿದೆ. ವಿಶೇಷವಾಗಿ ಗಣರಾಜ್ಯೋತ್ಸವದಂದು ಅವಮಾನಿಸುವುದು ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಕಪ್ಪು ಚುಕ್ಕೆಯಾಗಿದೆ. ಇದು ಅತ್ಯಂತ ಖಂಡನೀಯ ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ರೈತರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು ಇತಿಹಾಸದಲ್ಲೇ ಇಲ್ಲ ಮತ್ತು ಇದು ಅವರ ಸಂಸ್ಕೃತಿ ಅಲ್ಲ. ಕಾಂಗ್ರೆಸ್ ಸಹಾಯದಿಂದ, ರೈತರ ವೇಷದಲ್ಲಿರುವ ಭಯೋತ್ಪಾದಕರು ಮುಂದಿನ ದಿನಗಳಲ್ಲಿ ರಾಷ್ಟ್ರದ ಗಡಿಯಲ್ಲೂ ಸೈನಿಕರ ಮೇಲೆ ದಾಳಿ ಮಾಡಬಹುದು ಎಂದು ಬಿಸಿ ಪಾಟೀಲ್ ಹೇಳಿದ್ದರು.
ಈ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.