Vijayapatha – ವಿಜಯಪಥ
Friday, November 1, 2024
NEWSಕೃಷಿದೇಶ-ವಿದೇಶನಮ್ಮಜಿಲ್ಲೆರಾಜಕೀಯ

ದೆಹಲಿ ಹಿಂಸಾಚಾರ ದುರದೃಷ್ಟಕರ: ರೈತರನ್ನು ದೂಷಿಸುವಂಥ ಹೇಳಿಕೆಗಳಿಂದ ಮನಸ್ಸಿಗೆ ನೋವಾಗಿದೆ- ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರೈತರ ಐತಿಹಾಸಿಕ ಹೋರಾಟದ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರ ದುರದೃಷ್ಟಕರ. ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳು ಇದರಲ್ಲಿ ಸೇರಿರಬಹುದು. ಈಗಾಗಲೇ ರೈತರೂ ಇದನ್ನು ಸ್ಪಷ್ಟಪಡಿಸಿದ್ದಾರೆ. ನ್ಯಾಯವಾದ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಲು ಚಳಿ, ಗಾಳಿಯನ್ನೂ ಲೆಕ್ಕಿಸದೇ ಹೋರಾಡುತ್ತಿರುವ ರೈತರು ಇಂಥ ಕೃತ್ಯಕ್ಕೆ ಕೈಹಾಕಲಾರರು ಎಂಬುದೂ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನಿನ್ನೆಯ ಘಟನೆಗೆ ರೈತರನ್ನು ದೂಷಿಸುವಂಥ ಹೇಳಿಕೆಗಳು, ಅಭಿಪ್ರಾಯಗಳನ್ನು ಕೇಳಿ ಮನಸ್ಸಿಗೆ ನೋವಾಗಿದೆ. ಘಟನೆ ಯಾಕೆ ಆಯಿತು, ಹೇಗೆ ಆಯಿತು, ಘಾತಕ ಶಕ್ತಿಗಳು ಹೇಗೆ ಬಂದವು ಎಂಬುದರ ಕುರಿತು ತನಿಖೆಯಾಗದೇ, ರೈತರನ್ನು ದೂಷಣೆ ಮಾಡುವುದು ಅಕ್ಷಮ್ಯ. ಕೆಂಪು ಕೋಟೆಯ ಬಳಿ ನಡೆದ ಹಿಂಸಾಚಾರದ ಕಳಂಕವನ್ನು ದೇಶದ ಯಾರೊಬ್ಬರೂ ರೈತನ ತಲೆಗೆ ಕಟ್ಟಬಾರದು ಎಂದು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ನಾಲ್ವರು ರೈತ ಮುಖಂಡರನ್ನು ಕೊಲ್ಲಲೆಂದು ಸಂಚು ನಡೆಸಿದ ಘಟನೆಗಳು ಈಗಾಗಲೇ ನಡೆದು ಹೋಗಿದೆ. ಅದಕ್ಕೆ ಸಂಬಂಧಪಟ್ಟಂತೆ ಒಬ್ಬ ವ್ಯಕ್ತಿಯನ್ನು ಹಿಡಿದು ರೈತರೇ ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ರೈತರ ಹೋರಾಟವನ್ನೇ ತಲೆಕೆಳಗು ಮಾಡಲು ಪ್ರಯತ್ನಗಳು ನಡೆಯದೇ ಇರುತ್ತವೆಯೇ? ಖಂಡಿತವಾಗಿಯೂ ಅನ್ಯ ಶಕ್ತಿಗಳು ಇದರ ಹಿಂದೆ ಇರುವ ಸಾಧ್ಯತೆಗಳಿವೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಇದು ಸೂಕ್ತ ಮಾತುಕತೆ ಮೂಲಕ ಬಗೆಹರಿಯುವ ಸಮಸ್ಯೆ. ಸುಪ್ರೀಂ ಕೋರ್ಟ್‌ ಕೂಡ ಇದನ್ನೇ ಹೇಳಿದೆ. ಆದರೆ, ಹಾಗೆ ಆಗದೇ ಇರುವುದು ಬೇಸರದ ಸಂಗತಿ. ಈ ಘಟನೆಯನ್ನು ಆಡಳಿತದಲ್ಲಿರುವವರು ತಪ್ಪಿಸಬಹುದಿತ್ತು. ಘಟನೆ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ. ಈಗಲೂ ಕಾಲ ಮಿಂಚಿಲ್ಲ. ಸೌಹಾರ್ದ ಮಾರ್ಗ ಇದಕ್ಕೆ ಮದ್ದು ಎಂದು ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ