Vijayapatha – ವಿಜಯಪಥ
Saturday, November 2, 2024
NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಬಿಬಿಎಂಪಿ: ಶುದ್ಧ ಕನ್ನಡ ನಾಮಫಲಕ ಜಾಗೃತಿ ಅಭಿಯಾನಕ್ಕೆ ಚಾಲನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ “ಕನ್ನಡ ಕಾಯಕ ವರ್ಷಾಚರಣೆ” ಹೆಸರಿನಲ್ಲಿ ಒಂದು ವರ್ಷದ ಯೋಜನೆ ಹಮ್ಮಿಕೊಂಡಿದ್ದು, ಇದಕ್ಕೆ ಪೂರಕವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕನ್ನಡ ಜಾಗೃತಿ ಸಮಿತಿ ಹಾಗೂ ಕನ್ನಡ ಕಾಯಕ ಪಡೆಯ ಮೂಲಕ “ಶುದ್ಧ ಕನ್ನಡ ನಾಮಫಲಕ ಜಾಗೃತಿ ಅಭಿಯಾನ” ವನ್ನು ಹಮ್ಮಿಕೊಂಡಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇದರ ಅಂಗವಾಗಿ ಅಭಿಯಾನದ ಜಾಗೃತಿ ವಾಹನಕ್ಕೆ ಪಾಲಿಕೆ ಕೇಂದ್ರ ಕಚೇರಿಯ ಆವರಣದಲ್ಲಿ ಬುಧವಾರ ಬಿಬಿಎಂಪಿ ಆಡಳಿತಗಾರ ಗೌರವ್ ಗುಪ್ತಾ, ಆಯುಕ್ತ ಎನ್.ಮಂಜುನಾಥ್ ಪ್ರಸಾದ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಚಾಲನೆ ನೀಡಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದಲ್ಲಿ ಶುದ್ಧ ಕನ್ನಡ ನಾಮಫಲಕ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದ್ದು, ಪಾಲಿಕೆಯು ಪ್ರಾಧಿಕಾರದ ಜೊತೆ ಕೈಜೋಡಿಸಿ ನಾಮಫಲಕಗಳಲ್ಲಿ ಕನ್ನಡ ಭಾಷೆ ಅಳವಡಿಸುವ ಸಂಬಂಧ ಹೆಚ್ಚು ಆದ್ಯತೆ ನೀಡಿ ಅದನ್ನು ಅನುಷ್ಠಾನ ಮಾಡಲು ಸೂಕ್ತ ಕ್ರಮವಹಿಸಲಾಗುವುದು ಎಂದು ಆಡಳಿತಗಾರ ಗೌರವ್ ಗುಪ್ತಾ ತಿಳಿಸಿದರು.

ಕನ್ನಡ ನಾಮಫಲಕಗಳಲ್ಲಿ ಅಕ್ಷರಗಳ ಲೋಪದೋಷಗಳಿದ್ದು, ಅದನ್ನು ಸರಿಪಡಿಸಲು ಪ್ರಾಧಿಕಾರವು ತಿಳಿಸಿದೆ. ಆ ಬಗ್ಗೆ ಕ್ರಮವಹಿಸಲಾಗುವುದು. ಪ್ರಾಧಿಕಾರದ ವತಿಯಿಂದ ಪಾಲಿಕೆ ವ್ಯಾಪ್ತಿಯ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಿಗೂ ಒಬ್ಬ ಪ್ರತಿನಿಧಿಯನ್ನು ನಿಯೋಜನೆ ಮಾಡಿದ್ದು, ಅವರು ಪಾಲಿಕೆಯ ಅಧಿಕಾರಿಗಳ ಜತೆ ಸಮಾಲೋಚನೆ ಮಾಡಿಕೊಂಡು ಮುಂದಿನ ದಿನಗಳಲ್ಲಿ ಕನ್ನಡ ನಾಮಫಲಕಗಳ ಅನುಷ್ಠಾನ ಮಾಡಲಾಗುವುದು.

ನಗರದಲ್ಲಿರುವ ಅನ್ಯಭಾಷಿಕರಿಗೆ ಕನ್ನಡ ಲಿಪಿ ಹಾಗೂ ಕನ್ನಡ ಭಾಷೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ಕೂ ಪ್ರಾಧಿಕಾರ ಮುಂದಾಗಿದೆ. ಕನ್ನಡ ಭಾಷೆ ಅಳವಡಿಕೆಗೆ ಪಾಲಿಕೆ ವತಿಯಿಂದ ಎಲ್ಲಾ ರೀತಿಯ ಸಹಾಯ ಮಾಡಲಾಗವುದು ಎಂದು ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಮಾತನಾಡಿ, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಇಲ್ಲಿ ಕನ್ನಡೇತರರೂ ಇದ್ದು, ಬೇರೆ ಬೇರೆ ರಾಜ್ಯಗಳಿಂದ ಇಲ್ಲಿಗೆ ಬಂದು ನೆಲೆಸಿದ್ದಾರೆ. ಇಲ್ಲಿ ಒಗ್ಗೂಡಿ ಬೆಳೆಯುವ ಸಂಸ್ಕೃತಿಯಿದ್ದು, ಅನ್ಯ ಭಾಷಿಕರಿಗೆಲ್ಲಾ ಕನ್ನಡ ಭಾಷೆಯ ತಿಳಿವಳಿಕೆ ಮೂಡಿಸಬೇಕು ಎಂದು ಹೇಳಿದರು.

ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಮಾತನಾಡಿ, ನಗರದ ಎಲ್ಲಾ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡಕ್ಕೆ ಹೆಚ್ಚು ಪ್ರಾಶಸ್ತ್ಯ ಕೊಡಬೇಕು. ಈ ಸಂಬಂಧ ನಾಮಫಲಕಗಳಲ್ಲಿ ಶೇ. 67 ರಷ್ಟು ಕನ್ನಡ ಭಾಷೆ ಹಾಗೂ ಶೇ. 33 ರಷ್ಟು ಇನ್ನಿತರ ಭಾಷೆಯಿರಬೇಕೆಂಬ ಆದೇಶವಿದ್ದು, ಅದನ್ನು ಅನುಷ್ಠಾನಮಾಡದ ಅಂಗಡಿಗಳಿಗೆ ಉದ್ದಿಮೆ ಪರವಾನಗಿ ರದ್ದುಗೊಳಿಸುವುದಾಗಿ ಈ ಹಿಂದೆ ಸೂಚನೆ ನೀಡಲಾಗಿತ್ತು. ಆದರೆ, ಈ ಬಗ್ಗೆ ಕೆಲವರು ಹೈಕೋರ್ಟ್ ಗೆ ಹೋಗಿ ತಡೆ ತಂದ ಪರಿಣಾಮ ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಜಾಹೀರಾತು ಬೈಲಾದಲ್ಲೇ ನಾಮಫಲಕಗಳಲ್ಲಿ ಕನ್ನಡ ಭಾಷೆಯಿರಬೇಕೆಂಬ ಅಂಶವನ್ನು ಸೇರಿಸಲಾಗುತ್ತಿದ್ದು, ಜಾರಿಯಾದ ಬಳಿಕ ಅದನ್ನು ಯಾರೂ ಪ್ರಶ್ನಿಸಲು ಸಾಧ್ಯವಾಗುವುದಿಲ್ಲ. ಕಾನೂನಿನಲ್ಲಿ ನಿಯಮ ಜಾರಿಯಾದ ಬಳಿಕ ಯಾರಾದರೂ ಉಲ್ಲಂಘನೆ ಮಾಡಿದಲ್ಲಿ ಅವರ ಮೇಲೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬಹುದಾಗುತ್ತದೆ ಎಂದು ಹೇಳಿದರು.

ನಾಮಫಲಕಗಳಲ್ಲಿ ಕನ್ನಡ ಅಳವಡಿಸಿ ಜಾಗೃತಿ
ಶುದ್ಧ ಕನ್ನಡ ನಾಮಫಲಕ ಜಾಗೃತಿ ಅಭಿಯಾನದ ಅಂಗವಾಗಿ ಜಾಗೃತಿ ವಾಹನವು ನಗರದ ವಿವಿಧೆಡೆ ಚಲಿಸಿ ಕನ್ನಡ ನಾಮಫಲಕ ಅಳವಡಿಸುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಿದೆ. ಕನ್ನಡ ಬಾವುಟ ಕೆಂಪು-ಹಳದಿ ಬಣ್ಣದ ವಾಹನದ ಮೂಲಕ ಕನ್ನಡದ ಘೋಷಣೆ, ಕನ್ನಡದ ಮಹತ್ವವನ್ನು ಸಾರಲಾಗಿದೆ. ಈ ಅಭಿಯಾನದಲ್ಲಿ ಅನ್ಯ ಭಾಷೆಯ ಜನರಿಗೂ ಕನ್ನಡ ಲಿಪಿ, ಕನ್ನಡ ಸಂಸ್ಕೃತಿಯ ಮಾಹಿತಿಯ ಬಗ್ಗೆ ಅರಿವು ಮೂಡಿಸಲಾಗುತ್ತದೆ.

ವಿಶೇಷ ಆಯುಕ್ತರಾದ ಜೆ.ಮಂಜುನಾಥ್, ರಂದೀಪ್, ರವೀಂದ್ರ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ