Vijayapatha – ವಿಜಯಪಥ
Saturday, November 2, 2024
CrimeNEWSನಮ್ಮಜಿಲ್ಲೆನಮ್ಮರಾಜ್ಯ

ಡ್ರೈನೇಜ್ ಸ್ವಚ್ಛ ಮಾಡಲು ಇಳಿದಿದ್ದ ಇಬ್ಬರು ಕಾರ್ಮಿಕರು ಮೃತ: ಒಬ್ಬನ ಸ್ಥಿತಿ ಗಂಭೀರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕಲಬುರ್ಗಿ: ಡ್ರೈನೇಜ್ ಸ್ವಚ್ಛ ಮಾಡಲು ಇಳಿದಿದ್ದ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ನಗರದಲ್ಲಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಜಲ ಮಂಡಳಿ ನಿರ್ಲಕ್ಷ್ಯದಿಂದ ಕೈಲಾಶ್ ನಗರದಲ್ಲಿ ಅವಘಡ ಸಂಭವಿಸಿದ್ದು, ಲಾಲ್ ಅಹ್ಮದ್ (25) ಮತ್ತು ರಶೀದ್ (30) ಮೃತಪಟ್ಟಿದ್ದಾರೆ. ಇನ್ನು ರಾಜು ಎಂಬಾತನ ಸ್ಥಿತಿ ಗಂಭೀರವಾಗಿದೆ.

ಈ ಮೂವರು ಕಲಬುರ್ಗಿ ಜಲ ಮಂಡಳಿಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಮಧ್ಯಾಹ್ನ ಡ್ರೈ ನೇಜ್ ಕೆಟ್ಟು ನಿಂತ ಹಿನ್ನೆಲೆಯಲ್ಲಿ ಕ್ಲೀನ್ ಮಾಡುವುದಕ್ಕೆ ಸಿಬ್ಬಂದಿ ಮುಂದಾಗಿದ್ದರು. 18 ಅಡಿ ಆಳದಲ್ಲಿ ಇಳಿದು ಕೆಲಸ ಮಾಡುತ್ತಿದ್ದರು. ಡ್ರೈನೇಜ್ ನೊಳಗೆ ಇಳಿದ ಮೇಲೆ ಉಸಿರುಗಟ್ಟಿ ಒಬ್ಬ ಸಾವನ್ನಪ್ಪಿದ್ದಾನೆ. ಆತನನ್ನ ರಕ್ಷಣೆ ಮಾಡುವುದಕ್ಕೆ ಇಳಿದ ಇನ್ನಿಬ್ಬರು ಕೂಡ ಅಸ್ವಸ್ಥಗೊಂಡಿದ್ದರು. ಅಸ್ವಸ್ಥರನ್ನ ಸಾಗಿಸುವ ವೇಳೆ ಮತ್ತೊಬ್ಬ ಮೃತಪಟ್ಟಿದ್ದಾನೆ.

ಡ್ರೈನೇಜ್ ಗೆ ಸ್ವಚ್ಛತೆ ಇಳಿದಾತ ಅಸ್ವಸ್ಥಗೊಂಡು ಡ್ರೈನೇಜ್ ನಲ್ಲಿ ಸಿಲುಕಿಕೊಳ್ಳುತ್ತಿದ್ದಂತೆಯೇ ಆತನ ರಕ್ಷಣೆಗಾಗಿ ಮತ್ತೊಬ್ಬ ಕೆಳಗೆ ಇಳಿದಿದ್ದ. ಆತನೂ ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದಾನೆ. ಈ ವೇಳೆ ಜಲ ಮಂಡಳಿ ಅಧಿಕಾರಿಗಳು ಮತ್ತೊಬ್ಬನನ್ನು ಕೆಳಗೆ ಇಳಿಸಿದ್ದಾರೆ. ಹೀಗೆ ಹೋದವರೆಲ್ಲರೂ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ನಾವೆಲ್ಲಾ ಕೂಡಿ ಮೇಲೆ ಎತ್ತಿದೆವು. ಅಷ್ಟರೊಳಗಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಜಲ ಮಂಡಳಿಯ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿ ಕಾರ್ಮಿಕನೊಬ್ಬ ತಿಳಿಸಿದ್ದಾನೆ.

ತೀವ್ರವಾಗಿ ಅಸ್ವಸ್ಥಗೊಂಡ ರಾಜುಗೆ ನಗರದ ಯುನೈಟೆಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ನಡುವೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದನ್ನು ಖಂಡಿಸಿ ದಿಢೀರ್ ರಸ್ತೆ ತಡೆ ಮಾಡಲಾಯಿತು. ಜಿಲ್ಲಾ ಆಸ್ಪತ್ರೆ ಎದುರು ರಸ್ತೆ ತಡೆ ಮಾಡಿ, ಜಲ ಮಂಡಳಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಯಂತ್ರಗಳ ಮೂಲಕ ಮಾಡಬೇಕಿದ್ದ ಕೆಲಸವನ್ನು ಮನುಷ್ಯರ ಮೂಲಕ ಮಾಡಿಸಲಾಗಿದೆ. ತಕ್ಷಣ ಅಧಿಕಾರಿಗಳು ಎಚ್ಚೆತ್ತಿದ್ದರೂ ಈ ಘಟನೆ ನಡೆಯುತ್ತಿರಲಿಲ್ಲ. ಮೃತರ ಕುಟುಂಬಗಳಿಗೆ ಸೂಕ್ತ ನ್ಯಾಯ ಒದಗಿಸಬೇಕು. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದಲಿತ ಸಂಘಟನೆ ಮುಖಂಡ ಸೂರ್ಯಕಾಂತ ನಿಂಬಾಳಕರ್ ಮತ್ತು ಮೃತ ರಶೀದ್ ತಂದೆ ಬುರಾನ್ ಶೇಖ್ ಆಗ್ರಹಿಸಿದ್ದಾರೆ.

ಮೃತರ ಕುಟುಂಬಕ್ಕೆ ತಕ್ಷಣ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾವುದು. ಎಫ್.ಐ.ಆರ್. ದಾಖಲಿಸಿ ಸೂಕ್ತ ತನಿಖೆ ಕೈಗೊಳ್ಳಲಾಗುವುದು. ಮೃತರ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ಕೊಡುವ ಭರವಸೆ ನೀಡಿದ ನಂತರ ಹೋರಾಟಗಾರರು ರಸ್ತೆ ತಡೆ ವಾಪಸ್ ಪಡೆದಿದ್ದಾರೆ.

ಘಟನೆಗೆ ಪ್ರಿಯಾಂಕ್ ಖರ್ಗೆ ಖಂಡನೆ
ಇದೊಂದು ಅಮಾನವೀಯ ಘಟನೆ. ಸ್ವಚ್ಛತೆಗಾಗಿ ಮ್ಯಾನ್ ಹೋಲ್ ಗಳಲ್ಲಿ ಮನುಷ್ಯರನ್ನು ಇಳಿಸಬಾರದೆಂದು ನ್ಯಾಯಾಲಯ ಸೂಚನೆ ನೀಡಿದರು, ಹೊರತಾಗಿಯೂ ಈ ರೀತಿ ಇಳಿಸಿರೋದು ಅಮಾವೀಯ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿರುವ ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಘಟನೆಯನ್ನು ಖಂಡಿಸಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ