CrimeNEWSದೇಶ-ವಿದೇಶನಮ್ಮರಾಜ್ಯ

ನ್ಯೂಡೆಲ್ಲಿಯಲ್ಲಿ ಬಾಂಬ್‌ ಸ್ಫೋಟ: ಪ್ರಮುಖ ಕಟ್ಟಡಗಳು, ಸರ್ಕಾರಿ ಕಚೇರಿಗಳಿಗೆ ಹೆಚ್ಚಿನ ಭದ್ರತೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ರಾಷ್ಟ್ರ ರಾಜಧಾನಿ ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಶುಕ್ರವಾರ ಸಂಜೆ ಬಾಂಬ್ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಎಲ್ಲ ವಿಮಾನ ನಿಲ್ದಾಣಗಳು, ಪ್ರಮುಖ ಕಟ್ಟಡಗಳು, ಸರ್ಕಾರಿ ಕಚೇರಿಗಳಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗಿದೆ ಎಂದು ಸಿಐಎಸ್​ಎಫ್​ (ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್​) ತಿಳಿಸಿದೆ.

ಕಡಿಮೆ ತೀವ್ರತೆಯ ಬಾಂಬ್ ಸ್ಫೋಟ ಸಂಭವಿಸಿದ್ದರಿಂದ ಮೂರು ಕಾರುಗಳ ಗಾಜುಗಳು ಚೂರಾಗಿದ್ದು, ಯಾರಿಗೂ ಗಾಯಗಳಾಗಿಲ್ಲ. ಆದರೆ, ಹೈ ಸೆಕ್ಯುರಿಟಿ ಇರುವ ಪ್ರದೇಶದ ಬಳಿಯೇ ಈ ಸ್ಫೋಟ ಉಂಟಾಗಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

ಬಾಂಬ್ ಸ್ಫೋಟ ಸಂಭವಿಸಿದ್ದರಿಂದ ಮುಂಬೈನ ಕಾನ್ಸುಲೇಟ್ ಜನರಲ್ ಆಫ್ ಇಸ್ರೇಲ್ ಕಚೇರಿಗೆ ಸೆಕ್ಯುರಿಟಿ ಹೆಚ್ಚಿಸಲಾಗಿದೆ.

ಇಸ್ರೇಲ್ ರಾಯಭಾರಿ ಕಚೇರಿಯಿಂದ ಕೇವಲ 2 ಕಿ.ಮೀ ದೂರದಲ್ಲಿ ಬೀಟಿಂಗ್ ರಿಟ್ರೀಟ್ ಕಾರ್ಯಕ್ರಮ ನಡೆಯುತ್ತಿತ್ತು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗವಹಿಸಿದ್ದರು. ವಿವಿಐಪಿಗಳಿದ್ದ ಪ್ರದೇಶದಲ್ಲಿ ಹೈ ಸೆಕ್ಯುರಿಟಿ ನಡುವೆಯೂ ಬಾಂಬ್ ಸ್ಫೋಟ ಸಂಭವಿಸಿರುವುದರಿಂದ ಹೈ ಅಲರ್ಟ್​ ಘೋಷಿಸಲಾಗಿದೆ.

ಇಸ್ರೇಲ್ ರಾಜತಾಂತ್ರಿಕ ಕಚೇರಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಭಾರತ ಸರ್ಕಾರಕ್ಕೆ ಇಸ್ರೇಲ್ ಮನವಿ ಮಾಡಿದೆ. ಇದಕ್ಕೂ ಮುನ್ನವೇ ಇಸ್ರೇಲ್ ರಾಯಭಾರಿ ಕಚೇರಿಯ ಎಲ್ಲ ಸಿಬ್ಬಂದಿ ಮತ್ತು ಅಧಿಕಾರಿಗಳು ಸುರಕ್ಷಿತರಾಗಿದ್ದಾರೆ ಎಂದು ಇಸ್ರೇಲ್ ವಿದೇಶಾಂಗ ಇಲಾಖೆ ತಿಳಿಸಿದೆ.

ದೆಹಲಿಯಲ್ಲಿ ನಡೆದ ಸ್ಫೋಟದ ಹಿನ್ನೆಲೆಯಲ್ಲಿಅಯೋಧ್ಯೆ ಸೇರಿದಂತೆ ಉತ್ತರ ಪ್ರದೇಶದ ಹಲವೆಡೆ ಬಿಗಿ ಭದ್ರತೆ ನೀಡಲು ನಿರ್ಧರಿಸಲಾಗಿದೆ. ದೇಶದ ಪ್ರಮುಖ ನಗರಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಿಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಉತ್ತರ ಭಾರತದ ಪ್ರಸಿದ್ಧ ಆಚರಣೆ ಮಹಾಕುಂಭ ಮೇಳಕ್ಕೂ ಭದ್ರತೆಯನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ. ಹರಿದ್ವಾರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಜಿಂದಾಲ್ ಹೌಸ್ ಬಳಿ ಸ್ಫೋಟ
ದೆಹಲಿಯಲ್ಲಿ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಡಾ. ಎಪಿಜೆ ಅಬ್ದುಲ್ ಕಲಾಂ ರಸ್ತೆಯ ಜಿಂದಾಲ್ ಹೌಸ್ ಬಳಿ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದೆ. ಈ ವಿಷಯ ತಿಳಿಯುತ್ತಿದ್ದಂತೆ ದೆಹಲಿ ವಿಶೇಷ ತನಿಖಾ ತಂಡದ ಪೊಲೀಸರು ರಾಷ್ಟ್ರೀಯ ತನಿಖಾ ತಂಡದ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ಪರಿಶೀಲನೆ ನಡೆಸಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು