NEWSನಮ್ಮರಾಜ್ಯಸಿನಿಪಥ

ಕೆಜಿಎಫ್ 2 ಚಿತ್ರತಂಡದಿಂದ ಅಭಿಮಾನಿಗಳಿಗೆ ಸಿಹಿ ಸುದ್ದಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಿನಿಸುದ್ದಿ
ಬೆಂಗಳೂರು: ಟೀಸರ್ ಮೂಲಕವೇ ಭಾರತೀಯ ಚಿತ್ರರಂಗದ ಎಲ್ಲ ದಾಖಲೆಗಳನ್ನೂ ಧೂಳಿಪಟ ಮಾಡಿದ್ದ ಕೆಜಿಎಫ್ ಚಾಪ್ಟರ್ 2 ಚಿತ್ರ ಯಾವಾಗ ರಿಲೀಸ್ ಆಗುತ್ತದೆ ಎಂದು ತುದಿಗಾಲಲ್ಲಿ ಕಾದು ಕುಳಿತಿರುವ ಅಭಿಮಾನಿಗಳಿಗೆ ಚಿತ್ರತಂಡ ಸಿಹಿ ಸುದ್ದಿ ನೀಡಿದೆ.

ಹೌದು…! ಟೀಸರ್ ಮೂಲಕವೇ ವಿಶ್ವದಾಖಲೆ ನಿರ್ಮಿಸಿರುವ ಕೆಜಿಎಫ್ ಚಾಪ್ಟರ್ 2 ಚಿತ್ರದ ರಿಲೀಸ್ ದಿನವನ್ನು ಕೊನೆಗೂ ಘೋಷಣೆ ಮಾಡಿದ್ದು. ಅದು ಮುಂಬರುವ ಜುಲೈ 16ರಂದು ಚಿತ್ರ ಬೆಳ್ಳಿ ತೆರೆಮೇಲೆ ಅಪ್ಪಳಿಸಲಿದೆ ಎಂದು ತಿಳಿಸಿದೆ.

ಚಿತ್ರ ಬಿಡುಗಡೆ ವಿಚಾರವಾಗಿ ಸಾಕಷ್ಟು ದಿನಗಳಿಂದಲೂ ಚಿತ್ರತಂಡ ಕುತೂಹಲ ಉಳಿಸಿಕೊಂಡಿತ್ತು. ಇದೀಗ ಚಿತ್ರತಂಡ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದ್ದು, ಕನ್ನಡದ ಮೊದಲ ಪ್ಯಾನ್ ಇಂಡಿಯಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕೆಜಿಎಫ್ 2 ಒಂದೇ ಬಾರಿಗೆ ಐದು ಭಾಷೆಗಳಲ್ಲಿ ರಿಲೀಸ್​ ಆಗುತ್ತಿದೆ.

ಕೆಜಿಎಫ್​ ಚಾಪ್ಟರ್​-2ನಲ್ಲಿ ಯಶ್​ ರಾಕಿ ಭಾಯ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪವರ್ ಫುಲ್ ಖಳನಾಯಕ ಅಧೀರನ ಪಾತ್ರದಲ್ಲಿ ಖ್ಯಾತ ಬಾಲಿವುಡ್​ ನಟ ಸಂಜಯ್​ ದತ್​ ಕಾಣಿಸಿಕೊಂಡಿದ್ದಾರೆ. ಇನ್ನು ಮತ್ತೋರ್ವ ಬಾಲಿವುಡ್ ನಟಿ ರವೀನಾ ಟಂಡನ್​ ಈ ಚಿತ್ರದಲ್ಲಿ ರಾಜಕಾರಣಿ ಪಾತ್ರ ನಿರ್ವಹಿಸಿದ್ದಾರೆ.

ಯೂಟ್ಯೂಬ್​ನಲ್ಲಿ ಕೆಜಿಎಫ್​-2 ಸಿನಿಮಾ ಟೀಸರ್​ ದಾಖಲೆ ವೀಕ್ಷಣೆ ಕಂಡಿದ್ದು, ಈ ವರೆಗೂ 16 ಕೋಟಿ 32 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಪಡೆದುಕೊಂಡಿದೆ.ಇನ್ನು ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಕೆಜಿಎಫ್​-2 ಕಳೆದ ಅಕ್ಟೋಬರ್‌ನಲ್ಲೇ ತೆರೆಗೆ ಬರಬೇಕಿತ್ತು. ಆದರೆ, ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಅದು ಸಾಧ್ಯವಾಗಿರಲ್ಲ.

ಅಂತೆಯೇ ಈ ಮೊದಲು ಚಿತ್ರಮಂದಿರದಲ್ಲಿ ಶೇ.50 ಆಸನಗಳಿಗೆ ಮಾತ್ರ ಅವಕಾಶ ಇತ್ತು. ಈಗ ಈ ನಿಯಮವನ್ನು ಕೇಂದ್ರ ಸರ್ಕಾರ ಸಡಿಲ ಮಾಡಿದ್ದು, ಚಿತ್ರಮಂದಿರಗಳಲ್ಲಿ ಹೆಚ್ಚು ಪ್ರೇಕ್ಷಕರಿಗೆ ಅನುವು ಮಾಡಿಕೊಟ್ಟಿದೆ. ಜುಲೈ ವೇಳೆಗೆ ಶೇ. 100 ಆಸನ ವ್ಯವಸ್ಥೆಗೆ ಅವಕಾಶ ಮಾಡಿಕೊಡುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಇದೇ ಕಾರಣಕ್ಕೆ ಕೆಜಿಎಫ್​ ಚಿತ್ರತಂಡ ಜುಲೈನಲ್ಲಿ ಚಿತ್ರವನ್ನು ತೆರೆಗೆ ತರುತ್ತಿದೆ ಎನ್ನಲಾಗಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್