NEWSಆರೋಗ್ಯಸಂಸ್ಕೃತಿ

ಮಹಾತ್ಮ ಗಾಂಧೀಜಿ ಸ್ಮರಣಾರ್ಥ “ಕುಷ್ಠರೋಗ ವಿರುದ್ಧ ಅಂತಿಮ ಹೋರಾಟ” ಅಭಿಯಾನ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಹಾತ್ಮ ಗಾಂಧೀಜಿಯವರ ಸ್ಮರಣಾರ್ಥ ಬಿಬಿಎಂಪಿ ವ್ಯಾಪ್ತಿಯಲ್ಲಿ ಕುಷ್ಠರೋಗ ನಿರ್ಮೂಲನೆ ಮಾಡುವ ಕಾರ್ಯಮವನ್ನು ರೂಪಿಸಿಕೊಂಡಿದ್ದು, ಜನವರಿ 30 ರಿಂದ ಫೆಬ್ರವರಿ 13ರವರೆಗೆ “ಕುಷ್ಠರೋಗದ ವಿರುದ್ಧ ಅಂತಿಮ ಹೋರಾಟ” ಶೀರ್ಷಿಕೆಯಡಿ ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ತಿಳಿಸಿದರು‌.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಮಹಾತ್ಮ ಗಾಂಧೀಜಿಯವರ ಸ್ಮರಣಾರ್ಥ ಕುಷ್ಠರೋಗ ನಿರ್ಮೂಲನೆ ಮಾಡುವ ಸಲುವಾಗಿ “ಕುಷ್ಠರೋಗದ ವಿರುದ್ಧ ಅಂತಿಮ ಹೋರಾಟ” ಅಭಿಯಾನವನ್ನು ಹಮ್ಮಿಕೊಂಡಿದ್ದು, ಬಿಬಿಎಂಪಿ ಆಡಳಿತಗಾರ ಜತೆ ಆಯುಕ್ತರು ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

2016-17 ಸಾಲಿನಿಂದ ಪಾಲಿಕೆ ವ್ಯಾಪ್ತಿಯಲ್ಲಿ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮವು ಅನುಷ್ಠಾನಗೊಂಡಿದೆ. ಪಾಲಿಕೆ ವ್ಯಾಪ್ತಿಯಲ್ಲಿ 198 ವಾರ್ಡ್‌ಗಳಿದ್ದು, 141 ಆರೋಗ್ಯ ಕೇಂದ್ರಗಳು, 5 ಸಾರ್ವಜನಿಕ ಆಸ್ಪತ್ರೆಗಳು, 6 ವೈದ್ಯಕೀಯ ಕಾಲೇಜು/ಆಸ್ಪತ್ರೆಗಳು, 2 ಸ್ವಯಂಸೇವಾ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಹೇಳಿದರು.

ಕುಷ್ಠರೋಗ ನಿರ್ಮೂಲನಕ್ಕೆ ಮುಂದಾಗಿರುವ ಪಾಲಿಕೆಯ ಆರೋಗ್ಯ ಇಲಾಖೆಯು ಜನವರಿ 30 ರಿಂದ ಫೆಬ್ರವರಿ 13 ರ ವರೆಗೆ “ಕುಷ್ಠರೋಗ ವಿರುದ್ಧ ಅಂತಿಮ ಹೋರಾಟ” ಶೀರ್ಷಿಕೆಯಡಿ ಜಾಗೃತಿ ಆಂದೋಲನ ಹಮ್ಮಿಕೊಂಡಿದೆ‌. ಈ ಸಂದರ್ಭ ಎಲ್ಲಾ ವೈದ್ಯರು ಹಾಗೂ ಪಾಲಿಕೆಯ ಸಿಬ್ಬಂದಿ ಕುಷ್ಠರೋಗ ಮುಕ್ತ ಪಾಲಿಕೆ ನಿರ್ಮಾಣದ ಪ್ರತಿಜ್ಞೆ ಸ್ವೀಕರಿಸಲಿದ್ದಾರೆ ಎಂದರು.

ಆಂದೋಲನದ ಮೂಲಕ ಜನರನ್ನು ಸಂಪರ್ಕಿಸಿ, ರೋಗದ ಲಕ್ಷಣ ಹಾಗೂ ಚಿಕಿತ್ಸೆ ಕುರಿತು ಅರಿವು ಮೂಡಿಸಲಾಗುವುದು. ಇದೇ ವೇಳೆ ಕುಷ್ಠರೋಗ ಪತ್ತೆ ಕಾರ್ಯ ನಡೆಸಲಾಗುವುದು. ಕುಷ್ಠರೋಗದ ಲಕ್ಷಣಗಳು ಕಂಡುಬಂದರೆ ಕೂಡಲೆ ಎಲ್ಲಾ ಪಾಲಿಕೆ ಆಸ್ಪತ್ರೆ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ಉಚಿತವಾಗಿ ಚಿಕಿತ್ಸೆ ಪಡೆಯಬಹುದು ಎಂದು ತಿಳಿಸಿದರು.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ