NEWSದೇಶ-ವಿದೇಶನಮ್ಮರಾಜ್ಯ

ಗಣರಾಜ್ಯೋತ್ಸವ ದಿನ ತ್ರಿವರ್ಣ ಧ್ವಜಕ್ಕೆ ಅವಮಾನ: ಮನ್​ ಕೀ ಬಾತ್​ನಲ್ಲಿ ಪ್ರಧಾನಿ ಮೋದಿ ಅಸಮಾಧಾನ

ವಿಜಯಪಥ ಸಮಗ್ರ ಸುದ್ದಿ

 ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಜನವರಿ 26ರಂದು ತ್ರಿವರ್ಣ ಧ್ವಜಕ್ಕೆ ಮಾಡಿದ ಅವಮಾನಕ್ಕೆ ಸಾಕ್ಷಿಯಾದ ದೇಶ ಆಘಾತಕ್ಕೊಳಗಾಗಿದೆ ಎಂದು 2021ರ ಮೊದಲ ಮನ್​ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.

ಗಣರಾಜ್ಯೋತ್ಸವದ ದಿನ ನಡೆದ ಕೆಂಪು ಕೋಟೆ ಹಿಂಸಾಚಾರದ ಬಗ್ಗೆ ಪ್ರಸ್ತಾಪ ಮಾಡಿದರು. ಜತೆಗೆ ಪದ್ಮ ಪುರಸ್ಕಾರಕ್ಕೆ ಭಾಜನರಾದ ಸಾಧಕರನ್ನು ಅಭಿನಂದಿಸಿ, ದೇಶದ ಜನರು ಅವರಿಂದ ಸ್ಫೂರ್ತಿ ಪಡೆಯಬೇಕು ಎಂದು ಹೇಳಿದರು. ಮತ್ತು ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸಿದ ಭಾರತೀಯ ಕ್ರಿಕೆಟ್ ತಂಡವನ್ನು ಶ್ಲಾಘಿಸಿದರು.

2021 ರ ಮೊದಲ ‘ಮನ್ ಕಿ ಬಾತ್’ಗೆ ಕೆಲವು ಗಂಟೆಗಳ ಮುನ್ನ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಚೀನಾ ವಿಷಯವಾಗಿ ಸಲಹೆ ನೀಡಿ ಟ್ವೀಟ್ ಮಾಡಿದ್ದಾರೆ. “ಹೆದರದಿರಿ, ಇಂದು ಚೀನಾ ಬಗ್ಗೆ ಮಾತನಾಡಲು ಪ್ರಯತ್ನಿಸಿ” ಎಂದು ಗಾಂಧಿ ಹೇಳಿದ್ದರು.

ಒಂದು ವರ್ಷದಲ್ಲಿ ಜನರ ದೃಷ್ಟಿಕೋನದಲ್ಲಿ ಪ್ರಮುಖ ಬದಲಾವಣೆಯಾಗಿದೆ. ಈಗ ಬಹಳಷ್ಟು ಗ್ರಾಹಕರು ‘ಮೇಡ್ ಇನ್ ಇಂಡಿಯಾ’ ಉತ್ಪನ್ನಗಳನ್ನು ಬಳಸಲು ಮುಂದಾಗಿದ್ದಾರೆ. ಈ ಮೂಲಕ ವೋಕಲ್ ಫಾರ್ ಲೋಕಲ್​ಗೆ ತಮ್ಮ ಬೆಂಬಲ ತೋರಿಸಿದ್ದಾರೆ ಮತ್ತು ವಿಶ್ವ ದರ್ಜೆಯ ಉತ್ಪನ್ನಗಳನ್ನು ತಯಾರಿಸಲು ತಯಾರಕರು ಮತ್ತು ಉದ್ಯಮಿಗಳಿಗೆ ಪ್ರಧಾನಿ ಮೋದಿ ಹೇಳಿದರು.

ಪ್ರಧಾನಿ ಮೋದಿ ಅವರ ಮಾಸಿಕ ರೇಡಿಯೊ ಕಾರ್ಯಕ್ರಮದ 73 ನೇ ಸಂಚಿಕೆಯು ರಾಷ್ಟ್ರವ್ಯಾಪಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡುವ ದಿನವೇ ನಡೆದಿದೆ. ಜತೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ರ ಕೇಂದ್ರ ಬಜೆಟ್ ಮಂಡಿಸುವ ಒಂದು ದಿನ ಮುಂಚೆ ಮತ್ತು ಹೊಸ ಕೃಷಿ ಸುಧಾರಣೆಗಳ ವಿರುದ್ಧ ರೈತರು ನಡೆಸುತ್ತಿರುವ ಆಂದೋಲನದಲ್ಲಿ ಗಣರಾಜ್ಯೋತ್ಸವ ದಿನದಂದು ಕೆಂಪು ಕೋಟೆಗೆ ನುಗ್ಗಿ ದೆಹಲಿ ಪೊಲೀಸರೊಂದಿಗೆ ಘರ್ಷಣೆ ನಡೆಸಿದ ಬಗ್ಗೆಯೂ ಮೋದಿ ಮಾತನಾಡಿದರು.

ಈಗಾಗಲೇ ಕೊರೊನಾ ಲಸಿಕೆ ಹಾಕುವ ಕಾರ್ಯಕ್ರಮ ಕೂಡ ನಡೆಯುತ್ತಿದ್ದು, ಕಳೆದ 15 ದಿನದಲ್ಲಿ 30 ಲಕ್ಷ ಕೊರೊನಾ ವಾರಿಯರ್ಸ್​ಗಳು ಲಸಿಕೆ ಪಡೆದಿದ್ದಾರೆ. ದೇಶದ ಪ್ರತಿಯೊಬ್ಬರಿಗೂ ಲಸಿಕೆ ಸಿಗಲಿದೆ. ಕೊರೊನಾ ಸೋಂಕಿನ ಸಂಕಷ್ಟದ ಸಮಯದಲ್ಲಿ ಆತ್ಮನಿರ್ಭರ್ ವೇಳೆಯಲ್ಲಿ ದೇಶೀಯವಾಗಿ ಕೊರೊನಾ ಲಸಿಕೆ ಅಭಿವೃದ್ಧಿಪಡಿಸಿರುವುದು ದೇಶದ ಹಿರಿಮೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...