NEWSನಮ್ಮಜಿಲ್ಲೆನಮ್ಮರಾಜ್ಯ

ಸಾಮೂಹಿಕ ವಿವಾಹದಿಂದ ಕುಟುಂಬದ ಅಭಿವೃದ್ಧಿ: ಸಚಿವ ಸೋಮಶೇಖರ್

ಸುತ್ತೂರಿನಲ್ಲಿ ಸಾಮೂಹಿಕ ವಿವಾಹ l ಮಠದ ಸೇವಾ ಕಾರ್ಯಕ್ಕೆ ಮೆಚ್ಚುಗೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಸುತ್ತೂರು: ಕುಟುಂಬದ ಅಭಿವೃದ್ಧಿಗೆ ಸಾಮೂಹಿಕ ವಿವಾಹದಂತಹ ಹೆಜ್ಜೆ ಅತಿ ಅವಶ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಸುತ್ತೂರಿನಲ್ಲಿ ಶ್ರೀಮಠದ ವತಿಯಿಂದ ಏರ್ಪಡಿಸಲಾಗಿದ್ದ ಸಾಮೂಹಿಕ ವಿವಾಹ -95 ಕಾರ್ಯಕ್ರಮದಲ್ಲಿ “ವಚನಕ್ಕೊಂದು ಕಥೆ” ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿದ ಸಚಿವರು, ಇಂದು ಬಡವರಾದಿಯಾಗಿ ಹೆಚ್ಚಿನವರು ಶಿಕ್ಷಣಕ್ಕಿಂತ ಹೆಚ್ಚಾಗಿ ವಿವಾಹಕ್ಕೆ ಖರ್ಚು ಮಾಡುತ್ತಿದ್ದಾರೆ. ಇದರಿಂದ ಸಾಲದ ಹೊರೆಯಲ್ಲಿ ಸಿಲುಕುತ್ತಿದ್ದಾರೆ. ಆದರೆ, ಶ್ರೀಕ್ಷೇತ್ರ ಸುತ್ತೂರು ಮಠದ ಈ ಸಾಮೂಹಿಕ ವಿವಾಹ ಮಾಡುತ್ತಿರುವುದು ಶ್ಲಾಘನೀಯ ಹಾಗೂ ಮಾದರಿಯಾಗಿದೆ ಎಂದರು.

ಇಂದು ಸಮಾಜದಲ್ಲಿ ವಿವಾಹಕ್ಕೆ ಅತಿಯಾಗಿ ಖರ್ಚು ಮಾಡುತ್ತಿರುವುದು ಕುಟುಂಬದ ಅಭ್ಯುದಯಕ್ಕೆ ಮಾರಕವಾಗಿದೆ. ಸಾಲ ಮಾಡಿ ಮದುವೆ ಮಾಡಿ ಹತ್ತಾರು ವರ್ಷಗಳಾದರೂ ಸಹ ಸಾಲಮುಕ್ತರಾಗದೆ ಪರಿತಪಿಸುತ್ತಿರುತ್ತಾರೆ. ಶ್ರೀಮಠ ಆಯೋಜಿಸುವ ಇಂತಹ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಮದುವೆಯಾದರೆ ಸಾಲ ಮಾಡುವ ಸಂಭವವೇ ಇರುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ತಮಗೆಲ್ಲ ತಿಳಿದಂತೆ ‘ಹತ್ತೂರಿಗೆ ಮಿಗಿಲು ಸುತ್ತೂರು ಜಾತ್ರೆ’ ಎಂಬ ಖ್ಯಾತಿ ಹೊಂದಿರುವ ಸುತ್ತೂರು ಜಾತ್ರೆಯು ಕೊರೊನಾ ಸೋಂಕಿನ ಕಾರಣಕ್ಕೆ ಈ ವರ್ಷ ಸರಳವಾಗಿ ಜರುಗುತ್ತಿದೆ. ಸುತ್ತೂರು ಮಠದ ವತಿಯಿಂದ ಅನೇಕ ಸಮಾಜೋದ್ಧಾರಕ ಕಾರ್ಯಗಳು ನಡೆಯುತ್ತಿದ್ದು, ಅದರಲ್ಲಿ ಸಾಮೂಹಿಕ ವಿವಾಹವು ಒಂದು.

ಜಾತ್ರಾ ಸಂದರ್ಭದಲ್ಲಿ ಸುಮಾರು 200 ಜೋಡಿಗಳಿಗೆ ಸಾಮೂಹಿಕ ವಿವಾಹವನ್ನು ಏರ್ಪಡಿಸುತ್ತಿದ್ದು, ಅದನ್ನು ರದ್ದುಗೊಳಿಸಿ ಇಡೀ ವರ್ಷ ಪ್ರತಿ ತಿಂಗಳು ಉಚಿತ ಮಾಂಗಲ್ಯ ಹಾಗೂ ವಸ್ತ್ರಗಳನ್ನು ವಿತರಿಸಿ ಸಾಮೂಹಿಕ ವಿವಾಹವನ್ನು ಏರ್ಪಡಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ. ಇಂತಹ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳಲು ನನಗೆ ಹರ್ಷವಾಗುತ್ತಿದೆ. ಈ ಕ್ಷೇತ್ರದಲ್ಲಿ ಮದುವೆ ಆಗುತ್ತಿರುವ ಜೋಡಿಗಳಿಗೆ ಪೂಜ್ಯರ ಆಶೀರ್ವಾದ ದೊರೆಯುತ್ತಿರುವುದರಿಂದ ಅವರಿಗೆ ಸಾರ್ಥಕ ಮನೋಭಾವ ಮೂಡುತ್ತದೆ ಎಂದು ಹೇಳಿದರು.

ಶರಣಿ ಎಂ.ಎ.ನೀಲಾಂಬಿಕಾರವರು ರಚಿಸಿರುವ ವಚನಕ್ಕೊಂದು ಕಥೆ ಎಂಬ ಪುಸ್ತಕವನ್ನು ನಾನು ಬಿಡುಗಡೆ ಮಾಡಿದೆ. ಇಂತಹ ಮೌಲಿಕ ಕೃತಿಯನ್ನು ರಚಿಸಿದ್ದಕ್ಕಾಗಿ ಅವರಿಗೆ ಅಭಿನಂದಿಸುತ್ತೇನೆ. ರಾಜೇಂದ್ರ ಶಿಶು ಎಂಬ ಕಾವ್ಯನಾಮದಲ್ಲಿ ಶರಣೆ ನೀಲಾಂಬಿಕಾ ಅವರು ಹಲವಾರು ಕೃತಿಗಳನ್ನು ರಚಿಸಿರುತ್ತಾರೆ ಎಂದರು.

ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ‍್ಯ ವಹಿಸಿದ್ದರು. ವಿಜಯಪುರ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ, ಶ್ರೀ ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇತರರು ಇದ್ದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...