ವಿಜಯಪಥ ಸಮಗ್ರ ಸುದ್ದಿ
ರಾಯಚೂರು: ಜಿಲ್ಲೆಯ ಮಸ್ಕಿ ಬಸವಕಲ್ಯಾಣ ವಿಧಾನಸಭಾ ಹಾಗೂ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ಯರಮರಸ್ ಸರ್ಕ್ಯೂಟ್ ಹೌಸ್ ನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ಪಕ್ಷ ತೀರ್ಮಾನ ಮಾಡಿದೆ. ಇದಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕೂಡ ಒಪ್ಪಿಗೆ ಸೂಚಿಸಿದ್ದಾರೆ. ಜತೆಗೆ ಮನ್ನ ಪಕ್ಷದ ನಾಯಕರೊಂದಿಗೂ ಈ ಕುರಿತು ಚರ್ಚೆ ಮಾಡಿದ್ದು ಅವರು ಇದೇ ಸಲಹೆಯನ್ನು ಕೊಟ್ಟಿದ್ದಾರೆ ಎಂದು ಹೇಳಿದರು.
ದೇವದುರ್ಗದ ಗಾಣಧಾಳ ಗ್ರಾಮದ ರೈತ ಪ್ರಭುರೆಡ್ಡಿ ಎರಡು ಗುಂಟೆ ಜಮೀನಿನಲ್ಲಿ ನನ್ನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ಅವರ ಮನೆಗೆ ಭೇಟಿ ನೀಡುತ್ತೇನೆ ಎಂದವರು, ಮುಂದಿನ 2023ರ ವಿಧಾನಸಭೆ ಚುನಾವಣೆಗೆ ಇಂದಿನಿಂದಲೇ ಎಲ್ಲ ತಯಾರಿಯನ್ನು ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು..
ಇನ್ನು ಈಗ ನಾನು ಯಾರನ್ನು ನಿಂದನೆ ಮಾಡುವುದಿಲ್ಲ. ನಮ್ಮ ಪಕ್ಷದ ಎಲ್ಲಾ ಮುಖಂಡರು ಪಕ್ಷ ಕಟ್ಟುವುದರಲ್ಲಿ ಸಂಪೂರ್ಣ ಸಕ್ರಿಯವಾಗಿ ಇರುತ್ತೇವೆ. ಅಸ್ಥಿರತೆಗೆ ನಾನು ಅವಕಾಶ ನೀಡುವುದಿಲ್ಲ. ರಾಜ್ಯಾದ್ಯಂತ ಪಕ್ಷ ಸಂಘಟನೆಗಾಗಿ ಪ್ರವಾಸಮಾಡುತ್ತೇನೆ. ನಮ್ಮ ಪಕ್ಷ ಬಲವರ್ಧನೆಗೆ ಬರಬೇಕು ಎಂಬ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ಅವರೊಂದಿಗೆ ನಾನು ಪ್ರವಾಸ ಮಾಡುತ್ತೇನೆ ಎಂದು ಹೇಳಿದರು.
ಪ್ರಾದೇಶಿಕ ಪಕ್ಷ ಕಟ್ಟುವುದಕ್ಕೆ ಶಕ್ತಿಮೀರಿ ಪ್ರಯತ್ನ ಮಾಡುತ್ತೇನೆ. ನಮ್ಮಲ್ಲಿಯೂ 34 ಜನ ಶಾಸಕರಿದ್ದಾರೆ. ನಾವು ಬೇರೆ ಪಕ್ಷದೊಂದಿಗೆ ವಿಲೀನ ಆಗುತ್ತಾರೆ ಅಂತಾರೆ. ಅವರ ಬಗ್ಗೆ ಬಗ್ಗೆ ಟೀಕೆ ಮಾಡಲ್ಲ. ಇನ್ನು ಕುಮಾರಸ್ವಾಮಿ ಸಿಎಂ ಆಗಬೇಕು ಅಂತ ಯಾರ ಮನೆಗೂ ಹೋಗಿಲ್ಲ. ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಹಾಗೂ ಮುಖಂಡರು ಅಭಿಪ್ರಾಯ ಹಂಚಿಕೊಂಡರು. ಆ ವೇಳೆ ಆಜಾದ್ ಅವರ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲು ಕಾರಣರಾದರು. ನನ್ನ ಮಗನಿಗೆ 2 ಮೇಜರ್ ಸರ್ಜರಿ ಆಗಿದೆ ಎಂದು ಹೇಳಿದೆ. ಆದರೂ ಸೋನಿಯಾಗಾಂಧಿ ಮಾತುಕತೆ ನಂತರ ಕುಮಾರಸ್ವಾಮಿ ಸಿಎಂ ಆಗಿದ್ದರು. ಇದು ಎರಡು ಪಕ್ಷಗಳ ಬಗ್ಗೆ ಅಂದು ನಡೆದಿದ್ದು ಎಂದು ಸ್ಪಷ್ಟಪಡಿಸಿದರು.
ಸದ್ಯ ಸಿಎಂ ಯಡಿಯೂರಪ್ಪ ಬಗ್ಗೆ ನಾನು ಯಾವುದೇ ಆರೋಪ ಮಾಡುವುದಿಲ್ಲ. ನನ್ನ ಶರೀರದಲ್ಲಿ ಜೀವ ಹಾಗೂ ಶಕ್ತಿ ಇರೋವರೆಗೂ ನಾನು ನಮ್ಮ ಪಕ್ಷ ಕಟ್ಟುತ್ತೇನೆ. ಅಂದು ಚುನಾವಣೆ ಸಂದರ್ಭದಲ್ಲಿ ಟಿಕೆಟ್ ನೀಡುವ ವಿಚಾರದಲ್ಲಿ ನಾವು ತಪ್ಪು ಮಾಡಿದ್ದು, ಅದು ಮರುಕಳಿಸದಂತೆ ಎಚ್ಚರಿಕೆಯ ಹೆಜ್ಜೆ ಇಡಲಾಗುತ್ತಿದೆ ಎಂದು ಹೇಳಿದರು.
ದೇಶದ ನಾಲ್ಕು ರಾಜ್ಯಗಳಲ್ಲಿ ನಡೆಯುವ ಚುನಾವಣೆ ವೇಳೆ ತಮಿಳುನಾಡಿನಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಸಿಗಲ್ಲ ಎಂಬ ಭಾವನೆ ವ್ಯಕ್ತಪಡಿಸಿದರು. ಇನ್ನು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಧೈರ್ಯ ಮೆಚ್ಚುವಂತದ್ದು, ಕಡಿಮೆ ಮತಗಳು ಬಂದರೂ ಈ ಬಾರಿ ದಿದಿಯೇ ಅಧಿಕಾರ ಪಡೆಯುವ ಸಾಧ್ಯತೆ ಹೆಚ್ಚಾಗಿದೆ. ಪಶ್ಚಿಮಬಂಗಾಳದಲ್ಲಿ ಬಿಜೆಪಿ ಸಚಿವರು ಶಾಸಕರು ಅಲ್ಲೇ ನೆಲೆಯೂರಿರ ಬಹುದು ಆದರೆ ಮೂರನೇ ಬಾರಿಯೂ ಮಮತಾ ಬ್ಯಾನರ್ಜಿ ಸಿಎಂ ಆಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು.