ಪಿರಿಯಾಪಟ್ಟಣ: ಪಟ್ಟಣದ ಕಾಂಗ್ರೆಸ್ ಪಕ್ಷದ ಆವರಣದಲ್ಲಿ ಫೆ.20 ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಾಗೂ ಗ್ರಾಮ ಪಂಚಾಯಿತಿಯಲ್ಲಿ ಆಯ್ಕೆಯಾಗಿರುವ ನೂತನ ಅಧ್ಯಕ್ಷ ಹಾಗೂ ಸದಸ್ಯರಿಗಾಗಿ ಏರ್ಪಡಿಸಿರುವ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಇತ್ತೀಚೆಗೆ ನಡೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ ಹಾಗೂ ಸದಸ್ಯರನ್ನು ಸನ್ಮಾನಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಲಿದ್ದಾರೆ. ಹೀಗಾಗಿ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು, ಚುನಾಯಿತ ಪ್ರತಿನಿಧಿಗಳು ಭಾಗವಹಿಸಬೇಕು ತಿಳಿಸಿದರು.