NEWSನಮ್ಮರಾಜ್ಯರಾಜಕೀಯ

ವಸತಿ ಯೋಜನೆ ಫಲಾನುಭವಿಗಳಿಗೆ ಮೂರು ತಿಂಗಳೊಳಗೆ ಸಾಲ ಮಂಜೂರಿಗೆ ಸಿಎಂ ಬಿಎಸ್‌ವೈ ತಾಕೀತು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಪ್ರಧಾನ ಮಂತ್ರಿ ಆವಾಸ್, ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಸೇರಿದಂತೆ ನಗರ ಪ್ರದೇಶಗಳಲ್ಲಿನ ವಸತಿ ಯೋಜನೆ ಫಲಾನುಭವಿಗಳಿಗೆ ಮೂರು ತಿಂಗಳೊಳಗೆ ಸಾಲ ಮಂಜೂರು ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಮುಖ ಬ್ಯಾಂಕ್‌ಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಧಾನಮಂತ್ರಿ ಸ್ವನಿಧಿ, ಪ್ರಧಾನಮಂತ್ರಿ ಆವಾಸ್ ಮತ್ತು ಮುಖ್ಯಮಂತ್ರಿಯವರ ಒಂದು ಲಕ್ಷ ಮನೆಗಳ ಪ್ರಗತಿಗೆ ಸಂಬಂಧಿಸಿದಂತೆ ಗುರುವಾರ ವಿಧಾನಸೌಧದಲ್ಲಿ ಸಭೆ ನಡೆಸಿದ ಅವರು, ಮೂರು ತಿಂಗಳೊಳಗೆ ಸಾಲ ಮಂಜೂರು ಮಾಡದಿದ್ದರೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಸತಿ ಸಚಿವ ವಿ. ಸೋಮಣ್ಣ, ವಸತಿ ಯೋಜನೆಗಳ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಲು ಸದಾ ಬ್ಯಾಂಕ್‌ ಅಧಿಕಾರಿಗಳು ತಕರಾರು ತೆಗೆಯುತ್ತಿದ್ದರು. ಹೀಗಾಗಿ ಇನ್ನುಮುಂದೆ ಫಲಾನುಭವಿಯ ಆಧಾರ್ ಕಾರ್ಡ್ ಹಾಗೂ ಹಕ್ಕುಪತ್ರದ ಆಧಾರದಲ್ಲಿ ಸಾಲ ಮಂಜೂರು ಮಾಡುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಇತರ ನಗರ ಪ್ರದೇಶಗಳಲ್ಲಿ ಪ್ರತಿ ಫಲಾನುಭವಿಗಳಿಗೆ 2.5 ಲಕ್ಷ ರೂ. ಮತ್ತು ಬೆಂಗಳೂರಿನಲ್ಲಿ ಸ್ವಲ್ಪ ಹೆಚ್ಚು ಮೊತ್ತದ ಸಾಲ ಮಂಜೂರು ಮಾಡುವಂತೆ ಸೂಚನೆ ನೀಡಿದ್ದಾರೆ. ಒಟ್ಟು ಒಟ್ಟು 3.4 ಲಕ್ಷ ಫಲಾನುಭವಿಗಳಿಗೆ ಸಾಲ ದೊರೆಯಲಿದೆ ಎಂದು ವಿವರಿಸಿದರು.

ಮುಖ್ಯಮಂತ್ರಿ ಒಂದು ಲಕ್ಷ ಮನೆ ಯೋಜನೆಯಲ್ಲಿ ಈಗಾಗಲೇ 53 ಸಾವಿರ ಮನೆಗಳ ನಿರ್ಮಾಣ ಆರಂಭವಾಗಿದೆ. ಜೂನ್‌ನಲ್ಲಿ ಮೊದಲನೇ ಹಂತದ ಫಲಾನುಭವಿಗಳ ಮನೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಕೆನರಾ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕರಾದ ಮಣಿ ಮೆಖಲೈ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ನಿರ್ದೇಶಕರಾದ ಜೋಸ್‌ ಜೆ. ಕಟ್ಟೂರ್‌, ಸರ್ಕಾರದ ಹಿರಿಯ ಹಾಗೂ ವಿವಿಧ ಬ್ಯಾಂಕ್‌ಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್