NEWSನಮ್ಮರಾಜ್ಯರಾಜಕೀಯವಿಜ್ಞಾನ

ಸಾರಿಗೆ ನೌಕರರ ಪ್ರತಿಭಟನೆಗೆ ಕೊನೆಗೂ ಮಣಿದ ಸರ್ಕಾರ: ಕೆಲ ಬೇಡಿಕೆಗಳ ಈಡೇರಿಕೆಗೆ ಸಮ್ಮತಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಪ್ರತಿಭಟನೆಗೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ ನೌಕರರ ಕೆಲವು ಬೇಡಿಕೆಗಳನ್ನು ಕೂಡಲೇ ನೆರವೇರಿಸಲು ಸಮ್ಮತಿ ಸೂಚಿಸಿದೆ.

ನಗದು ರಹಿತ ಚಿಕಿತ್ಸೆ ನೀಡುವ ಪದ್ಧತಿ ಜಾರಿ, ಸರ್ಕಾರಿ ಹಾಗೂ ಸರ್ಕಾರಿ ಸ್ವಯತ್ತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವೈದ್ಯಕೀಯ ವೆಚ್ಚವನ್ನು ಮರುಪಾವತಿಸುವ ಮಾದರಿಯಲ್ಲಿ ಸಿಜಿಎಚ್ಎಸ್ ದರದನ್ವಯ ಚಿಕಿತ್ಸೆ ಮರುಪಾವತಿಸಲು ಕ್ರಮ.

ಕೋವಿಡ್‌ನಿಂದ ಮೃತಪಟ್ಟ ನೌಕರರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪರಿಹಾರಕ್ಕೆ ನಿರ್ಧಾರ. ಡಿಪೋಗಳಲ್ಲಿHRMS ವ್ಯವಸ್ಥೆ ಜಾರಿ. ಅಧಿಕಾರಿಗಳ ಕಿರುಕುಳ ತಪ್ಪಿಸಲು ಆಡಳಿತ ವ್ಯವಸ್ಥೆ ಜಾರಿ ಸೇರಿದಂತೆ ಕೆಲ ಬೇಡಿಕೆಗಳನ್ನು ಈಡೇರಿಸಲು ರಾಜ್ಯಸರ್ಕಾರ ನಿರ್ಧರಿಸಿದೆ.

ಹಲವು ತಿಂಗಳುಗಳಿಂದ ರಾಜ್ಯದ ನಾಲ್ಕು ವಿಭಾಗಗಳ ಸಾರಿಗೆ ನೌಕರರಿಗೆ ಕೊರೊನಾ ಮತ್ತು ನಷ್ಟದ ನೆಪ ಹೇಳಿ ಸರ್ಕಾರ ಪೂರ್ಣ ವೇತನವನ್ನು ನೀಡಿರಲಿಲ್ಲ. ಜತೆಗೆ ಪ್ರಮುಖ ಬೇಡಿಕೆಯಾದ ನಮ್ಮನ್ನು ಸರ್ಕಾರಿ ನೌಕರರಾಗಿ ಪರಿಗಣಿಸಬೇಕು ಎಂದು ಬೇಡಿಕೆಯನ್ನು ಮುಂದಿಟ್ಟುಕೊಂಡು ನೌಕರರು ಕಳೆದ ಡಿಸೆಂಬರ್ ನಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸಿದ್ದರು.

ಅನಿರ್ದಿಷ್ಟಾವಧಿ ಮುಷ್ಕರ ಹೂಡಿದರು. ಈ ವೇಳೆ ಪ್ರಯಾಣಿಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುವಂತಾಗಿತ್ತು. ಈ ಎಲ್ಲಾ ಸಂದರ್ಭದಲ್ಲಿ ಏನುಗೊತ್ತಿಲ್ಲದಂತೆ ವರ್ತಿಸಿದ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡಂತೆ ನಟಿಸಿ ಹೋರಾಟ ನಿರತ ಸಾರಿಗೆ ನೌಕರರ ಕೆಲವು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರೂ ಸಹ ಈವರೆಗೆ ಅವುಗಳನ್ನು ಈಡೇರಿಸಲಿಲ್ಲ.

ಹೀಗಾಗಿ ಸರ್ಕಾರ ಕೊಟ್ಟ ಹುಸಿ ಭರವಸೆ ವಿರೋಧಿಸಿ ಸಾರಿಗೆ ನೌಕರರು ನಿನ್ನೆ ಮತ್ತೆ ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿ ಎದುರು ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಕೊಪ್ಪಳದಲ್ಲಿರುವ ಸಾರಿಗೆ ನೌಕರ ಮನೆಗೆ ರೇಷನ್ ತರಲು ಹಣ ಇಲ್ಲ ಎಂದು ತನ್ನ ಕಿಡ್ನಿಯನ್ನು ಮಾರಾಟಕ್ಕಿಟ್ಟಿದ್ದ ಸುದ್ದಿ ರಾಜ್ಯಾದ್ಯಂತ ದೊಡ್ಡಮಟ್ಟದಲ್ಲಿ ಸಂಚಲನ ಉಂಟುಮಾಡಿತ್ತು.

ಈ ಎಲ್ಲದರ ಜೊತೆಗೆ ಸಾರಿಗೆ ನೌಕರರ ಒತ್ತಡಕ್ಕೆ ಕೊನೆಗೂ ಮಣಿದಿರುವ ಸರಕಾರ ಅವರ ಕೆಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಮನಸ್ಸು ಮಾಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಆದರೆ ಅವರ ಪ್ರಮುಖ ಬೇಡಿಕೆಯಾಗಿರುವ ನಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಅಥವಾ ಅವರಿಗೆ ಸಮಾನವಾದ ವೇತನ ಭತ್ಯೆಯನ್ನು ನಮಗೂ ಕೊಡಿ ಎಂಬ ಬೇಡಿಕೆ ಬಗ್ಗೆ ಇನ್ನು ಚಕಾರವೆತ್ತಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಪ್ರಮುಖ ಬೇಡಿಕೆ ಈಡೇರದಿದ್ದರೆ ಮತ್ತೆ ಪ್ರತಿಭಟನೆ ಕೂರುವುದು ಖಾತರಿ ಎಂದು ನೌಕರರ ಒಕ್ಕೂಟಗಳ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್