ವಿಜಯಪಥ ಸಮಗ್ರ ಸುದ್ದಿ
ಜೇವರ್ಗಿ: ತಾಲೂಕಿನ ಜನಸಾಮಾನ್ಯರ ಸಮಸ್ಯೆಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳು ಸ್ಪಂದಿಸಿ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ವಿಪಕ್ಷ ಮುಖ್ಯ ಸಚೇತಕ ಹಾಗೂ ಶಾಸಕ ಅಜಯಸಿಂಗ ಸಲಹೆ ನೀಡಿದರು.
ಇಂದು ತಮ್ಮ ನೇತೃತ್ವದಲ್ಲಿ ಜೇವರ್ಗಿ ಪಟ್ಟಣದ ಮಿನಿ ವಿಧಾನಸೌಧ ಕಾರ್ಯಾಲಯದಲ್ಲಿ ನಡೆದ ತಾಲೂಕು ಮಟ್ಟದ ಕೆಡಿಪಿ ಸಭೆ ಮಾತನಾಡಿದರು.
ಜನಸಾಮಾನ್ಯರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಪರಿಹಾರ ನೀಡುವುದು ನಿಮ್ಮ ಜವಾಬ್ದಾರಿಯಾಗಿದೆ. ಜತೆಗೆ ಸಹಕಾರದಿಂದ ಅವರ ಕಷ್ಟವನ್ನು ಆಲಿಸಿ ಪರಿಹರಿಸಬೇಕು ಎಂದು ಹೇಳಿದರು.
ತಹಸೀಲ್ದಾರ್ ಸಿದ್ದರಾಯ ಬೋಸಗಿ, ಇಒ ವಿಲಾಸರಾಜ, ಸಮಾಜ ಕಲ್ಯಾಣ ಇಲಾಖೆಯ ಅಶೋಕ ನಾಯ್ಕ್, ಆಹಾರ ಇಲಾಖೆಯ ಡಿ. ಬಿ.ಪಾಟೀಲ, ತೋಟಗಾರಿಕೆ ಇಲಾಖೆಯ ಸುಷ್ಮಾ ಪಾಟೀಲ, ತಾಲೂಕು ವೈದ್ಯಾಧಿಕಾರಿ ಸಿದ್ದು ಪಾಟೀಲ, ಬಿಇಒ ವೆಂಕಯ್ಯ ಇನಾಮದಾರ ಮುಂತಾದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.