CrimeNEWSಕೃಷಿನಮ್ಮಜಿಲ್ಲೆ

VIJAYAPUR-ಕಡಲೆ ಮೆದೆಗೆ ದುಷ್ಕರ್ಮಿಗಳಿಂದ ಬೆಂಕಿ: 1.5 ಲಕ್ಷ ರೂ. ಮೌಲ್ಯದ ಫಸಲು ನಾಶ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ವಿಜಯಪುರ: ರೈತ ಮಹಿಳೆ ಕಷ್ಟಪಟ್ಟು ಬೆಳೆದು ಹೊಲದಲ್ಲೇ ಮೆದೆ ಹಾಕಿದ್ದ ಕಡಲೆ ರಾಶಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ನಡೆದಿದೆ.

ದುಷ್ಕರ್ಮಿಗಳ ಕೃತ್ಯದಿಂದ ಸುಮಾರು 40 ಕ್ವಿಂಟಾಲ್ ಕಡಲೆ ಸುಟ್ಟು ಭಸ್ಮವಾಗಿದೆ. ಇದರಿಂದ ಸಾಯವ್ವ ಮುನ್ನೂರ ಅವರು ಬೆಳೆದಿರುವ ಕಡಲೆ ಸಂಪೂರ್ಣವಾಗಿ ನಾಶವಾಗಿದೆ.

ರೈತ ಮಹಿಳೆ ಸಾಯವ್ವ ಅವರು ಆರು ಎಕರೆ ಜಮೀನಿನಲ್ಲಿ ಕಡಲೆ ಬೆಳೆದಿದ್ದರು. ಕಡಲೆ ಫಸಲನ್ನು ಕಟಾವು ಮಾಡಿ ಜಮೀನಿನಲ್ಲಿ ಮೆದೆ ಹಾಕಿಟ್ಟಿದ್ದರು. ಆದರೆ ದುಷ್ಕರ್ಮಿಗಳು ಕಟಾವು ಮಾಡಿಟ್ಟಿದ್ದ ಕಡಲೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಇದ್ದರಿಂದ ಒಟ್ಟು 1.5 ಲಕ್ಷ ರೂ ಫಸಲು ನಾಶವಾಗಿದೆ. ಈ ಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇನ್ನು ಕೈಗೆ ಬಂದ ತುತ್ತು ಬಾಯಿಗೆ ಬರೆದಂತಹ ಪರಿಸ್ಥಿತಿಯಿಂದ ರೈತ ಮಹಿಳೆ ಸಾಯವ್ವ ಕಂಗಾಲಾಗಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ