NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದಿರುವುದು ಯಾರ ವಿರುದ್ಧ: ಕಾಲೆಳೆದ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ? ಮರೆತುಬಿಟ್ಟಿದ್ದರೆ ನೆನಪಿಸಬಯಸುತ್ತೇನೆ. ಕೇಂದ್ರ ಮತ್ತು ರಾಜ್ಯದಲ್ಲಿರುವುದು ಭಾರತೀಯ ಜನತಾ ಪಕ್ಷದ ಸರ್ಕಾರ. ಅಲ್ಲಿನ ಪ್ರಧಾನಿ ನರೇಂದ್ರ ಮೋದಿ ಮತ್ತು ಇಲ್ಲಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಎಂದು ರಾಜ್ಯ ಬಿಜೆಪಿ ಮುಖಂಡರ ಕಾಲನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಎಳೆದಿದ್ದಾರೆ.

ಆಡಳಿತದಲ್ಲಿ ನಿಮ್ಮದೇ ಪಕ್ಷ ವಿದ್ಧರು ಸಮಸ್ಯೆಗೆ ಪರಿಹಾರ ಸಿಗಲಿಲ್ಲವೆಂದು ಬೀದಿಗಿಳಿದರೆ ಯಾರನ್ನು ನಾವು ಕೇಳಬೇಕು ಎಂದು ಸರಣಿ ಟ್ವೀಟ್‌ ಮೂಲಕ ಛೇಡಿಸಿದ್ದಾರೆ.

ಮೀಸಲಾತಿಯನ್ನು ನೇರವಾಗಿ ವಿರೋಧಿಸಲಿಕ್ಕಾಗದ ಸಂಘ ಪರಿವಾರದ ನಾಯಕರು ವಿವಾದ ಸೃಷ್ಟಿಸಿ, ಸಮುದಾಯಗಳನ್ನು ಪರಸ್ಪರ ಕಾದಾಟಕ್ಕಿಳಿಸಿ ಸಾಮಾಜಿಕ ನ್ಯಾಯದ ಹೋರಾಟದ ಹಾದಿ ತಪ್ಪಿಸುವ ಕುಟಿಲ ಕಾರಸ್ಥಾನಕ್ಕೆ ಅಮಾಯಕ ಜನತೆ ಬಲಿಯಾಗಬಾರದು ಎಂದು ಎಚ್ಚರಿಸಿದ್ದಾರೆ.

ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲ ಹಿಂದೂ, ನಾವೆಲ್ಲ ಒಂದು ಎಂದು ಹಿಂದೂ ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ? ಯಾರಾದರೂ ಉತ್ತರಿಸುವಿರಾ ಎಂದು ಪ್ರಶ್ನಿಸಿದ್ದಾರೆ.

ಮಂಡಲ್ ವರದಿಯನ್ನು ವಿರೋಧಿಸಿ ಮೈಗೆ ಬೆಂಕಿಹಚ್ಚಿಕೊಂಡವರು ಯಾರು? ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ವಿರೋಧಿಸಿ ಬೀದಿಗಿಳಿದವರು ಯಾರು? ಸ್ಥಳೀಯ ಸಂಸ್ಥೆಗಳಲ್ಲಿನ ಮೀಸಲಾತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ರಾಮಾ ಜೋಯಿಸ್ ಯಾವ ಪಕ್ಷದವರು? ಉತ್ತರಿಸುವಿರಾ ಎಂದು ರಾಜ್ಯ ಬಿಜೆಪಿ ಮುಖಂಡರಿಗೆ ಸವಾಲು ಹಾಕಿದ್ದಾರೆ.

ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದಿರುವ ರಾಜ್ಯ ಬಿಜೆಪಿ ನಾಯಕರು ಸಾಲುಸಾಲಾಗಿ ನಿಂತು ಮೀಸಲಾತಿಗಾಗಿ ಕೂಗೆಬ್ಬಿಸಿರುವುದು ಪ್ರಾಮಾಣಿಕ ಜ್ಞಾನೋದಯವೇ? ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕುತಪ್ಪಿಸುವ ಇನ್ನೊಂದು ರಾಜಕೀಯ ಷಡ್ಯಂತ್ರವೇ ಎಂದು ಪ್ರಶ್ನಿಸಿದ್ದಾರೆ.

ಈಗಿನ ಮೀಸಲಾತಿ ಬದಲಾವಣೆ-ಹೆಚ್ಚಳದ ಬೇಡಿಕೆಗೆ ತಮಿಳುನಾಡಿನ ಮಾದರಿಯಲ್ಲಿ ಕರ್ನಾಟಕದ ಮೀಸಲಾತಿಯನ್ನು ಶೇ.73ಕ್ಕೆ ಹೆಚ್ಚಿಸಬೇಕೆಂದು ಕಾಂಗ್ರೆಸ್ ಸರ್ಕಾರವೇ ಮಾಡಿರುವ ಕಾನೂನು ಮಾತ್ರ ಪರಿಹಾರ. ಅದರ ಅನುಷ್ಠಾನ ಕೇಂದ್ರದ ಬಿಜೆಪಿ ಸರ್ಕಾರದ ಕೈಯಲ್ಲಿದೆ ಎಂದು ಹೇಳಿದ್ದಾರೆ.

ಮೀಸಲಾತಿ ಹೆಚ್ಚಳಕ್ಕಾಗಿ ಆಧಾರ ಕೋರುತ್ತಿರುವ ನ್ಯಾಯಾಲಯಕ್ಕೆ ಕರ್ನಾಟಕದಲ್ಲಿ ನಡೆದಿರುವ ಸಾಮಾಜಿಕ-ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯೇ ಉತ್ತರ. ರಾಜ್ಯ ಬಿಜೆಪಿ
ಸರ್ಕಾರ ಮೀಸಲಾತಿ ಹೆಚ್ಚಳದ ಪರವಾಗಿದ್ದರೆ ಮೊದಲು ನಡೆಸಿದ್ದ ಈ ಸಮೀಕ್ಷೆಯನ್ನು ಸ್ವೀಕರಿಸಿ, ಶಿಫಾರಸುಗಳನ್ನು ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...